ಕೇಂದ್ರದ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಇನ್ನಿಲ್ಲ
ಕೇಂದ್ರದ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಇನ್ನಿಲ್ಲ

ಬೆಂಗಳೂರು, (ಏ.29): ಕೇಂದ್ರದ ಮಾಜಿ ಸಚಿವ, ಚಾಮರಾಜನಗರ ಸಂಸದ ವಿ. ಶ್ರೀನಿವಾಸ ಪ್ರಸಾದ್ (76 ವರ್ಷ) ಹೃದಯಾಘಾತದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನರಾದರು.

ಮೃತರಿಗೆ ಪತ್ನಿ ಭಾಗ್ಯಲಕ್ಷ್ಮಿ, ಪುತ್ರಿಯರಾದ ಪ್ರತಿಮಾ, ಪೂರ್ಣಿಮಾ, ಪೂನಂ ಹಾಗೂ ಅಳಿಯಂದಿರು ಇದ್ದಾರೆ.

ಮೈಸೂರಿನ ಜಯಲಕ್ಷ್ಮಿಪುರಂನ ಅವರ ನಿವಾಸಕ್ಕೆ ಮೃತದೇಹವನ್ನು ತರಲಾಗುತ್ತಿದ್ದು, ಬೆಳಿಗ್ಗೆ 8ರ ನಂತರ ಅಂತಿಮ ದರ್ಶನಕ್ಕೆ ಇಡಲಾಗುವುದು.

ಮೂತ್ರಕೋಶದ ಸೋಂಕಿನ ಕಾರಣಕ್ಕೆ ಅವರು ಏ. 22ರಂದು ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಸೋಮವಾರ ಮುಂಜಾನೆ 1.30ರ ಸುಮಾರಿಗೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

1974ರಲ್ಲಿ ಕೆ.ಆರ್. ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡುವ ಮೂಲಕ ರಾಜಕಾರಣ ಪ್ರವೇಶಿಸಿದ್ದ ಪ್ರಸಾದ್‌ ಆರು ಬಾರಿ ಸಂಸದರಾಗಿ, ಎರಡು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. 

1999ರಿಂದ 2004ರವರೆಗೆ ಕೇಂದ್ರದಲ್ಲಿ ಆಹಾರ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. 2013ರಿಂದ 2016ರವರೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಸಿಎಂ ಸಂತಾಪ: ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ.

ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ. 

ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ  ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ.

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

politics

HL

politics

HL

education

HL

crime

HL

crime

HL

education

HL

literature

HL

crime

HL

politics

HL

art

HL

literature

HL

literature

HL

crime

HL

politics

HL

economy

HL

art

HL

politics

HL

politics

HL

economy

HL

crime

HL

crime

HL

politics

HL

education

HL

literature

HL

literature

HL

education

HL

crime

HL

politics

HL

education

HL

politics