ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ
ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗದಗ, (ಮೇ.03): ಲೋಕಸಭೆ ಚುನಾವಣೆ ಪಕ್ಷದ ಪ್ರಕೋಷ್ಟಗಳಿಗೂ ಪರೀಕ್ಷೆಯಾಗಿದ್ದು, ಎಲ್ಲ ಪ್ರಕೋಷ್ಠಗಳು ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಶ್ರಮಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಗದಗನಲ್ಲಿ ರಾಜ್ಯ ಬಿಜೆಪಿ ವಿವಿಧ ಪ್ರಕೋಷ್ಟಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಒಂದು ದೇಶ, ರಾಜ್ಯ  ಅಭಿವೃದ್ಧಿ ಹೊಂದಬೇಕೆಂದರೆ ಎಲ್ಲ ವೃತ್ತಿಯವರು ಕೆಲಸ ಮಾಡಿದಾಗ ಮಾತ್ರ ಸಾಧ್ಯ. ಸರ್ಕಾರ ಮತ್ತು ಎಲ್ಲ ವೃತ್ತಿ ಬಾಂಧವರ ನಡುವೆ ಸೇತುವೆಯಾಗಿ ಕೆಲಸ ಮಾಡಲು ಪ್ರಕೋಷ್ಠಗಳನ್ನು ಮಾಡಿದೆ. ಎಲ್ಲ ಪ್ರಕೋಷ್ಠಗಳು ಸಕ್ರೀಯವಾಗಿ ಕೆಲಸ ಮಾಡಿ, ಪಕ್ಷಕ್ಕೆ ಹೆಚ್ಚಿನ ಮತ ಹಾಕುವಂತೆ ನೋಡಿಕೊಳ್ಳಬೇಕು ಎಂದರು. 

ಈ ರೀತಿಯ ಪ್ರಕೋಷ್ಠಗಳು ಬೇರೆ ಪಕ್ಷದಲ್ಲಿ ಇಲ್ಲ. ಅವರು ನಿಮ್ಮ ವೃತ್ತಿಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಉದಾಹರಣೆಗೆ ವೈದ್ಯರ ಪ್ರಕೊಷ್ಠ ವೈದ್ಯರ ಸಮಸ್ಯೆ ಇದ್ದಾಗ ಅದನ್ನು ನಮ್ಮ ಪ್ರಕೊಷ್ಠ ವಿವರವಾಗಿ ಸರ್ಕಾರಕ್ಕೆ ಮಾಹಿತಿ ನೀಡಬೇಕು. ಬಿಜೆಪಿ ಗೆದ್ದರೆ ನಿಮ್ಮ ವೃತ್ತಿಗಳು ಸುರಕ್ಷಿತವಾಗಿರುತ್ತವೆ.

ನರೇಂದ್ರ ಮೋದಿಯವರು ಎಲ್ಲರ ಬಗ್ಗೆ ಯೋಚಿಸುತ್ತಾರೆ. ಅವರು ಬೀದಿ ಬದಿ ವ್ಯಾಪಾರಿಗಳ ಬಗ್ಗೆ ಚಿಂತನೆ ಮಾಡಿ ಅವರಿಗೆ ಆರ್ಥಿಕ ನೆರವು ನೀಡಿದರು‌. ಸುಮಾರು 18 ವೃತ್ತಿಗಳಿಗೆ ನೆರವು ನೀಡುವ ವಿಶ್ವ ಕರ್ಮ ಯೊಜನೆ ಜಾರಿ ಮಾಡಿದರು.

ಎಪಿಎಂಸಿ ವ್ಯಾಪಾರಸ್ಥರು, ಮೀನುಗಾರರು, ವಿದೇಶಿ ಕಂಪನಿಗಳ ದಾಳಿಯಾದಾಗ ಸಣ್ಣ ವ್ಯಾಪಾರಸ್ಥರನ್ನು ರಕ್ಷಣೆಯನ್ನು ಬಿಜೆಪಿ ಮಾಡಿದೆ. ಈ ಚುನಾವಣೆ ಪ್ರಕೋಷ್ಠಗಳಿಗೂ ಪರೀಕ್ಷೆ. ಮೋದಿಯವರ ಅಲೆ ಇದೆ. ದೊಡ್ಡ ಅಂತರದಲ್ಲಿ ಗೆಲುವು ಸಾಧಿಸುವುದು ಖಚಿತ. ಅದಕ್ಕಾಗಿ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ಹೇಳಿದರು.

ಸಭೆಯಲ್ಲಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ದತ್ತಾತ್ರೆಯ, ವಿಧಾನ ಪರಿಷತ್ ಸದಸ್ಯ ಎಸ್. ವಿ. ಸಂಕನೂರು, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

politics

HL

crime

HL

others

HL

others

HL

others

HL

politics

HL

crime

HL

politics

HL

politics

HL

crime

HL

politics

HL

crime

HL

crime

HL

literature

HL

crime

HL

crime

HL

politics

HL

literature

HL

politics

HL

others

HL

literature

HL

crime

HL

crime

HL

politics

HL

politics

HL

politics

HL

politics

HL

education

HL

crime