ರೇವಣ್ಣ, ನನ್ನ ಕುಟುಂಬ ಬೇರೆ ಬೇರೆ: ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ
ರೇವಣ್ಣ, ನನ್ನ ಕುಟುಂಬ ಬೇರೆ ಬೇರೆ: ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ

ಶಿವಮೊಗ್ಗ, (ಏ.30): ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್ ಡ್ರೈವ್ ಪ್ರಕರಣದಲ್ಲಿ ನಮ್ಮ ಕುಟುಂಬವನ್ನು ಎಳೆತರುವುದು ಸರಿಯಲ್ಲ. ಎಚ್‌.ಡಿ.ರೇವಣ್ಣ ಕುಟುಂಬ ಮತ್ತು ನನ್ನ ಕುಟುಂಬ ಅನೇಕ ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದೆ. ಅವರು ಏನೇ ಮಾಡಿದರೂ ಅದಕ್ಕೆ ನಾನು ಜವಾಬ್ದಾರಿಯೂ ಅಲ್ಲ, ಪ್ರತಿಕ್ರಿಯಿಸಬೇಕಾಗಿಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇದು ಒಬ್ಬ ವ್ಯಕ್ತಿಗೆ ಸಂಬಂಧಿಸಿದ್ದು. ಈ ವಿಷಯದಲ್ಲಿ ದೇವೇಗೌಡ, ಕುಮಾರಸ್ವಾಮಿ ಹೆಸರು ಎಳೆತರುವುದು ಸರಿಯಲ್ಲ. ನನ್ನ ಮತ್ತು ದೇವೇಗೌಡರಿಗೆ ಸಂಬಂಧಿಸಿದ್ದಾಗಿದ್ದರೆ ನಮ್ಮ ಕುಟುಂಬ ಎಂದು ನಾನು ಉತ್ತರಿಸಬಹುದಿತ್ತು. ಇದು ನನಗೆ ಅಥವಾ ನಮ್ಮ ಕುಟುಂಬಕ್ಕೆ ಮಾತ್ರವಲ್ಲ ಇಡೀ ಸಮಾಜಕ್ಕೆ ಮುಜುಗರ ತರುವ ವಿಷಯ ಎಂದು ಹೇಳಿದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರ ಎಸ್‌ಐಟಿ ರಚಿಸಿದೆ. ಇದರ ತನಿಖಾ ವರದಿ ಬರಲಿ. ಆ ಬಳಿಕ ನೋಡೋಣ. ಈ ನೆಲದ ಕಾನೂನು ತನ್ನದೇ ಆದ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಇದಕ್ಕೆ ಎಲ್ಲರೂ ತಲೆಬಾಗಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ನಾನೀಗಲೇ ಹೇಳಿದ್ದೇನೆ.ಈವಿಷಯದಲ್ಲಿಯಾರನ್ನೂ ರಕ್ಷಿಸುವುದಾಗಲಿ, ಯಾವ ರೀತಿಯಲ್ಲೂ ವಹಿಸಿಕೊಳ್ಳುವ ಪ್ರಶ್ನೆಯಾಗಲಿ ಇಲ್ಲ ಎಂದರು.

ಇದೇ ವೇಳೆ ಇದರ ಹಿಂದೆ ರಾಜಕೀಯ ಷಡ್ಯಂತ್ರವಿದೆಯೇ ಎಂಬ ಪ್ರಶ್ನೆಗೆ, ಇರಬಹುದು. ಚುನಾವಣೆಗೆ ಮೂರು ದಿನ ಇರುವಾಗ ಈ ರೀತಿ ಪೆನ್ ಡ್ರೈವ್ ಹಂಚಲು ಕಾರಣ ಯಾರು? ಯಾಕಾಗಿ ಹಂಚಿದರು ಎಂದು ಪ್ರಶ್ನಿಸಿದರು.

