ಹಾಸನ ಅಶ್ಲೀಲ ಪೆನ್ ಡ್ರೈವ್ ಪ್ರಕರಣ; ರೇವಣ್ಣ, ಪ್ರಜ್ವಲ್ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಆಕ್ರೋಶ, ಪ್ರತಿಭಟನೆ
ಹಾಸನ ಅಶ್ಲೀಲ ಪೆನ್ ಡ್ರೈವ್ ಪ್ರಕರಣ; ರೇವಣ್ಣ, ಪ್ರಜ್ವಲ್ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಆಕ್ರೋಶ, ಪ್ರತಿಭಟನೆ

ದೊಡ್ಡಬಳ್ಳಾಪುರ, (ಮೇ.06); ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಶಾಸಕ ಎಚ್.ಡಿ.ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಂಚಿದವರನ್ನು ಕೂಡಲೇ ಬಂಧಿಸಿ ಹಾಗೂ ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ಥ ಮಹಿಳೆಯರ ಗೌಪ್ಯತೆ ಕಾಪಾಡಬೇಕೆಂದು ಒತ್ತಾಯಿಸಿ, ಸಂವಿಧಾನ ರಕ್ಷಣೆಗಾಗಿ ನಾಗರಿಕರ ವೇದಿಕೆ ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ವೇದಿಕೆಯ ಸಂಚಾಲಕ ಆರ್.ಚಂದ್ರತೇಜಸ್ವಿ, ಶಾಸಕ ಎಚ್.ಡಿ.ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ಕಿರುಕುಳದ ಆರೋಪ ಹೊತ್ತಿದ್ದಾರೆ. ಪ್ರಜ್ವಲ್ ರೇವಣ್ಣನಿಂದ ಅತ್ಯಾಚಾರಕ್ಕೆ ಒಳಗಾಗಿರುವ ಸಂತ್ರಸ್ಥ ಮಹಿಳೆಯನ್ನು ಅಪಹರಿಸಿರುವ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಎಚ್.ಡಿ.ರೇವಣ್ಣ ಅವರನ್ನು ಬಂಧಿಸಿರುವುದು ಸಮಾಧಾನದ ವಿಷಯವಾಗಿದೆ. ಆದರೆ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು  ಬಂಧಿಸದಿರುವುದು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳ ನಾಶ ಹಾಗೂ ಸಂತ್ರಸ್ಥೆಯರ ಮೇಲೆ ಒತ್ತಡ ಮತ್ತು ಪ್ರಭಾವ ಬೀರಲು ಸರ್ಕಾರವೇ ಅವಕಾಶ ನೀಡಿದಂತಾಗಿದೆ. 

ಎಂತಹುದೇ ಸಂದರ್ಭದಲ್ಲಿಯೂ ಸಂತ್ರಸ್ಥೆಯರ ಗುರುತುಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸದಂತೆ ಹಾಗೂ ಸಂತ್ರಸ್ಥೆಯರ ಗುರುತುಗಳ ಗೌಪ್ಯತೆ ಕಾಪಾಡಿಕೊಳ್ಳುವಂತೆ ಸರ್ಕಾರ ಮತ್ತು ಎಸಐಟಿ ತೀವ್ರ ನಿಗಾ ವಹಿಸಬೇಕಿದೆ.

ದೌರ್ಜನ್ಯ ಪ್ರಕರಣವನ್ನು ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೇಸ್ ಪಕ್ಷಗಳು ತನ್ನ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿ ಪ್ರಕರಣದ ತೀವ್ರತೆಯನ್ನು ದಿಕ್ಕುತಪ್ಪಿಸುವ ಬದಲು ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವ ಸಂತ್ರಸ್ಥ ಮಹಿಳೆಯರ ಪರವಾಗಿ ನಿಲ್ಲಬೇಕೆಂದು ನಾಗರಿಕರ ಪರವಾಗಿ ಆಗ್ರಹಿಸುತ್ತೇವೆ. 

ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಮತ್ತು ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ಕಾರ್ತಿಕ್ ಇವರುಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ ಅವರು ವಿಡಿಯೋಗಳನ್ನು ಯಾರು ಯಾರಿಗೆ ತಲುಪಿಸಿದ್ದಾರೆ ಅವರಲ್ಲಿ ಯಾರು ವೀಡಿಯೋಗಳನ್ನು ಹಂಚುತ್ತಿದ್ದಾರೆ ಎನ್ನುವುದನ್ನು ತನಿಖೆ ನಡೆಸಿ ಮುಟ್ಟುಗೋಲು ಹಾಕಿಕೊಳ್ಳದಿರುವುದು, ಸಂಬಂಧಪಟ್ಟವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸದಿರುವುದು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ನಿರ್ಲಕ್ಷ್ಯತನವಾಗಿದ್ದು ಇದು ಖಂಡನೀಯ. 

