ಚುನಾವಣೆ ಬಾಂಡ್ ಪ್ರಶ್ನಿಸಿದರೆ ಮೋದಿ ನಡುಗುತ್ತಾರೆ.. ಮಂಡ್ಯದಲ್ಲಿ ಅಬ್ಬರಿಸಿದ ರಾಹುಲ್ ಗಾಂಧಿ
ಚುನಾವಣೆ ಬಾಂಡ್ ಪ್ರಶ್ನಿಸಿದರೆ ಮೋದಿ ನಡುಗುತ್ತಾರೆ.. ಮಂಡ್ಯದಲ್ಲಿ ಅಬ್ಬರಿಸಿದ ರಾಹುಲ್ ಗಾಂಧಿ

ಮಂಡ್ಯ, (ಏ.17): ಈಗಾಗಲೇ ಗ್ಯಾರಂಟಿ ಯೋಜನೆ ಜಾರಿಗೊಳಿಸಿ ರಾಜ್ಯದ ಜನರ ಮನಗೆದ್ದಿರುವ ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆಯನ್ನು ಗ್ಯಾರಂಟಿ ಯೋಜನೆ ಘೋಷಣೆ ಮಾಡಿ ಎದುರಿಸಲು ಮುಂದಾಗಿದೆ. 

ಮಂಡ್ಯದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಬಡ ಕುಟುಂಬದ ಮಕ್ಕಳು ಪದವಿ ಪೂರೈಸಿದರೂ ಅವರಿಗೆ ಸೂಕ್ತ ಉದ್ಯೋಗ ಸಿಗುತ್ತಿಲ್ಲ. ಅದಕ್ಕಾಗಾಗಿ ಪದವಿ ಮುಗಿಸಿದವರಿಗೆ ನೌಕರಿ ನೀಡಲು ಯೋಜನೆ ರೂಪಿಸಲಾಗುವುದು ಎಂದು ಭರವಸೆ ನೀಡಿದರು.

ಕುಟುಂಬದ ಹಿರಿಯ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಹಾಕಲು ಯೋಜಿಸಲಾಗಿದೆ. ಈ ಮೂಲಕ ಪ್ರತಿ ತಿಂಗಳು ಟಾಕಾಟಕ್ ಅಂಥ 8,500 ರೂಪಾಯಿ ಹಾಕಲಾಗುವುದು. ಇದರೊಂದಿಗೆ ರಾಜ್ಯ ಸರ್ಕಾರದ ₹2000 ಸಹ ಬರುತ್ತದೆ ಎಂದರು. 

ನರೇಗಾ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಿ, ದಿನಕ್ಕೆ ₹400 ಕೂಲಿ ನೀಡಲಾಗುವುದು ಎಂದು ಭರವಸೆ ನೀಡಿದರು. 

ANIಗೆ‌ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಸಂದರ್ಶನದಲ್ಲಿ ಚುನಾವಣೆ ಬಾಂಡ್ ಕುರಿತು ಪ್ರಶ್ನೆ ಮಾಡಿದಾಗ, ಮೋದಿ ಅವರು ನಡುಗುತ್ತಾರೆ. ಇದನ್ನು ನೀವು ಆನ್ ಲೈನ್ ನಲ್ಲಿ ಲಭ್ಯವಿರುವ ಸಂದರ್ಶನದ ತುಣುಕುಗಳಲ್ಲಿ ನೋಡಬಹುದು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ ಎಂದು ನುಡಿದರು.

ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆ ಶಾಸಕರು. ಅವರು ಅಲ್ಲೇ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಬಹುದಿತ್ತು. ಆದರೆ ಸೋಲಿನ ಭಯದಿಂದ ಇಲ್ಲಿಗೆ ಬಂದು NDA ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಇಲ್ಲೂ ಖಚಿತವಾಗಿ ಸೋಲಿಸಲು ಮಂಡ್ಯ ಜಿಲ್ಲೆಯ ಜನತೆ ನಿರ್ಧರಿಸಿದ್ದಾರೆ. ಹೀಗಾಗಿ ಸೋಲು ಕಟ್ಟಿಟ್ಟ ಬುತ್ತಿ ಎಂದು ಸ್ಪಷ್ಟವಾಗಿ ನುಡಿದರು. 

ನರೇಂದ್ರ ಮೋದಿಯವರ ಅಚ್ಚೆ ದಿನ್ 10 ವರ್ಷ ಕಳೆದರೂ ಭಾರತೀಯರಿಗೆ ಬಂದಿಲ್ಲ. ರಾಜ್ಯದ ಜನತೆಗೆ ಅಚ್ಚೆ ದಿನ್ ಕಾಣಿಸಿಯೇ ಇಲ್ಲ. ಮೋದಿಯವರ ಕಾರಣದಿಂದ ಏರಿಕೆಯಾಗಿದ್ದ ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ, ಬೇಳೆ-ಕಾಳು, ಅಡುಗೆ ಎಣ್ಣೆ ಸೇರಿ ಎಲ್ಲದರ ಬೆಲೆ ಏರಿಕೆ ನೀತಿಯಿಂದ ಹೈರಾಣಾಗಿದ್ದ ರಾಜ್ಯದ ಜನರ ಬದುಕಿನ‌ ಕಷ್ಟಗಳಿಗೆ ಸ್ಪಂದಿಸುವ ಉದ್ದೇಶದಿಂದ ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಿಂದ ರಾಜ್ಯದ ಪ್ರತಿ ಕುಟುಂಬಗಳಿಗೆ, ಪ್ರತಿ ತಿಂಗಳು 5 ರಿಂದ 6 ಸಾವಿರ ರೂಪಾಯಿ ಒದಗಿ ಬರುವಂಥಾ ನೆರವಿನ ಕಾರ್ಯಕ್ರಮಗಳನ್ನು ನೀಡಿದ್ದೇವೆ ಎಂದರು. 