ಪ್ರಜ್ವಲ್ ವಿದೇಶಕ್ಕೆ ಹೋಗಿದ್ದಾರೆಂಬ ವಿಷಯ ಕುರಿತು, ನನಗೆ ಹೇಗೆ ಮಾಹಿತಿ ಇರಲು ಸಾಧ್ಯ? ಸರ್ಕಾರಕ್ಕೆ ಗೊತ್ತಿರಬೇಕು. ಸರ್ಕಾರ ಈ ವಿಷಯದಲ್ಲಿ ಮಾಹಿತಿ ನೀಡಬೇಕು. ಅವನೇನು ನಿತ್ಯ ಎಲ್ಲಿಗೆ ಹೋಗುತ್ತಾನೆ ಎಂದು ನನಗೆ ಹೇಳಿ ಹೋಗುತ್ತಾನೇನು ಎಂದು ಖಾರವಾಗಿ ಪ್ರಶ್ನಿಸಿದರು.

ಇಷ್ಟು ವರ್ಷ ಸುಮ್ಮನಿದ್ದು ಈಗ ಏಕೆ ದೂರು?: ತನ್ನ ಮೇಲೆ ಎಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರು ದಾಖಲಿಸಿರುವ ಸಂತ್ರಸ್ತ ಮಹಿಳೆಯ ಅತ್ತೆಯೇ ಇದೀಗ ರೇವಣ್ಣ ಹಾಗೂ ಪ್ರಜ್ವಲ್ ಪರ ನಿಂತಿದ್ದು, ತನ್ನ ಸೊಸೆಯೇ ಸರಿಯಿಲ್ಲ. ರೇವಣ್ಣ, ಪ್ರಜ್ವಲ್ ಹಾಗೂ ಭವಾನಿ ಅಕ್ಕನವರು ದೇವರಿದ್ದಂತೆ ಎಂದು ಹೇಳಿದ್ದಾರೆ.

ಸೋಮವಾರ ಮಾತನಾಡಿದ ಸಂತ್ರಸ್ತ ಮಹಿಳೆಯ ಅತ್ತೆ ಗೌರಮ್ಮ (ಪತಿಯ ತಾಯಿ), 'ಭವಾನಿ ರೇವಣ್ಣ ಅವರ ಮನೆಯಲ್ಲಿ 4 ವರ್ಷ ಸೊಸೆ ಮನೆ ಕೆಲಸ ಮಾಡಿದ್ದಾರೆ. ಆ ಸಮಯದಲ್ಲಿ ಆಕೆಯನ್ನು ಭವಾನಿ, ರೇವಣ್ಣ ಹಾಗೂ ಪ್ರಜ್ವಲ್ ಚೆನ್ನಾಗಿ ನೋಡಿಕೊಂಡಿದ್ದಾರೆ. ಆದರೆ, ಇದ್ದಕ್ಕಿದ್ದಂತೆ ಅವರ ಮನೆಯಲ್ಲಿ ಕೆಲಸ ಬಿಟ್ಟು ಹೋಗಿದ್ದಾಳೆ. 

ಅದಾದ ಬಳಿಕ ಇಷ್ಟು ದಿನ ಕಳೆದರೂ ದೂರು ನೀಡದ ಮಹಿಳೆ, ಚುನಾವಣೆ ವೇಳೆ ಯಾರದೋ ಮಾತು ಕೇಳಿಕೊಂಡು ದೇವೇಗೌಡರ ಕುಟುಂಬದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿ ದ್ದಾಳೆ. ಹಿಂದೆಯೇ ಆರೋಪಿಸಬಹುದಿತ್ತು' ಎಂದು ದೂರಿದರು.

