ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಭರ್ಜರಿ ಪ್ರಚಾರ: ಬಿಜೆಪಿಯ ಸುಳ್ಳುಗಳ ಬಗ್ಗೆ ಜಾಗೃತರಾಗುವಂತೆ ಯುವಕರಲ್ಲಿ ಮನವಿ
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಭರ್ಜರಿ ಪ್ರಚಾರ: ಬಿಜೆಪಿಯ ಸುಳ್ಳುಗಳ ಬಗ್ಗೆ ಜಾಗೃತರಾಗುವಂತೆ ಯುವಕರಲ್ಲಿ ಮನವಿ

ದೊಡ್ಡಬಳ್ಳಾಪುರ, (ಏ.17); ಚಿಕ್ಕಬಳ್ಳಾಪುರದ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಎಸ್.ರಕ್ಷಾ ರಾಮಯ್ಯ ಅವರು ತಾಲೂಕಿನ ವಿವಿಧೆಡೆಗಳಲ್ಲಿ ಭರ್ಜರಿ ಪ್ರಚಾರ ನಡೆಸಿದರು.

ಪ್ರಚಾರ ಸಭೆಗಳಿಗೆ ಜನಸ್ತೋಮವೇ ಹರಿದು ಬಂತು. ಪ್ರಚಾರ ಸಭೆಗಳು, ಪಾದಯಾತ್ರೆ ಮತ್ತು ರೋಡ್ ಶೋನಲ್ಲಿ ಗ್ರಾಮೀಣ ಹಳ್ಳಿಗಾಡಿನ ಜನ ಸಮೂಹ ಅಪಾರ ಸಂಖ್ಯೆಯಲ್ಲಿ ಭಾಗಿಯಾಯಿತು. ರಕ್ಷಾ ರಾಮಯ್ಯ ಅವರಿಗೆ ಸೇಬಿನ ಹಾರ, ಹೂ ಮಳೆ ಸ್ವಾಗತ ದೊರೆಯಿತು.

ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ನೇತೃತ್ವದಲ್ಲಿ ಪ್ರಚಾರ ಕಾರ್ಯ ಬಿರುಸಿನಿಂದ ನಡೆಯಿತು.

ಚಿಕ್ಕಮಧುರೆಯ ಶ್ರೀ ಶನಿಮಹಾತ್ಮ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು. ನಂತರ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ, ದೊಡ್ಡಬೆಳವಂಗಲ, ಸಾಸಲು, ಕೊನಘಟ್ಟ ವಿವಿಧ ಭಾಗದಲ್ಲಿ ರಕ್ಷಾ ರಾಮಯ್ಯ ಸಂಚರಿಸಿ, ಮತಯಾಚಿಸಿದರು. 

ಈ ವೇಳೆ ಮಾತನಾಡಿದ ರಕ್ಷಾ ರಾಮಯ್ಯ, ಬಿಜೆಪಿಯವರು ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದು, ಇದಕ್ಕೆ ಕ್ಷೇತ್ರದ ಮತದಾರರು ಅವಕಾಶ ಕಲ್ಪಿಸಬಾರದು. ಕೇಂದ್ರ ಸರ್ಕಾರ ರಾಜ್ಯಕ್ಕೆ ಭಾರೀ ಅನ್ಯಾಯಮಾಡುತ್ತಿದ್ದು, ಬಿಜೆಪಿ ಸಂಸದರು ಈ ಬಗ್ಗೆ ಧ್ವನಿ ಎತ್ತಿಲ್ಲ ಎಂದು ಹೇಳಿದರು

ವಿದ್ಯಾವಂತ ಯುವ ಸಮುದಾಯಕ್ಕೆ ಉದ್ಯೋಗ ನೀಡಬೇಕಾದ ಕೇಂದ್ರ ಬಿಜೆಪಿ ಸರ್ಕಾರ ಅವರಲ್ಲಿ ಕೇವಲ ಕೋಮು ಭಾವನೆಗಳನ್ನು ಕೆರಳಿಸುವಂತಹ ಸುಳ್ಳುಗಳನ್ನಯ ಹೇಳಿ ಯುವ ಸಮುದಾಯವನ್ನು ದಾರಿತಪ್ಪಿಸುತ್ತಿದೆ.

