BJP ಸಂಸದ ಸಂಗಣ್ಣ ಕರಡಿ ರಾಜೀನಾಮೆ..!
BJP ಸಂಸದ ಸಂಗಣ್ಣ ಕರಡಿ ರಾಜೀನಾಮೆ..!

ಬೆಂಗಳೂರು, (ಏ.16): ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಕೊಪ್ಪಳ ಕ್ಷೇತ್ರದ ಸಂಸದ ಸಂಗಣ್ಣ ಕರಡಿ ರಾಜೀನಾಮೆ ನೀಡಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಇ-ಮೇಲ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ.

'ನಾನು ಕರಡಿ ಸಂಗಣ್ಣ ಸಂಸದರು ಕೊಪ್ಪಳ ಇದ್ದು ನಾನು ಭಾರತೀಯ ಜನತಾ ಪಾರ್ಟಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಕಾರಣ ತಾವುಗಳು ನನ್ನ ಪ್ರಾಥಮಿಕ ಸದಸ್ಯತ್ವದ ರಾಜೀನಾಮೆಯನ್ನು ಅಂಗೀಕಾರ ಮಾಡಲು ಈ ಮೂಲಕ ಕೋರಿದೆ' ಎಂದು ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಅಲ್ಲದೇ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಇ-ಮೇಲ್ ಮೂಲಕ ಸಂಸತ್ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಕಳೆದ 10 ವರ್ಷದಿಂದ ಕೊಪ್ಪಳ ಲೋಕಸಭಾ ಕ್ಷೇತ್ರದ ಜನರ ಆಶೀರ್ವಾದ ದಿಂದ ಸಂಸದನಾಗಿ ಕೆಲಸ ಮಾಡಿದ್ದೇನೆ. ಇತ್ತೀಚಿನ ರಾಜಕಾರಣ ನನಗೆ ಬೇಸರ ತರಿಸಿದ್ದು ನನ್ನ ಸಾರ್ವಜನಿಕರ ಸೇವೆ ಗುರುತಿಸುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೊಪ್ಪಳದಲ್ಲಿ ಬಿಜೆಪಿ ನೆಲೆಯೂರಲು ನಾನು ಕೂಡ ಕಾರಣಿಕರ್ತ. ಪಕ್ಷದ ಪ್ರತಿಯೊಂದು ಕಾರ್ಯಕ್ರಮವನ್ನು ಯಶಸ್ವಿಯಾಗಿಸಿದ್ದೇನೆ. ನನ್ನ ಜತೆಗಿದ್ದೇ ಬೆನ್ನಿಗೆ ಚೂರಿ ಹಾಕಿದ ಮಹಾ ನಾಯಕರಿಗೆ ಕೊಪ್ಪಳದ ಜನರು ತಕ್ಕ ಶಾಸ್ತಿ ಮಾಡುತ್ತಾರೆಂಬ ವಿಶ್ವಾಸವಿದೆ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ.

ಇನ್ನು, ನಾಳೆ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಲಿರುವ ಕರಣ ಸಂಗಣ್ಣ ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಪಕ್ಕಾ ಆಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

literature

HL

politics

HL

politics

HL

others

HL

politics

HL

crime

HL

education

HL

politics

HL

politics

HL

politics

HL

politics

HL

politics

HL

crime

HL

politics

HL

politics

HL

others

HL

literature

HL

others

HL

literature

HL

politics

HL

sports

HL

politics

HL

health

HL

politics

HL

politics

HL

others

HL

politics

HL

politics

HL

politics

HL

crime