ಎಸ್‌ಐಟಿ ಕರೆದರೆ ಪ್ರಜ್ವಲ್ ಬರ್ತಾರೆ: ಸಂಸದ ಮತ್ತು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣವು ನಾಲೈದು ವರ್ಷದ ಹಿಂದಿನ ಕಥೆ. ಅದನ್ನು ತಂದು ಈಗ ದೂರು ನೀಡಲಾಗಿದೆ. ಇದೆಲ್ಲವೂ ರಾಜಕೀಯ

ಪ್ರೇರಿತ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಸೋಮವಾರ ಪದ್ಮನಾಭನಗರದಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣವಿದೇಶಕ್ಕೆ ಹೋಗುವುದು ಮೊದಲೇ ನಿರ್ಧಾರವಾಗಿತ್ತು. ಅವರಿಗೆ ಪ್ರಕರಣವನ್ನು ಎಸ್‌ಐಟಿಗೆ ವಹಿಸುವುದಾಗಲೀ, ಎಫ್‌ಐಆ‌ರ್ ದಾಖಲಿಸುವುದಾಗಲೀ ಗೊತ್ತಿರಲಿಲ್ಲ.

ರಾಜ್ಯ ಸರ್ಕಾರ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಕಾನೂನು ರೀತಿ ತನಿಖೆ ಮಾಡಲಿ. ಎಸ್‌ಐಟಿಯವರು ಕರೆದರೆ ಪ್ರಜ್ವಲ್ ಹಾಜರಾಗುತ್ತಾರೆ. ನಾಲೈದುವರ್ಷದಹಿಂದಿನಕಥೆಯನ್ನು ತಂದು ಈಗ ದೂರು ನೀಡಲಾಗಿದೆ. ಇದೆಲ್ಲವೂ ರಾಜಕೀಯ ಪ್ರೇರಿತ ಎಂದು ತಿಳಿಸಿದರು.

ಕಳೆದ 40 ವರ್ಷಗಳಿಂದಲೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಸಿಓಡಿ, ಲೋಕಾಯುಕ್ತ ಸೇರಿದಂತೆ ಹಲವು ತನಿಖೆಗಳು ನಡೆದಿದ್ದು, ತನಿಖೆಗಳನ್ನು ನಾವು ಎದುರಿಸಿದ್ದೇವೆ. ಪ್ರಜ್ವಲ್ ಪ್ರಕರಣವನ್ನು ಕಾನೂನು ಹೋರಾಟ ಮೂಲಕ ಎದುರಿಸುತ್ತೇವೆ. ತಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ನಡೆದಿದ್ದು, ಇದಕ್ಕೆಲ್ಲಾ ಹೆದರುವುದಿಲ್ಲ. 

ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ವಿಚಾರವನ್ನು ದೇವೇಗೌಡರ ಬಳಿ ತಾವು ಪ್ರಸ್ತಾಪಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ದೂರು ನೀಡಿದ ಸಂತ್ರಸ್ತೆ ವಿಚಾರಣೆ: ಇನ್ನು ಹಾಸನ ಸಂಸದ ಪ್ರಜ್ವಲ್ ಹಾಗೂ ಅವರ ತಂದೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಸಂತ್ರಸ್ತೆಯನ್ನು ಎಸ್‌ಐಟಿ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದೆ.

ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ತಂದೆ-ಮಗನ ಮೇಲೆ ಲೈಂಗಿಕ ಕಿರುಕುಳ ಆರೋಪದಡಿ ಎಫ್‌ಐಆರ್ ದಾಖಲಾಗಿತ್ತು. 

ಈ ಹಿನ್ನೆಲೆಯಲ್ಲಿ ಸಂತ್ರಸ್ತೆಯನ್ನು ಕರೆಸಿ ಪ್ರಾಥಮಿಕ ಹಂತದ ಮಾಹಿತಿಯನ್ನು ಎಸ್ ಐಟಿ ಪಡೆದುಕೊಂಡಿದ್ದು, ಮತ್ತೆ ವಿಚಾರಣೆಗೆ ಹಾಜರಾಗುವಂತೆ ಆಕೆಗೆ ಸೂಚಿಸಿ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

crime

HL

crime

HL

crime

HL

agriculture

HL

agriculture

HL

others

HL

economy

HL

politics

HL

others

HL

literature

HL

crime

HL

politics

HL

politics

HL

crime

HL

crime

HL

crime

HL

crime

HL

politics

HL

politics

HL

politics

HL

economy

HL

crime

HL

crime

HL

crime

HL

politics

HL

agriculture

HL

crime

HL

crime

HL

crime