ಡಿಸಿ ಕೈ ಸೇರಿದ ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಶಾಲೆ, ಅಂಗನವಾಡಿಗಳ ಮೂಲ ಸೌಕರ್ಯಗಳ ಮಾಹಿತಿ ವರದಿ
ಡಿಸಿ ಕೈ ಸೇರಿದ ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಶಾಲೆ, ಅಂಗನವಾಡಿಗಳ ಮೂಲ ಸೌಕರ್ಯಗಳ ಮಾಹಿತಿ ವರದಿ

ದೊಡ್ಡಬಳ್ಳಾಪುರ, (ಜೂ.22); ನಗರ ಮತ್ತು ಗ್ರಾಮಾಂತರಗಳಲ್ಲಿನ ಸರ್ಕಾರಿ ಶಾಲೆಗಳು, ಅಂಗನವಾಡಿಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿನ ಮೂಲಸೌಕರ್ಯಗಳ ವಸ್ತುಸ್ಥಿತಿ ಕುರಿತು ಕಳೆದ 6 ತಿಂಗಳಿಂದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅರೆಕಾಲಿಕ ಸ್ವಯಂಸೇವಕ ಕೃಷ್ಣಪ್ರಸಾದ್ ನಡೆಸಿದ ಮಾಹಿತಿ ಸಂಗ್ರಹದ ವಿವರವನ್ನು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಗೆ ಸಲ್ಲಿಸಲಾಯಿತು. 

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿದ್ದ ಸಂದೀಪ್ ಸಾಲಿಯಾನ ಅವರ ಮಾರ್ಗದರ್ಶನದಂತೆ ಎಲ್ಲಾ ಸರ್ಕಾರಿ ಶಾಲೆಗಳು ಹಾಗೂ ಅಂಗನವಾಡಿಗಳು ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿತ್ತು. 

ಈ ವೇಳೆ 490 ಶಾಲೆ ಹಾಗೂ 370 ಅಂಗನವಾಡಿಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳು ಹಾಗೂ ಮೂಲಸೌಕರ್ಯಗಳ ಕೊರತೆ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ. ಈ ವೇಳೆ ಶಾಲಾ ವ್ಯಾಪ್ತಿಯಲ್ಲಿ ಗ್ರಾಪಂ, ಅರಣ್ಯ ಇಲಾಖೆ, ವಿದ್ಯುತ್ ಇಲಾಖೆ, ಪೊಲೀಸ್ ಇಲಾಖೆ, ಅಬಕಾರಿ ಇಲಾಖೆಗಳ ವ್ಯಾಪ್ತಿ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಗಣನೀಯವಾಗಿ ಎನಿಸಿದೆ ಎಂದು ತಿಳಿಸಿದರು. 

ಈ ಕುರಿತು ಪ್ರತಿಕ್ರಿಯಿಸಿದ ಕೃಷ್ಣ ಪ್ರಸಾದ್, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಅಗಾಧ ಪ್ರಮಾಣದ ಸಮಸ್ಯೆಗಳಿದ್ದು, ಸಂಬಂಧಿಸಿದ ಇಲಾಖೆಗಳು ಸೂಕ್ತ ಕ್ರಮ ವಹಿಸುವುದು ಅಗತ್ಯ. ಈ ಬಗ್ಗೆ ಸಮಗ್ರ ಮಾಹಿತಿಯನ್ನು ಈಗಾಗಲೇ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಬಿ.ಗೀತಾ ಅವರಿಗೂ ಮಾಹಿತಿ ನೀಡಿರುವುದಾಗಿ ತಿಳಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

-->

Latest News

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime

HL

sports

HL

others