ಯುವಕರು ಇತಿಹಾಸವನ್ನು ಬಿಜೆಪಿಯವರ ಸುಳ್ಳ ನಂಬಿ ಮರೆಯಬಾರದು. ಕಾಂಗ್ರೆಸ್ ಪಕ್ಷಕೆ ಕೆಜಿ ಯಿಂದ ಪಿಜಿಯ ವರೆಗೆ ಶಿಕ್ಷಣ ಸಂಸ್ಥೆಗಳನ್ನು, ಐಐಟಿ, ಐಐಎಂಗಳನ್ನು ನಿರ್ಮಿಸಿದೆ. ಬಿಜೆಪಿ ಯವರು ಒಂದು ರಾಮಮಂದಿರ ಕಟ್ಟಿದ್ದಾರೆ. ಸಂತೋಷ. ಆದರೆ ನಾವು ಲಕ್ಷಾಂತರ ಶಾಲೆ, ಕಾಲೇಜುಗಳನ್ನು ನಿರ್ಮಿಸಿದ್ದೇವೆ. 

ಕಾಂಗ್ರೆಸ್ ಲಕ್ಷಾಂತರ ಶಿಕ್ಷಣ ಮಂದಿರಗಳನ್ನು ನಿರ್ಮಿಸಿ ದೇಶದ ಪ್ರಜೆಗಳನ್ನು ಪ್ರಜ್ಞಾವಂತರನ್ನಾಗಿ ಮಾಡಿದೆ ಎಂದರು.

ಬಿಜೆಪಿ ಸರ್ಕಾರ ಪ್ರತಿಯೊಂದರ ಮೇಲೂ ತೆರಿಗೆ ವಿಧಿಸುತ್ತಿದ್ದು, ಮಜ್ಜಿಗೆ, ಉಪ್ಪು, ರೈತರ ಪೈಪ್ ಗಳನ್ನು ಸಹ ಬಿಟ್ಟಿಲ್ಲ. ಜಿಎಸ್‌ಟಿ ಮೂಲಕ ರೈತರ ಹೊಟ್ಟೆ ಮೇಲೆ ಒಡೆಯುವ ಕೆಲಸ ಮಾಡಿದೆ. 

ನಮ್ಮ ಕಾಂಗ್ರೆಸ್ ಆಡಳಿತ ಬಡವರು, ಮಹಿಳೆಯರು, ಹಿರಿಯರ ಹಿತರಕ್ಷಣೆ ಮಾಡುತಿದ್ದು, ಗ್ಯಾರೆಂಟಿ ಯೋಜನೆಯಿಂದ ಪ್ರತಿ ತಿಂಗಳು ಪ್ರತಿಯೊಂದು ಕುಟುಂಬಕ್ಕೆ ಐದರಿಂದ, ಆರು ಸಾವಿರ ರೂ ನೀಡುತ್ತಿದೆ.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಪ್ರತಿಯೊಂದು ಮನೆಗೆ ಪ್ರತಿ ತಿಂಗಳು 15 ಸಾವಿರ ರೂಪಾಯಿ ದೊರೆಯಲಿದೆ. ನಾವು ಅಧಿಕಾರಕ್ಕೆ ಬಂದಲ್ಲಿ ಕೃಷಿ ಮೇಲಿನ ಜಿಎಸ್‌ಟಿ ರದ್ದು ರೈತರ ಸಾಲ ಮನ್ನಾ ಮಡುತ್ತೇವೆ. 

ಆದರೆ ಬಿಜೆಪಿ ಸರ್ಕಾರ ಅಂಬಾನಿ, ಮನ್ನಾ ಮಾಡುತ್ತಿದೆ. ಬಿಜೆಪಿ ಶ್ರೀಮಂತರ ಪಕ್ಷ. ನಮ್ಮ ಕಾಂಗ್ರೆಸ್ ಪಕ್ಷ ಎಲ್ಲಾ ಜನರ ಪರವಾಗಿದೆ ಎಂದರು. 

ಕಾಂಗ್ರೆಸ್ ಯುವಕನಾದ ನನಗೆ ಅವಕಾಶ ಮಾಡಿಕೊಟ್ಟಿದ್ದು, ಮತ ದಾರರು ನನಗೆ ಆಶಿರ್ವಾದ ಮಾಡಿ ಗೆಲ್ಲಿಸಬೇಕು. ರಾಜ್ಯಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯವಾಗದಂತೆ ನೋಡಿ ಕೊಳ್ಳುತೇವೆ. ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕೆಲಸ ನೋಡಿ ಒಗ್ಗಟ್ಟಾಗಿ ಕ್ಷೇತ್ರದೆಲ್ಲಡೆ ಶಕ್ತಿ ತುಂಬುತ್ತಿರುವುದನ್ನು ನೋಡಿ ತಮಗೆ ಸಂತಸವಾಗುತ್ತಿದೆ. 

