ಬೆಂಗಳೂರು, (ಮೇ.05); ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸಿದ್ದಾರೆ. ಯಾವುದೇ ಪುರಾವೆ ಇಲ್ಲ, ದುರುದ್ದೇಶದಿಂದ ಅರೆಸ್ಟ್ ಮಾಡಿದ್ದಾರೆ ಎಂದು ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರು ಆರೋಪಿಸಿದ್ದಾರೆ.
ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಬಳಿ ಆರೋಗ್ಯ ತಪಾಸಣೆಗೆ ಬಂದಿದ್ದ ಹೆಚ್.ಡಿ.ರೇವಣ್ಣ ಸುದ್ದಿಗಾರರೊಂದಿಗೆ ಮಾತನಾಡಿದರು.
ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸಿದ್ದಾರೆ. ಯಾವುದೇ ಪುರಾವೆ ಇಲ್ಲ, ದುರುದ್ದೇಶದಿಂದ ಅರೆಸ್ಟ್ ಮಾಡಿದ್ದಾರೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ.
ನನ್ನ 40 ವರ್ಷದ ರಾಜಕೀಯದಲ್ಲಿ ಯಾವುದೇ ಕಪ್ಪುಚುಕ್ಕೆಯಿಲ್ಲ. ಇದು ದುರುದ್ದೇಷಪೂರಿತ. ಏಪ್ರಿಲ್ 28ರಂದು ನನ್ನ ಮೇಲೆ ಆರೋಪ ಹೊರಿಸಿ ಪ್ರಕರಣ ದಾಖಲಿಸಲಾಗಿದೆ. ಅದರಲ್ಲಿ ಯಾವುದೇ ಪುರಾವೆಯಿಲ್ಲದೆ ಮೇ 2ರಂದು ಅಪಹರಣ ಪ್ರಕರಣ ದಾಖಲಿಸಿದ್ದಾರೆ.
ರಾಜ್ಯ ರಾಜಕೀಯ ಇತಿಹಾಸದಲ್ಲೇ ಇದೊಂದು ದೊಡ್ಡ ರಾಜಕೀಯ ಷಡ್ಯಂತ್ರ. ನನಗೆ ಇದನ್ನ ಎದುರಿಸುವ ಶಕ್ತಿಯಿದೆ. ನಾನು ಎಲ್ಲವನ್ನ ಹೇಳುತ್ತೇನೆ. ಈಗಲೇ ಏನನ್ನೂ ಮಾತನಾಡಲ್ಲ ಎಂದು ಅವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಹೆಚ್ಚು ಮಾತನಾಡಲು ಬಿಡದೆ ಆಸ್ಪತ್ರೆ ಒಳಗೆ ಕರೆದೊಯ್ದರು. ಈ ಸಂದರ್ಭದಲ್ಲಿ ತಳ್ಳಾಟ, ನೂಕಾಟ ಉಂಟಾಯಿತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
politics
sports
others
literature
sports
literature
sports
agriculture
crime
politics
politics
politics
crime
politics
health
education
education
crime
politics
crime
crime
others
politics
crime
others
others
others
politics
crime
politics