ನಾಳೆಯಿಂದ ಶಾಲೆಗಳು ಆರಂಭ; ಮಕ್ಕಳಿಗೆ ಸಿಹಿ, ಪುಸ್ತಕ, ಸಮವಸ್ತ್ರ ನೀಡಿ ಸ್ವಾಗತಿಸಲಿರುವ ಶಿಕ್ಷಕರು
ನಾಳೆಯಿಂದ ಶಾಲೆಗಳು ಆರಂಭ; ಮಕ್ಕಳಿಗೆ ಸಿಹಿ, ಪುಸ್ತಕ, ಸಮವಸ್ತ್ರ ನೀಡಿ ಸ್ವಾಗತಿಸಲಿರುವ ಶಿಕ್ಷಕರು

ಬೆಂಗಳೂರು, (ಮೇ.28); 2024-25ನೇ ಸಾಲಿನ ಶೈಕ್ಷಣಿಕ ಅವಧಿ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ತಿಂಗಳಿಂದ ಬೇಸಿಗೆ ರಜೆಯಿಂದ ಬಂದ್ ಆಗಿದ್ದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಮೇ 29ರ ಬುಧವಾರದಿಂದ ಮತ್ತೆ ಬಾಗಿಲು ತೆರೆಯಲಿವೆ. ಆದರೆ, ಮಕ್ಕಳನ್ನು ಮಾತ್ರ ಮೇ 31ರಂದು ಶಾಲಾ ಪ್ರಾರಂಭೋತ್ಸವದ ಮೂಲಕ ಸಿಹಿ ನೀಡಿ ಶಿಕ್ಷಕರು ಬರಮಾಡಿಕೊಳ್ಳಲಿದ್ದಾರೆ.

ವಿಶೇಷವೆಂದರೆ ಈ ಬಾರಿ ಮಕ್ಕಳು ಶಾಲೆಗೆ ಬರುತ್ತಿದ್ದಂತೆ ಎರಡು ಜೊತೆ ಸಮವಸ್ತ್ರ ಮತ್ತು ಪಠ್ಯ ಪುಸ್ತಕಗಳನ್ನು ನೀಡಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಪ್ರತೀ ಬಾರಿಯಂತೆ ಪಠ್ಯ ಪುಸ್ತಕ ಮತ್ತು ಸಮವಸ್ತ್ರ ವಿತರಣೆ ತಡಗೊಳಿಸದೆ ಸಮಯಕ್ಕೆ ಸರಿಯಾಗಿ ವಿತರಿಸುವ ಪ್ರಯತ್ನ ನಡೆಸಿದೆ.

ಈಗಾಗಲೇ ಸಮವಸ್ತ್ರ ಪೂರ್ಣ ಪ್ರಮಾಣ ದಲ್ಲಿ ತಾಲ್ಲೂಕು ಮಟ್ಟಕ್ಕೆ ರವಾನೆಯಾಗಿದ್ದು, ಪಠ್ಯಪುಸ್ತಕಗಳನ್ನು ಕೂಡ ಶೇ.75ರಿಂದ 80 ರಷ್ಟು ಸರಬರಾಜು ಮಾಡಲಾಗಿದೆ. ಇನ್ನೆರಡು ದಿನಗಳಲ್ಲಿ ಉಳಿದ ಪಠ್ಯಪುಸ್ತಕಗಳ ‌ ಪೂರೈಕೆ ಮಾಡಲಾಗುವುದು. 

ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಿಡಿಪಿಐಗಳು ಶಾಲೆಗಳಿಗೆ ಅವುಗಳನ್ನು ತಲುಪಿಸಿ ಪ್ರಾರಂಭೋತ್ಸವದ ದಿನವೇ ವಿತರಣೆಗೆ ಕ್ರಮ ವಹಿಸಬೇಕೆಂದು ಇಲಾಖಾ ತಿಳಿಸಿದ್ದಾರೆ. 

ಅಧಿಕಾರಿಗಳು ಶಾಲಾ ಪ್ರಾರಂಭೋತ್ಸವ ದೊಂದಿಗೆ ಮೊದಲ ದಿನ ವಿದ್ಯಾರ್ಥಿಗಳನ್ನು ಬರಮಾಡಿ ಕೊಳ್ಳಲು ಬುಧವಾರ ಮತ್ತು ಗುರುವಾರ ಶಾಲೆಗಳಲ್ಲಿ ಪ್ರತಿಯೊಂದು ತರಗತಿ ಕೊಠಡಿ, ಹೊರಾಂಗಣ, ಬಿಸಿಯೂಟ ಕೊಠಡಿ, ಆಟದ ಮೈದಾನ, ಕಾಂಪೌಂಡ್ ಸೇರಿದಂತೆ ಇಡೀ ಶಾಲೆಯನ್ನು ಉತ್ತಮ ರೀತಿಯಲ್ಲಿ ಸ್ವಚ್ಛಗೊಳಿಸಬೇಕು. ತಳಿರು ತೋರಣ, ರಂಗೋಲೆ ಬಿಡಿಸಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮುಖ್ಯಶಿಕ್ಷಕರುಗಳಿಗೆ ಶಿಕ್ಷಣ ಸೂಚಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

politics

HL

economy

HL

economy

HL

economy

HL

crime

HL

others

HL

others

HL

others

HL

others

HL

others

HL

politics

HL

others

HL

sports

HL

others

HL

others

HL

education

HL

politics

HL

economy

HL

politics

HL

sports

HL

others

HL

economy

HL

others

HL

others

HL

crime

HL

education

HL

others

HL

politics