ಉಚಿತ ಮೊಬೈಲ್‌ ರಿಪೇರಿ, ಸೇವೆ ತರಬೇತಿಗೆ ಮೇ.8 ರಂದು ನೇರ ಸಂದರ್ಶನ
ಉಚಿತ ಮೊಬೈಲ್‌ ರಿಪೇರಿ, ಸೇವೆ ತರಬೇತಿಗೆ ಮೇ.8 ರಂದು ನೇರ ಸಂದರ್ಶನ

ಬೆಂ.ಗ್ರಾ‌.ಜಿಲ್ಲೆ, (ಏ.30); ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್‌ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಗೆ ಮೇ 8 ರಂದು ನೇರ ಸಂದರ್ಶನವನ್ನು ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. 

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

others

HL

others

HL

politics

HL

crime

HL

politics

HL

politics

HL

crime

HL

politics

HL

crime

HL

crime

HL

literature

HL

crime

HL

crime

HL

politics

HL

literature

HL

politics

HL

others

HL

literature

HL

crime

HL

crime

HL

politics

HL

politics

HL

politics

HL

politics

HL

education

HL

crime

HL

crime

HL

education

HL

literature

HL

crime