ರಾಜ್ಯದ ಜನರಿಗೆ ಅನ್ನಭಾಗ್ಯದ ಅಕ್ಕಿ ಕೊಡ ಕೊಡದಂತೆ ಮೋದಿಯವರ ಕೇಂದ್ರ ಸರ್ಕಾರ ತೊಂದರೆ ಕೊಟ್ಟರೂ ಕೂಡ ನಾವು ಅಕ್ಕಿ ಜೊತೆಗೆ ಹಣವನ್ನೂ ನಮ್ಮ ಜನರ ಬದುಕಿಗೆ ಕೊಡುತ್ತಿದ್ದೇವೆ ಎಂದರು. 

ಕೊಟ್ಟ ಮಾತಿನಂತೆ ನಡೆದುಕೊಂಡವರು ಯಾರು ಎನ್ನುವುದನ್ನು ನಿಮ್ಮ ಹೃದಯಕ್ಕೆ ಕೇಳಿ ಕೊಳ್ಳಿ. ಅವರಿಗೆ ಮಾತ್ರ ನಿಮ್ಮ ಮತ ನೀಡಿ. ರಾಜ್ಯದಲ್ಲಿ ಬಿಜೆಪಿಯಿಂದ ಗೆದ್ದ 27 ಸಂಸದರು ರಾಜ್ಯದ ಸಮಸ್ಯೆಗಳ ಬಗ್ಗೆ ನೆಪಕ್ಕೂ ಧ್ವನಿ ಎತ್ತದೆ ರಾಜ್ಯದ ಜನರಿಂದ ಪಡೆದ ಮತಕ್ಕೆ ಅವಮಾನ ಮಾಡಿದರು. ಈ ಅವಮಾನಕ್ಕೆ ತಕ್ಕ ಉತ್ತರ ನೀಡಿ ರಾಜ್ಯದ ಜನತೆಯ ಪರವಾಗಿ ಧ್ವನಿ ಎತ್ತುವ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಮಂಡ್ಯ ಜನತೆಯ ಸ್ವಾಭಿಮಾನಿ ತಾಕತ್ತನ್ನು ತೋರಿಸಿ ಎಂದು ಕರೆ ನೀಡಿದರು. 

ಶ್ರೀರಾಮನವಮಿಯ ಶುಭಾಶಯ ಕೋರಿದ ಸಿಎಂ: ಇದೇ ಸಂದರ್ಭದಲ್ಲಿ ಶ್ರೀರಾಮನವಮಿಯ ಶುಭಾಶಯಗಳನ್ನು ಮಂಡ್ಯದ ಜನತೆಗೆ ಮತ್ತು ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಅವರು ಕೋರಿ ಎಲ್ಲರೂ ಭಕ್ತಿ ಶ್ರದ್ದೆ ಮತ್ತು ಸಂಭ್ರಮದಿಂದ ರಾಮನವಮಿ ಆಚರಿಸುವಂತೆ ಕೋರಿದರು. 

ಭಾವನಾತ್ಮಕವಾಗಿ ಕೆರಳಿಸಿ ವಂಚಿಸುವವರಿಗೆ ಮಾನ್ಯತೆ ಕೊಡಬೇಡಿ: ಭಾರತೀಯರ ಭಾವನೆಗಳನ್ನು ಭಾವನಾತ್ಮಕವಾಗಿ ಕೆರಳಿಸಿ, ನಮ್ಮ ಬದುಕಿಗೆ ವಂಚಿಸುವವರಿಗೆ ಮಾನ್ಯತೆ ಕೊಡಬೇಡಿ. ಜನರ ಕಷ್ಟಗಳಿಗೆ ಸ್ಪಂದಿಸುವ ನಮಗೆ ಶಕ್ತಿ ಕೊಡಿ. ನೀವು ಕೊಟ್ಟ ಶಕ್ತಿ ನಿಮ್ಮ ಮನೆ ಬಾಗಿಲಿಗೇ ವಾಪಾಸ್ ಉತ್ತಮ ಕಾರ್ಯಕ್ರಮಗಳ ರೂಪದಲ್ಲಿ ವಾಪಾಸ್ ಬರುತ್ತದೆ ಎಂದು ಘೋಷಿಸಿದರು. 

KPCC ಅಧ್ಯಕ್ಷರಾದ ಡಿಸಿಎಂ ಡಿಕೆ ಶಿವಕುಮಾರ್ , ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್ ಸೇರಿ ಮೈಸೂರು, ಮಂಡ್ಯ ಜಿಲ್ಲೆಯ ಶಾಸಕರುಗಳು, ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

health

HL

politics

HL

economy

HL

politics

HL

politics

HL

politics

HL

health

HL

politics

HL

economy

HL

literature

HL

politics

HL

literature

HL

politics

HL

politics

HL

others

HL

politics

HL

crime

HL

education

HL

politics

HL

politics

HL

politics

HL

politics

HL

politics

HL

crime

HL

politics

HL

politics

HL

others

HL

literature

HL

others

HL

literature