ಬಿಜೆಪಿ ಪಕ್ಷಕ್ಕೆ ನೀವು ಈ ಬಾರಿ ತಕ್ಕ ಪಾಠ ಕಲಿಸಿ, ಬಡವರ, ರೈತರ, ಮಹಿಳೆಯರ ರಕ್ಷಣೆಗಾಗಿ ಇವರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ನನಗೆ ಆಶೀರ್ವದಿಸಬೇಕು. ಈ ಬಾರಿ ನನಗೆ ಹೆಚ್ಚಿನ ಮತ ನೀಡಿ ಗೆಲ್ಲಿಸಬೇಕೆಂದು ಮನವಿ ಮಾಡಿದರು. 

ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ ಮಾತನಾಡಿ, ಕ್ಷೇತ್ರದ ಜನತೆ ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರ ನಮ್ಮ ಮನೆಗೆ ಏನು ಕೊಡುಗೆ ನೀಡಿದೆ. ನಮ್ಮ ಬದುಕಿಗೆ, ನಮ್ಮ ಮಕ್ಕಳ ಉದ್ಯೋಗಕ್ಕೆ ಯಾವ ಸೌಲಭ್ಯಗಳನ್ನು ಒದಗಿಸಿದೆ ಎಂಬುದನ್ನು ಪ್ರಶ್ನಿಸಿಕೊಳ್ಳಬೇಕಿದೆ.

ಈ ಹಿಂದೆ 2013ರಲ್ಲಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ತಾಲೂಕಿನಲ್ಲಿ ನಡೆಸಲಾದ ಅಭಿವೃದ್ಧಿ ಕಾರ್ಯಗಳು ಈಗಿನ ಶಾಸಕರು ಏಕೆ ಮಾಡುತ್ತಿಲ್ಲ ಎಂಬುದನ್ನು ಮತದಾರರು ಪ್ರಶ್ನಿಸಿಕೊಳ್ಳಬೇಕಿದೆ. ನವ ದೊಡ್ಡಬಳ್ಳಾಪುರ ಎಲ್ಲಾಯ್ತು ಕೇಳಬೇಕಿದೆ.

ತಾಲೂಕಿನ ಜನತೆ ಜನಪರ ಇರುವ ವ್ಯಕ್ತಿಯನ್ನು, ಪಕ್ಷವನ್ನು ಆಯ್ಕೆ ಮಾಡಿ, ಬಡವ, ಬಲ್ಲಿದ, ದಲಿತ, ರೈತ, ಮಹಿಳೆ, ಯುವಕರ ಅಭಿವೃದ್ಧಿಗೆ ಕೈಜೋಡಿಸುವಂತೆ ಮನವಿ ಮಾಡಿದರು.

ಜನ ಸೇವಕರಾದ ಎಂಎಸ್ ರಾಮಯ್ಯ ಅವರ ಮೊಮ್ಮಗ ರಕ್ಷಾ ರಾಮಯ್ಯ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು, ಚುನಾಯಿತರಾಗಿ ಸೇವೆ ಸಲ್ಲಸುವುದಲ್ಲದೆ, ಅವರ ಆಸ್ಪತ್ರೆಯಲ್ಲಿ ಉಚಿತ ಸೇವೆ ನೀಡುವಂತೆ ಮನವಿ ಮಾಡಲಾಗಿದೆ.

ಈ ವೇಳೆ ದೊಡ್ಡಬಳ್ಳಾಪುರ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ನಿರ್ದೇಶಕರಾದ ರಾಮಣ್ಣ, ಕೆಪಿಸಿಸಿ ಅಧ್ಯಕ್ಷ ಜಿ.ಲಕ್ಷ್ಮೀಪತಿ, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಬೈರೇಗೌಡ, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿವೆಂಕಟೇಶ್, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವಿಶ್ವನಾಥ ರೆಡ್ಡಿ, ಎಪಿಎಂಸಿ ಮಾಜಿ ಅಧ್ಯಕ್ಷ ನಾರನಹಳ್ಳಿ ಗೋವಿಂದ ರಾಜು, ತಾಪಂ ಅಧ್ಯಕ್ಷ ಡಿಸಿ ಶಶಿಧರ್, ಟಿಎಪಿಎಂಸಿಎಸ್ ನಿರ್ದೇಶಕ ಎಎನ್ ಹರೀಶ್ ಕುಮಾರ್ ಮತ್ತಿತರರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

-->

Latest News

HL

crime

HL

crime

HL

others

HL

politics

HL

crime

HL

crime

HL

crime

HL

crime

HL

crime

HL

others

HL

politics

HL

literature

HL

literature

HL

politics

HL

politics

HL

politics

HL

health

HL

politics

HL

economy

HL

politics

HL

politics

HL

politics

HL

health

HL

politics

HL

economy

HL

literature

HL

politics

HL

literature

HL

politics

HL

politics