ಕೋವಿಶೀಲ್ಡ್ ಪಡೆಯದಂತೆ ಅಪ್ಪುಗೆ ಅಭಿಮಾನಿ ಸಲಹೆ; ಹಳೆಯ ಪೋಸ್ಟ್ ವೈರಲ್.. ಭಾರೀ ಚರ್ಚೆ
ಕೋವಿಶೀಲ್ಡ್ ಪಡೆಯದಂತೆ ಅಪ್ಪುಗೆ ಅಭಿಮಾನಿ ಸಲಹೆ; ಹಳೆಯ ಪೋಸ್ಟ್ ವೈರಲ್.. ಭಾರೀ ಚರ್ಚೆ

ಬೆಂಗಳೂರು, (ಮೇ.03); 2019-21ರ ಅವಧಿಯಲ್ಲಿ ಇಡೀ ಜಗತ್ತನ್ನು ಕಾಡಿದ ಕೋವಿಡ್ ಮಹಾಮಾರಿ ತಡೆಗೆ ತಾನು ಅಭಿವೃದ್ಧಿಪಡಿಸಿದ್ದ ಕೋವಿಡ್ ಲಸಿಕೆಯು ಅಪರೂಪದ ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು ಎಂದು ಬ್ರಿಟನ್ ಮೂಲದ ಆಸ್ಟ್ರಾಜೆನಿಕಾ ಮೊದಲ ಬಾರಿಗೆ ಒಪ್ಪಿಕೊಂಡಿದೆ.

ಭಾರತದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮದ ನಂತರ ಯುವಕರು, ಮಧ್ಯವಯಸ್ಕರು ಕುಸಿದುಬಿದ್ದು ಮೃತಪಡುವ ಘಟನೆಗಳು ಹೆಚ್ಚಾದವು. ಲಸಿಕೆಯ ಅಡ್ಡಪರಿಣಾಮದಿಂದಲೇ ಹೀಗಾಗುತ್ತಿದೆ ಎಂದು ಹಲವು ತಜ್ಞರು ಹೇಳಿದ್ದರು. ಆದರೆ ಕೇಂದ್ರ ಸರ್ಕಾರವು ಇದನ್ನು ನಿರಾಕರಿಸುತ್ತಲೇ ಇತ್ತು. 

ಆದರೆ ಈಗ ಕೋವಿಡ್ ಲಸಿಕೆ-ಕೋವಿಶೀಲ್ಡ್ ಅನ್ನು ಅಭಿವೃದ್ಧಿಪಡಿಸಿದ್ದ ಕಂಪನಿಯೇ, ಆ ಲಸಿಕೆಯಿಂದ ಮಾರಣಾಂತಿಕ ಅಡ್ಡಪರಿಣಾಮ ಉಂಟಾಗುತ್ತದೆ ಎಂದು ಲಂಡನ್‌ ನ್ಯಾಯಾಲಯದ ಎದುರು ಒಪ್ಪಿಕೊಂಡಿದೆ. 

ಭಾರತದಲ್ಲಿ ಸುಮಾರು 80 ಕೋಟಿ ಜನರಿಗೆ ಈ ಕೋವಿಶೀಲ್ಡ್ ಲಸಿಕೆ ನೀಡಲಾಗಿದ್ದು, ಈ ವರದಿ ಬೆನ್ನಲ್ಲೆ ಭಾರೀ ಚರ್ಚೆಗೆ ಕಾರಣವಾಗಿದೆ. ಕೊರೊನಾ ಲಸಿಕೆ ತೆಗೆದುಕೊಂಡ ಬಳಿಕ ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಈಗ ಎರಡನ್ನೂ ಲಿಂಕ್ ಮಾಡುವ ಕೆಲಸ ಆಗುತ್ತಿದೆ. ಈ ಮಧ್ಯೆ ಪುನೀತ್ ರಾಜ್​ಕುಮಾರ್ ಕುರಿತ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪುನೀತ್ ರಾಜ್​ಕುಮಾರ್ ಅವರು 2021ರ ಏಪ್ರಿಲ್ 7ರಂದು ವ್ಯಾಕ್ಸಿನ್ ಪಡೆದಿದ್ದಾಗಿ ಪೋಸ್ಟ್ ಮಾಡಿದ್ದರು. ಇದಕ್ಕೆ ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದರು. ಈ ಲಸಿಕೆ ಪಡೆಯಬೇಡಿ ಎಂದು ಅವರು ಪುನೀತ್ ಬಳಿ ವಿಶೇಷ ಮನವಿ ಒಂದನ್ನು ಮಾಡಿಕೊಂಡಿದ್ದರು.

