ಅಪರಿಚಿತನ ಜೀವ ಉಳಿಸಿ ಮಾನವೀಯತೆ ಮೆರೆದ ಈ ಇಬ್ಬರು..
ಅಪರಿಚಿತನ ಜೀವ ಉಳಿಸಿ ಮಾನವೀಯತೆ ಮೆರೆದ ಈ ಇಬ್ಬರು..

ದೊಡ್ಡಬಳ್ಳಾಪುರ, (ಏ.28); ನಗರದ ಎಪಿಎಂಸಿ ಮಾರುಕಟ್ಟೆಯ ಬಳಿ ನಿತ್ರಾಣನಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅಪರಿಚಿತ ವ್ಯಕ್ತಿಯ ಜೀವ ಉಳಿಸುವಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಮಾಧ್ಯಮ ವಕ್ತಾರ ಹಾಗೂ ನಗರ ಪೊಲೀಸ್ ಠಾಣೆ ಸಿಬ್ಬಂದಿಯೋರ್ವರು ಯಶಸ್ವಿಯಾಗಿದ್ದಾರೆ.

ಸುಮಾರು 50 ಅಪರಿಚಿತ ವ್ಯಕ್ತಿ ಏಪ್ರಿಲ್ 26 ರಿಂದ ನಗರದ ಎಪಿಎಂಸಿ ಮಾರುಕಟ್ಟೆಯ ಬಳಿ‌ ನಿತ್ರಾಣನಾಗಿ ಬಿದ್ದಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಎನ್ನಲಾಗಿದೆ.

ಈ ವಿಷಯ ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಮಾಧ್ಯಮ ವಕ್ತಾರ ಕುಂಟನಹಳ್ಳಿ ಮಂಜುನಾಥ್ ಅವರ ಗಮನಕ್ಕೆ ಬಂದಿದ್ದು, ಸ್ಥಳಕ್ಕೆ ತೆರಳಿದ್ದಾರೆ. ಅಲ್ಲದೆ ಈ ಕುರಿತು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ರೂಪೇಶ್ ಯಾದವ್ ಅವರಿಗೆ ಕರೆ ಮೂಲಕ ಮಾಹಿತಿ ನೀಡಿದ್ದು, ಇಬ್ಬರ ಶ್ರಮದ ಪರಿಣಾಮ ಆತ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾನೆ.

ಸತತ ಎರಡು ದಿನಗಳಿಂದ ಅ‌ನ್ನ ಆಹಾರವಿಲ್ಲದೆ ಬಿದ್ದಿದ್ದ ವ್ಯಕ್ತಿ ಸಾವಿನ ಕದ ತಟ್ಟಿದ್ದು ಕುಂಟನಹಳ್ಳಿ ಮಂಜುನಾಥ್ ಮತ್ತು ರೂಪೇಶ್ ಯಾದವ್ ಅವರ ಜನ ಪರ ಕಾಳಜಿಯಿಂದ ನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಲು ಸಿದ್ದನಾಗುತ್ತಿದ್ದಾನೆ.

ಮದ್ಯ ವ್ಯಸನದಿಂದಾಗಿ ನಗರದಲ್ಲಿ ಈ ರೀತಿ ಸಾವಿನ ಕದ ತಟ್ಟುತ್ತಿರುವವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ನಿಟ್ಟಿನಲ್ಲಿ ಕುಂಟನಹಳ್ಳಿ ಮಂಜುನಾಥ್ ಮತ್ತು ರೂಪೇಶ್ ಯಾದವ್ ಚಿಂತಿಸುತ್ತಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು, ಸಂಘ ಸಂಸ್ಥೆಗಳ ನೆರವಿಗೆ ಪ್ರಯತ್ನ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

literature

HL

literature

HL

education

HL

education

HL

crime

HL

politics

HL

crime

HL

health

HL

agriculture

HL

politics

HL

literature

HL

literature

HL

literature

HL

literature

HL

politics

HL

politics

HL

crime

HL

politics

HL

crime

HL

literature

HL

crime

HL

literature

HL

literature

HL

crime

HL

crime

HL

politics

HL

health

HL

crime

HL

crime

HL

politics