ಮಾತೃಶಕ್ತಿಗೆ ಮಾಡಿದ ಅವಮಾನವನ್ನು ಸಹಿಸಲ್ಲ.. ಪ್ರಜ್ವಲ್ ರೇವಣ್ಣ ವಿರುದ್ಧ ಗುಡುಗಿದ ಅಮಿತ್ ಶಾ..!
ಮಾತೃಶಕ್ತಿಗೆ ಮಾಡಿದ ಅವಮಾನವನ್ನು ಸಹಿಸಲ್ಲ.. ಪ್ರಜ್ವಲ್ ರೇವಣ್ಣ ವಿರುದ್ಧ ಗುಡುಗಿದ ಅಮಿತ್ ಶಾ..!

ಗುವಾಹಾಟಿ, (ಏ.30); ನಾವು ದೇಶದ ಮಾತೃಶಕ್ತಿಯೊಂದಿಗಿದ್ದೇವೆ, ಮಹಿಳಾ ಶಕ್ತಿಯೊಂದಿಗೆ ನಿಲ್ಲುತ್ತೇವೆ ಎಂಬುದು ಭಾರತೀಯ ಜನತಾ ಪಕ್ಷದ ನಿಲುವು ಸ್ಪಷ್ಟವಾಗಿದೆ. ಮಾತೃಶಕ್ತಿಗೆ ಮಾಡಿದ ಅವಮಾನವನ್ನು ಎಂದೂ ಸಹಿಸುವುದಿಲ್ಲ ಎಂಬ ಬದ್ಧತೆಯನ್ನು ನರೇಂದ್ರ ಮೋದಿಯವರು ಹೊಂದಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಅಸ್ಸಾಂನ ಗುವಾಹಾಟಿಯಲ್ಲಿ ಮಾತನಾಡಿರುವ ಅವರು, ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ವಿವಾದದಲ್ಲಿ ಸಿಲುಕಿರುವ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ‌

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು, ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮಹಿಳೆಯರನ್ನು ಅವಮಾನಿಸಬಾರದು. ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದೆ, ಅವರು ಇನ್ನೂ ಏಕೆ ಕ್ರಮ ಕೈಗೊಂಡಿಲ್ಲ? ಜೆಡಿಎಸ್ ಕೂಡ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ನಮ್ಮ ಮೇಲೆ ಆರೋಪ ಮಾಡಲು ಹೊರಟಿರುವ ಕಾಂಗ್ರೆಸ್ ಪಕ್ಷಕ್ಕೆ ನಾನೊಂದು ಸಣ್ಣ ವಿಚಾರವನ್ನು ಕೇಳಬಯಸುತ್ತೇನೆ, ಅಲ್ಲಿ ಯಾವ ಸರ್ಕಾರವಿದೆ. ಇದುವರೆಗೂ ಏಕೆ ಕ್ರಮ ಕೈಗೊಂಡಿಲ್ಲ? ಕಾನೂನು ಸುವ್ಯವಸ್ಥೆಯ ವಿಷಯ ರಾಜ್ಯ ಸರ್ಕಾರಕ್ಕೆ ಸೇರಿದ್ದು. 

ನಾನು ಪ್ರಿಯಾಂಕಾ ಗಾಂಧಿಗೆ ಹೇಳಲು ಬಯಸುತ್ತೇನೆ, ನಮ್ಮನ್ನು ಪ್ರಶ್ನಿಸುವ ಬದಲು ಅವರು ತಮ್ಮ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಬಳಿ ಏಕೆ ತನಿಖೆ ನಡೆಸುತ್ತಿಲ್ಲ ಎಂದು ಕೇಳಲಿ ಎಂದು ಹೇಳಿದ್ದಾರೆ.

ನಾವು ತನಿಖೆಯ ಪರವಾಗಿದ್ದೇವೆ ಮತ್ತು ನಮ್ಮ ಮಿತ್ರ ಪಕ್ಷ ಜೆಡಿಎಸ್ ಕೂಡ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

others

HL

literature

HL

crime

HL

crime

HL

politics

HL

politics

HL

politics

HL

politics

HL

education

HL

crime

HL

crime

HL

education

HL

literature

HL

crime

HL

politics

HL

art

HL

literature

HL

literature

HL

crime

HL

politics

HL

economy

HL

art

HL

politics

HL

politics

HL

economy

HL

crime

HL

crime

HL

politics

HL

education