ಬಿಜೆಪಿಯ ಫೇಕ್ ನ್ಯೂಸ್‌ ಶೂರರು ಹರಿಬಿಟ್ಟಿರುವ ಅರ್ಧಂಬರ್ಧ ವಿಡಿಯೋ ಶೇರ್ ಮಾಡಬೇಡಿ; ಸಿಎಂ ಸಿದ್ದರಾಮಯ್ಯ
ಬಿಜೆಪಿಯ ಫೇಕ್ ನ್ಯೂಸ್‌ ಶೂರರು ಹರಿಬಿಟ್ಟಿರುವ ಅರ್ಧಂಬರ್ಧ ವಿಡಿಯೋ ಶೇರ್ ಮಾಡಬೇಡಿ; ಸಿಎಂ ಸಿದ್ದರಾಮಯ್ಯ

ಬೆಂಗಳೂರು, (ಜುಲೈ.02); ವಾಟ್ಸ್‌ ಆಪ್‌ ನಲ್ಲಿ ಬಿಜೆಪಿ ಕೃಪಾಪೋಷಿತ ಫೇಕ್ ನ್ಯೂಸ್‌ ಶೂರರು ಹರಿಬಿಟ್ಟಿರುವ ಅರ್ಧಂಬರ್ಧ ವಿಡಿಯೋ ನೋಡಿ ಅದನ್ನು ಇತರರಿಗೂ ಶೇರ್‌ ಮಾಡದಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಲೋಕಸಭೆ ಸೋಮವಾರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾತನಾಡಿರುವ ವಿಡಿಯೋ ಶೇರ್ ಮಾಡಿರುವ ಅವರು, 'ಭಯಪಡಬೇಡಿ, ಭಯಗೊಳಿಸಬೇಡಿ' ಎಂದು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಸೇರಿದಂತೆ ಎಲ್ಲ ಧರ್ಮಗಳು ಸಾರಿ ಹೇಳಿವೆ. ಆದರೆ ಬಿಜೆಪಿಯಲ್ಲಿ ಹಿಂದುಗಳೆಂದು ಹೇಳಿಕೊಳ್ಳುವವರ ಕೆಲಸವೇ ಹಿಂಸೆ, ಭಯ ಮತ್ತು ಸುಳ್ಳು ಹರಡುವುದು." ಹೀಗೆಂದು ವಿರೋಧಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಹೇಳಿದರೆ ಬಿಜೆಪಿ ನಾಯಕರೇಕೆ ಉರಿದು ಬೀಳಬೇಕು? ಎಂದು ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿ ಅವರಿಗೆ, ಆರ್.‌ಎಸ್.‌ಎಸ್‌ ನವರಿಗೆ, ಬಿಜೆಪಿಯವರಿಗೆ ಗುರಿಯಾಗಿಸಿ ಹೇಳಿದರೆ ಅದು ಇಡೀ ಹಿಂದೂ ಧರ್ಮಕ್ಕೆ ಹೇಳಿದಂತಾಗುತ್ತದೆಯೇ? ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಇಂದು ಸಂಸತ್ತಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಲಾಗದ ಬಿಜೆಪಿ, ತನಗೆ ಹೇಳಿದ ಮಾತನ್ನು ಹಿಂದೂ ಧರ್ಮಕ್ಕೆ ಹೇಳಿದ್ದಾರೆ ಎಂದು ತಿರುಚಿ ತನ್ನ ವೈಫಲ್ಯ ಮರೆಮಾಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ. 

ವಾಟ್ಸ್‌ ಆಪ್‌ ನಲ್ಲಿ ಬಿಜೆಪಿ ಕೃಪಾಪೋಷಿತ ಫೇಕ್ ನ್ಯೂಸ್‌ ಶೂರರು ಹರಿಬಿಟ್ಟಿರುವ ಅರ್ಧಂಬರ್ಧ ವಿಡಿಯೋ ನೋಡಿ ಅದನ್ನು ಇತರರಿಗೂ ಶೇರ್‌ ಮಾಡದಿರಿ. ಸತ್ಯ ಏನೆಂಬುದನ್ನು ಒಳಗೊಂಡ ಪೂರ್ತಿ ವಿಡಿಯೋ ಇಲ್ಲಿದೆ ಎಂದು ವಿಡಿಯೋ ಶೇರ್ ಮಾಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

others

HL

politics

HL

economy

HL

politics

HL

art

HL

politics

HL

politics

HL

crime

HL

health

HL

crime

HL

others

HL

crime

HL

others

HL

others

HL

others

HL

sports

HL

others

HL

others

HL

others

HL

crime

HL

others

HL

politics

HL

politics

HL

sports

HL

politics

HL

crime

HL

health

HL

politics

HL

politics