ಅಶ್ಲೀಲ ಚಿತ್ರ ಮತ್ತು ವಿಡಿಯೋಗಳನ್ನು ಸಾರ್ವಜನಿಕವಾಗಿ ಹಂಚುವುದನ್ನು ತಡೆಯಬೇಕು. ಈ ವಿಚಾರದಲ್ಲಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೈಭವೀಕರಣ ಮಾಡುತ್ತಿರುವುದು ಸಹ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದ್ದು, ಮಾಧ್ಯಮಗಳು ಜವಾಬ್ದಾರಿಯಿಂದ ವರ್ತಿಸಬೇಕಿದೆ ಎಂದರು.

ಸಂಚಾಲಕ ರಾಜು ಸಣ್ಣಕ್ಕಿ ಮಾತನಾಡಿ,  ಎಸ್‌ಐಟಿ ಕೂಡಲೇ ಪ್ರಕರಣದ ಬಗ್ಗೆ ಗಂಭೀರವಾಗಿ ಪರಿಗಣಿಸಿ ಕ್ರಮ ವಹಿಸಬೇಕಿದೆ. ಇಲ್ಲವಾದಲ್ಲಿ ಸಂತ್ರಸ್ತ ಮಹಿಳೆಯರು ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭ ಎದುರಾಗಬಹುದು ಅಂತಹ ಅನಾಹುತಗಳು ನಡೆದರೆ ಅದಕ್ಕೆ ನೇರವಾಗಿ ಸರ್ಕಾರವೇ ಹೊಣೆಯಾಗುತ್ತದೆ. 

ಸಂತ್ರಸ್ತ ಮಹಿಳೆಯರು ಎಸ್‌ಐಟಿ ಮುಂದೆ ಹಾಜರಾಗಲು ಹಿಂಜರಿಯುತ್ತಿರುವುದರಿಂದ ಸಂತ್ರಸ್ತರಿದ್ದಲ್ಲಿಗೆ ಹೋಗಿ ಹೇಳಿಕೆ ಪಡೆಯಲು ಎಸ್ಐಟಿ ತಂಡ ಮುಂದಾಗಬೇಕು. ತಕ್ಷಣವೇ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಸಬೇಕು. ಶಾಸಕ ಎಚ್ .ಡಿ.ರೇವಣ್ಣ ಮತ್ತು ಸಂಸದ ರೇವಣ್ಣ ಇಬ್ಬರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕೆಂದು ಒತ್ತಾಯಿಸಿದರು.

ವಕೀಲ ರುದ್ರಾರಾಧ್ಯ ಮಾತನಾಡಿ, ಪ್ರಕರಣವು ತೀವ್ರ ಸ್ವರೂಪವಾಗಿದ್ದು, ಇದರಲ್ಲಿ ಪ್ರಭಾವಿಗಳೇ ಭಾಗಿಯಾಗಿದ್ದಾರೆ. ಈ ನಿಟ್ಟಿನಲ್ಲಿ  ಸಾಕ್ಷ್ಯಾಧಾರಗಳು ಮುಖ್ಯವಾಗಿದ್ದು, ಸರ್ಕಾರ ತನಿಖೆಯನ್ನು ಸಡಿಲಗೊಳಿಸಿದರೆ, ಸಾಕ್ಷ್ಯಾಧಾರಗಳು ನಾಶವಾಗುವ ಸಂಭವವಿರುತ್ತದೆ. 

ಸರ್ಕಾರ ಎಚ್ಚೆತ್ತುಕೊಂಡು ಎಸ್‌ಐಟಿ ಯೊಂದಿಗೆ ತನಿಖೆಗೆ ಎಲ್ಲಾ ರೀತಿಯಲ್ಲಿಯೂ  ಸಹಕರಿಸಬೇಕು. ಈಗಾಗಲೇ ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ಬ್ಲೂ ಕಾರ್ನರ್ ನೊಟೀಸ್ ನೀಡಿದೆ. ಕೇಂದ್ರ ಸರ್ಕಾರವೂ ಇದಕ್ಕೆ ಕೈಜೋಡಿಸಬೇಕು ಎಂದರು.

ಪ್ರತಿಭಟನೆಯಲ್ಲಿ  ಮುಖಂಡರಾದ ಪಿ.ಎ.ವೆಂಕಟೇಶ್, ಮಹೇಶ್, ಗೂಳ್ಯ ಹನುಮಣ್ಣ, ತಿಮ್ಮರಾಜು, ರಂಗಸ್ವಾಮಿ, ರಘುಕುಮಾರ್ ಮತ್ತಿತರರು ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

sports

HL

crime

HL

crime

HL

politics

HL

sports

HL

others

HL

politics

HL

sports

HL

others

HL

literature

HL

sports

HL

literature

HL

sports

HL

agriculture

HL

crime

HL

politics

HL

politics

HL

politics

HL

crime

HL

politics

HL

health

HL

education

HL

education

HL

crime

HL

politics

HL

crime

HL

crime

HL

others

HL

politics

HL

crime