ನನ್ನ ಮೇಲೆ ರಾಜಕೀಯ ಪಿತೂರಿ ಮಾಡಲಾಗಿದೆ; ಪ್ರಜ್ವಲ್‌ ರೇವಣ್ಣ ವಿಡಿಯೋ ನೋಡಿ
ನನ್ನ ಮೇಲೆ ರಾಜಕೀಯ ಪಿತೂರಿ ಮಾಡಲಾಗಿದೆ; ಪ್ರಜ್ವಲ್‌ ರೇವಣ್ಣ ವಿಡಿಯೋ ನೋಡಿ

ಬೆಂಗಳೂರು, (ಮೇ.27): ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಬಯಲಾದ ಬೆನ್ನಲ್ಲೆ ಲೋಕಸಭಾ ಚುನಾವಣೆಯ ಮತದಾನದ ಬಳಿಕ ನಾಪತ್ತೆಯಾಗಿದ್ದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ.

ವಿದೇಶದಿಂದಲೇ ವಿಡಿಯೋ ಬಿಡುಗಡೆ ಮಾಡಿದ ಅವರು ಬೆಂಗಳೂರಿಗೆ ಬಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಎಸ್‌ಐಟಿ ಮುಂದೆ ಹಾಜರಾಗಿ ಉತ್ತರ ನೀಡುತ್ತೇನೆ. ಮೇ 31 ರಂದು ನಾನು ರಾಜ್ಯಕ್ಕೆ ಬರುತ್ತೇನೆ ಎಂದು ಪ್ರಜ್ವಲ್‌ ರೇವಣ್ಣ ಹೇಳಿದ್ದಾರೆ.

ವಿಡಿಯೋದಲ್ಲಿ ತಂದೆ- ತಾಯಿ, ತಾತನ, ಕುಮಾರಣ್ಣನಿಗೆ. ಅಲ್ಲದೇ ನಾಡಿನ ಜನರು, ಪಕ್ಷದ ಕಾರ್ಯಕರ್ತರ ಬಳಿಯೂ ಕ್ಷಮೆ ಕೋರಿದ್ದಾರೆ. ಇನ್ನು ವಿದೇಶಕ್ಕೆ ತೆರಳಿರುವ ಬಗ್ಗೆ ಪ್ರತಿಕ್ರಿಯಿಸಿದ್ದು, ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು.

ಆದರೆ ಚುನಾವಣೆ ಸಮಯದಲ್ಲಿ ರಾಹುಲ್‌ ಗಾಂಧಿ ಸೇರಿದಂತೆ ಕಾಂಗ್ರೆಸ್‌ ನಾಯಕರ ಆರೋಪದಿಂದ ನಾನು ಮಾನಸಿಕ ಖಿನ್ನತೆಗೆ ಜಾರಿದ್ದೆ. ಈ ಖಿನ್ನತೆಯಿಂದ ಹೊರ ಬರದಲು ಕೆಲ ಸಮಯ ಬೇಕಿತ್ತು. ನನಗೆ ನ್ಯಾಯಾಲಯದ ಮೇಲೆ ನಂಬಿಕೆಯಿದೆ.

ನನ್ನ ಮೇಲೆ ರಾಜಕೀಯ ಪಿತೂರಿ ಮಾಡಲಾಗಿದೆ. ರಾಜಕೀಯವಾಗಿ ಬೆಳಿತಾ ಇದ್ದೀನಿ ಎಂದು ನನ್ನ ತುಳಿಯಲು ಪ್ರಯತ್ನ ಮಾಡಿದ್ದಾರೆ‌. ಈ ಸುಳ್ಳು ಪ್ರಕರಣದಿಂದ ನಾನು ಹೊರ ಬರುತ್ತೇನೆ. ಬಂದ ಮೇಲೆ ಎಲ್ಲರಿಗೂ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

politics

HL

crime

HL

economy

HL

others

HL

crime

HL

others

HL

politics

HL

others

HL

economy

HL

others

HL

agriculture

HL

others

HL

economy

HL

crime

HL

others

HL

politics

HL

others

HL

politics

HL

crime

HL

others

HL

education

HL

politics

HL

others

HL

others

HL

crime

HL

economy

HL

travel

HL

others

HL

literature