ಕೆಲವು ಕಠಿಣ ಅನ್ನಿಸಿದರೂ ಮಕ್ಕಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದು ಕೊಂಡಿದ್ದೇವೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಕೆಲವು ಕಠಿಣ ಅನ್ನಿಸಿದರೂ ಮಕ್ಕಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದು ಕೊಂಡಿದ್ದೇವೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ, (ಮೇ.28): ಬಿ.ಎಸ್.ಯಡಿಯೂರಪ್ಪ ಇನ್ನೂ ಮುಖ್ಯಮಂತ್ರಿ ಹುದ್ದೆಯಲ್ಲಿದ್ದಾರೆ ಎಂಬ ಭ್ರಮೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಲ್ಲಿದೆ. ಅವರು ಈ ಭ್ರಮೆ ಕಳಚಿಕೊಂಡು ಹೊರ ಬರಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಚಿವರ ತಲೆಗೂದಲು ಹಾಗೂ ಸಿನಿಮಾ ರಂಗದ ಆಸಕ್ತಿ ಬಗ್ಗೆ ಟೀಕೆ ಮಾಡಿದ್ದ ವಿಜಯೇಂದ್ರ ಅವರಿಗೆ ತಿರುಗೇಟು ನೀಡಿದರು. 

ನನ್ನ ಹೇರ್ ಕಟ್ ಮಾಡುವವರಿಗೆ ಬಿಡುವಾಗಿಲ್ಲ. ನಿಮಗೆ ಬಿಡುವಿದ್ದರೆ ಬಂದು ಹೇಳಿ. ರಾಷ್ಟ್ರೀಯ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿರುವ ವಿಜಯೇಂದ್ರ ಜವಾಬ್ದಾರಿಯಿಂದ ಮಾತನಾಡಬೇಕು. ಚಿತ್ರರಂಗದ ಕುರಿತು ಅವರು ಆಡಿದ ಮಾತು ಸರಿ ಇಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಇಷ್ಟು ದಿನ ಶಿಕ್ಷಣ ಕ್ಷೇತ್ರವನ್ನು ಹೊಲಸು ಮಾಡಿದ್ದು ಬಿಜೆಪಿ. ಶಿಕ್ಷಣ ಕ್ಷೇತ್ರದ ಪಾವಿತ್ರತೆ ಕಾಪಾಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ತರಲಾಗಿದೆ. ಕೆಲವು ಕಠಿಣ ಅನ್ನಿಸಿದರೂ ಮಕ್ಕಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದು ಕೊಂಡಿದ್ದೇವೆ.

ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಕಳೆದ ವರ್ಷ 43 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲಾಗಿತ್ತು. ಅನುದಾನಿತ ಶಾಲಾ ಶಿಕ್ಷಕರ ನೇಮಕಾತಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದೆ.

ಶಿಕ್ಷಣ ಇಲಾಖೆಯಲ್ಲಿಯೂ ಕೆಲ ಕೊರತೆ, ಸಮಸ್ಯೆ ಇವೆ. ಇವು ಹಲವು ವರ್ಷಗಳಿಂದ ಹಾಗೇ ಉಳಿದುಕೊಂಡಿವೆ. ಈ ಸಮಸ್ಯೆ ಇತ್ಯರ್ಥ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

economy

HL

economy

HL

economy

HL

crime

HL

others

HL

others

HL

others

HL

others

HL

others

HL

politics

HL

others

HL

sports

HL

others

HL

others

HL

education

HL

politics

HL

economy

HL

politics

HL

sports

HL

others

HL

economy

HL

others

HL

others

HL

crime

HL

education

HL

others

HL

politics

HL

crime

HL

education