ವಿಮಾನ ಇಳಿಯುತ್ತಿದ್ದಂತೆ ಪ್ರಜ್ವಲ್ ಅರೆಸ್ಟ್
ವಿಮಾನ ಇಳಿಯುತ್ತಿದ್ದಂತೆ ಪ್ರಜ್ವಲ್ ಅರೆಸ್ಟ್

ಬೆಂಗಳೂರು, (ಮೇ.28): ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಿಂದ ಬಂದು ವಿಮಾನದಿಂದ ಬಂದಿಳಿಯುತ್ತಿದ್ದಂತೆ ಬಂಧಿಸಲು ವಿಶೇಷ ತನಿಖಾ ದಳ (ಎಸ್ ಐಟಿ) ಮುಂದಾಗಿದೆ. 

ಈಗಾಗಲೇ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಬಂಧನ ವಾರಂಟ್ ಇದೆ. ಹೀಗಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ದೇಶದ ಯಾವುದೇ ವಿಮಾನ ನಿಲ್ದಾಣದಲ್ಲಿ ಅವರು ಬಂದಿಳಿದರೂ ಎಸ್‌ಐಟಿ ಬಂಧಿಸಲಿದೆ ಎಂದು ಮೂಲಗಳು ಹೇಳಿವೆ. 

ರಾಜತಾಂತ್ರಿಕ ಪಾಸ್ಪೋರ್ಟ್ ಸವಲತ್ತು ಬಳಸಿಕೊಂಡು ವಿದೇಶಕ್ಕೆ ಪರಾರಿಯಾಗಿ ರುವ ಸಂಸದ ಪ್ರಜ್ವಲ್ ರೇವಣ್ಣ ಮೇ 31ರೊಳಗೆ ದೇಶಕ್ಕೆ ವಾಪಸ್ ಬರಲೇಬೇಕು, ಬೇರೆ ದಾರಿಯೇ ಇರಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಂಸದರಿಗೆ 5 ವರ್ಷಗಳ ಅವಧಿಗೆ (ಸರ್ಕಾರದ ಅವಧಿಗೆ) ರಾಜತಾಂತ್ರಿಕ ಪಾಸ್ಪೋರ್ಟ್ ನೀಡಲಾಗಿರುತ್ತದೆ. ಈ ಸಂಸತ್‌ ಅವಧಿ ಮುಗಿಯುತ್ತಿದ್ದು, ಅದರಂತೆ ಪ್ರಜ್ವಲ್ ಮೇ 31ರೊಳಗೆ ಭಾರತಕ್ಕೆ ಬರಬೇಕು. ಇಲ್ಲದಿದ್ದರೆ ವಿದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ಅನುಮತಿ ಪಡೆಯಬೇಕು. 

ಪ್ರಜ್ವಲ್ ವಿರುದ್ದ ಬ್ಲೂ ಕಾರ್ನರ್ ನೋಟಿಸ್ ಇರುವುದರಿಂದ ಅನುಮತಿ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಅನಿವಾರವಾಗಿ ಮರಳುತ್ತಿದ್ದಾರೆ ಎನ್ನಲಾಗಿದೆ.

ಲೈಂಗಿಕ ದೌರ್ಜನ್ಯ ಕೃತ್ಯ ಬೆಳಕಿಗೆ ಬಂದ ನಂತರ ವಿದೇಶಕ್ಕೆ ತೆರಳಿದ್ದ ಪ್ರಜ್ವಲ್ ಮೇ 31ರಂದು ಬರುವುದಾಗಿ ಹೇಳಿಕೆ ನೀಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others