ರೇವಣ್ಣ ಇಂದು ಬಿಡುಗಡೆ.. ಸಂಭ್ರಮಿಸಲು ಸಜ್ಜಾದ JDS ಕಾರ್ಯಕರ್ತರು
ರೇವಣ್ಣ ಇಂದು ಬಿಡುಗಡೆ.. ಸಂಭ್ರಮಿಸಲು ಸಜ್ಜಾದ JDS ಕಾರ್ಯಕರ್ತರು

ಬೆಂಗಳೂರು, (ಮೇ.14): ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣಕ್ಕೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ನೀಡಿದ್ದು, ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಇಂದು ಮಧ್ಯಾಹ್ನದ ವೇಳೆಗೆ ಹೆಚ್.ಡಿ.ರೇವಣ್ಣ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ಜೈಲಿನ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್‌ ಕಾರ್ಯಕರ್ತರು ಸೇರಲಿದ್ದಾರೆ. ಹೀಗಾಗಿ, ಪರಪ್ಪನ ಅಗ್ರಹಾರ ಜೈಲಿನ ರಸ್ತೆಯಲ್ಲಿ ಡಿಸಿಪಿ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಮೂವರು ಎಸಿಪಿ, 6 ಜನ ಇನ್‌ಸ್ಪೆಕ್ಟರ್, 20 ಜನ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ 250 ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ರೇವಣ್ಣ ಜೈಲಿನಿಂದ ಬಿಡುಗಡೆಯಾಗುವುದನ್ನು ಕಾಯುತ್ತಿರುವ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇತ್ತ ಹೊಳೆನರಸೀಪುರದಲ್ಲಿ ನಿನ್ನೆಯೇ ಅಭಿಮಾನಿಗಳು ಬೀದಿ ಬೀದಿಗಳಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಇಂದು ಕೂಡ ರೇವಣ್ಣ ಬೆಂಬಲಿಗರು ಸಂಭ್ರಮಾಚರಣೆ ಮಾಡಲು ತಯಾರಿ ಮಾಡಿಕೊಂಡಿದ್ದಾರೆ.

ಸೋಮವಾರ ಜನಪ್ರತಿನಿಧಿಗಳ ಕೋರ್ಟ್ ರೇವಣ್ಣಗೆ ಹಲವು ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ. ಜಾಮೀನಿಗೆ 5 ಲಕ್ಷ ರೂ. ಬಾಂಡ್, ಇಬ್ಬರ ಶೂರಿಟಿ, ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಕೆ.ಆರ್.ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಗೆ ಬೆದರಿಕೆ ಹಾಕಬಾರದು, ಎಸ್‌ಐಟಿ ತನಿಖೆಗೆ ಸಹಕರಿಸಬೇಕೆಂಬ ಷರತ್ತಗಳನ್ನು ವಿಧಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

crime

HL

politics

HL

economy

HL

economy

HL

economy

HL

crime

HL

others

HL

others

HL

others

HL

others

HL

others

HL

politics

HL

others

HL

sports

HL

others

HL

others

HL

education

HL

politics

HL

economy

HL

politics

HL

sports

HL

others

HL

economy

HL

others

HL

others

HL

crime

HL

education

HL

others

HL

politics

HL

crime