19ಜನ ಶಾಸಕರ ಭವಿಷ್ಯ ಬೇಕೋ.. ತಮ್ಮ ಕುಟುಂಬದ ರೇವಣ್ಣ, ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ; ಜೆಡಿಎಸ್ ಶಾಸಕ ಟ್ವಿಟ್
19ಜನ ಶಾಸಕರ ಭವಿಷ್ಯ ಬೇಕೋ.. ತಮ್ಮ ಕುಟುಂಬದ ರೇವಣ್ಣ, ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ; ಜೆಡಿಎಸ್ ಶಾಸಕ ಟ್ವಿಟ್

ಬೆಂಗಳೂರು, (ಏ.29): ಪ್ರಜ್ವಲ್ ರೇವಣ್ಣ ರಾಸಲೀಲೆ ವೀಡಿಯೋ ಪ್ರಕರಣದಿಂದ ಜೆಡಿಎಸ್ ಪಕ್ಷಕ್ಕೆ ಬಾರಿ ಮುಜುಗರವಾಗುತ್ತಿರುವ ಹಿನ್ನೆಲೆ ಪ್ರಜ್ವಲ್​ ರೇವಣ್ಣನನ್ನು ಪಕ್ಷದಿಂದ ಉಚ್ಚಾಟನೆ ಮಾಡುವಂತೆ ಸ್ವಪಕ್ಷದ ಶಾಸಕರಿಂದಲೇ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ. ಈ ಹಿನ್ನೆಲೆ ಮೊದಲ ಬಾರಿಗೆ ಮುಳಬಾಗಿಲು ಶಾಸಕರಾಗಿರುವ ಸಮೃದ್ದಿ ಮಂಜುನಾಥ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಇತ್ತಿಚಿನ ದಿನಗಳಲ್ಲಿ ‘ಹಾಸನದ ಲೀಲೆಗಳು’ ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿರುವುದು ಪಕ್ಷದ ಸಾಮಾನ್ಯ ಕಾರ್ಯಕ್ರತರಾಗಿ ರಾಜ್ಯದಲ್ಲೆಡೆ ಮುಜುಗರಕ್ಕೆ ಒಳಗಾಗಿರುವುದಲ್ಲದೆ ಪಕ್ಷದ ಹೆಸರು ಹೇಳಲು ಸಹ ಹೇಸಿಗೆ ಅನಿಸುವಂತ ಸ್ಥಿತಿಗೆ ತಲುಪಿದೆ.

ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದ ದಯನೀಯ ಪರಿಸ್ಥಿತಿ ಮೊದಲ ಬಾರಿಗೆ ಶಾಸಕನಾಗಿರುವ ನನಗೆ ಈ ಕಷ್ಟಕರ ಸನ್ನಿವೇಶಗಳು ಎದುರಾಗುತ್ತಿದ್ದರೆ, ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿಯಾದರೇನು ಯೋಚಿಸಿ?? ಮಾನ್ಯ ವರಿಷ್ಠರು ರಾಷ್ಟ್ರಾಧ್ಯಕ್ಷರು ಶ್ರೀ ಹೆಚ್.ಡಿ.ದೇವೇಗೌಡ ಅಪ್ಪಾಜಿ, ರಾಜ್ಯಾಧ್ಯಕ್ಷರು ಶ್ರೀ ಹೆಚ್.ಡಿ.ಕುಮಾರಣ್ಣ  ರವರು ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಾದ ಸಮಯವಿದಾಗಿದೆ.

ವಿನಂತಿಸಿಕೊಳ್ಳುವುದೇನೆಂದರೆ 19ಜನ ಶಾಸಕರ ಭವಿಷ್ಯ ಬೇಕೋ ತಮ್ಮ ಕುಟುಂಬದ ರೇವಣ್ಣರವರು ಪ್ರಜ್ವಲ್ ರವರು ಮುಖ್ಯವೋ ತೀರ್ಮಾನಿಸಬೇಕಿದೆ. 24ಗಂಟೆಗಳಲ್ಲಿ ಆರೋಪ ಹೊರಿರುವ ರೇವಣ್ಣ ಮತ್ತು ಪ್ರಜ್ವಲ್ ರವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಪಕ್ಷದ ಸಿದ್ಧಂತಗಳನ್ನು ಉಳಿಸಿ ಕಾರ್ಯಕರ್ತರನ್ನು ನಮ್ಮನ್ನು ಮುಜುಗರದಿಂದ ಪಾರು ಮಾಡಲು ಕೋರುತ್ತೇನೆ ಎಂದು ಹೇಳುವ ಮೂಲಕ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಚಾಟಿಸುಂತೆ ಮನವಿ ಮಾಡಿಕೊಂಡಿದ್ದಾರೆ.

ಇದೇ ವಿಚಾರಕ್ಕೆ ಸಂಬಂಧಿಸಿ ಗುರುಮಿಟ್ಕಲ್ ಶಾಸಕ ಶರಣಗೌಡ ಪಾಟೀಲ್ ಅವರು ತಮ್ಮ ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​.ಡಿ ದೇವೇಗೌಡ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ಪೆನ್​ಡ್ರೈವ್​ ಪ್ರಕರಣದಿಂದ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರಿಗೆ ಮುಜುಗರವಾಗುತ್ತಿದ್ದು ಪಕ್ಷದ ಹಿತಕ್ಕಾಗಿ ಈ ಕೂಡಲೇ ಪ್ರಜ್ವಲ್​ ರೇವಣ್ಣನನ್ನು ಪಕ್ಷದಿಂದ ಉಚ್ಚಾಟನೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

others

HL

literature

HL

crime

HL

crime

HL

politics

HL

politics

HL

politics

HL

politics

HL

education

HL

crime

HL

crime

HL

education

HL

literature

HL

crime

HL

politics

HL

art

HL

literature

HL

literature

HL

crime

HL

politics

HL

economy

HL

art

HL

politics

HL

politics

HL

economy

HL

crime

HL

crime

HL

politics

HL

education