ಪುನೀತ್ ರಾಜ್​ಕುಮಾರ್ ಅವರು 2021ರ ಏಪ್ರಿಲ್ 7ರಂದು ವ್ಯಾಕ್ಸಿನ್ ಪಡೆದಿದ್ದಾಗಿ ಪೋಸ್ಟ್ ಮಾಡಿದ್ದರು. ‘ನೀವು 45 ವರ್ಷ ಮೇಲ್ಪಟ್ಟಿದ್ದರೆ ವ್ಯಾಕ್ಸಿನ್ ಹಾಕಿಸಿಕೊಳ್ಳಿ’ ಎಂದು ಮನವಿ ಮಾಡಿದ್ದರು. ಇದಕ್ಕೆ ಬೃಂದಾವನಾ ಹೆಸರಿ ಖಾತೆಯಿಂದ ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದರು. 

‘ಕೋವಿಶೀಲ್ಡ್ ತೆಗೆದುಕೊಳ್ಳಬೇಡಿ. 45 ವರ್ಷ ಮೇಲ್ಪಟ್ಟವರಿಗೆ ಇದು ಒಳ್ಳೆಯದಲ್ಲ’ ಎಂದು ಬರೆಯಲಾಗಿತ್ತು. ಸದ್ಯ ಈ ಪೋಸ್ಟ್ ಮತ್ತೆ ವೈರಲ್ ಆಗುತ್ತಿದೆ. ಕೋವಿಶೀಲ್ಡ್​ನಿಂದಲೇ ಪುನೀತ್ ಅವರ ರಕ್ತನಾಳದಲ್ಲಿ ಬ್ಲಡ್ ಕ್ಲಾಟ್ ಆಯಿತೇ ಎನ್ನುವ ಪ್ರಶ್ನೆ ಮೂಡಿದೆ.

ಪುನೀತ್ ರಾಜ್​ಕುಮಾರ್ ಅವರು 2021ರ ಅಕ್ಟೋಬರ್ 29ರಂದು ನಿಧನ ಹೊಂದಿದರು. ಅವರು ಹೃದಯಾಘಾತಕ್ಕೆ ಒಳಪಟ್ಟು ಮೃತಪಟ್ಟರು. ಸಖತ್ ಫಿಟ್ ಆಗಿದ್ದ ಅವರು ನಿಧನ ಹೊಂದುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಈಗ ಕೋವಿಶೀಲ್ಡ್ ತೆಗೆದುಕೊಂಡಿದ್ದರಿಂದಲೇ ಪುನೀತ್​ಗೆ ಹೃದಯಾಘಾತ ಆಯಿತು ಎಂದು ಕೆಲವರು ಆರೋಪಿಸಿದ್ದಾರೆ.

ಆಸ್ಟ್ರಾಜೆನೆಕಾ ಕೋವಿಶೀಲ್ಡ್‌ ಹೆಸರಲ್ಲಿ ಲಸಿಕೆಯನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ. ಹೀಗಾಗಿ, ಈ ಬಗ್ಗೆ ಚರ್ಚೆ ಜೋರಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

crime

HL

others

HL

others

HL

others

HL

politics

HL

crime

HL

politics

HL

politics

HL

crime

HL

politics

HL

crime

HL

crime

HL

literature

HL

crime

HL

crime

HL

politics

HL

literature

HL

politics

HL

others

HL

literature

HL

crime

HL

crime

HL

politics

HL

politics

HL

politics

HL

politics

HL

education

HL

crime

HL

crime