ಸತ್ಸಂಗ ಧಾರ್ಮಿಕ ಕಾರ್ಯಕ್ರಮದಲ್ಲಿ ದುರಂತ; ಕಾಲ್ತುಳಿತಕ್ಕೆ 27ಕ್ಕೂ ಹೆಚ್ಚು ಮಂದಿ ಸಾವು..!
ಸತ್ಸಂಗ ಧಾರ್ಮಿಕ ಕಾರ್ಯಕ್ರಮದಲ್ಲಿ ದುರಂತ; ಕಾಲ್ತುಳಿತಕ್ಕೆ 27ಕ್ಕೂ ಹೆಚ್ಚು ಮಂದಿ ಸಾವು..!

ಲಕ್ನೋ, (ಜುಲೈ.02): ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ  ಮಂಗಳವಾರ ನಡೆದ ಸತ್ಸಂಗ ಧಾರ್ಮಿಕ ಕಾರ್ಯಕ್ರಯವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 27ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ರತಿಭಾನಪುರದಲ್ಲಿ ಶಿವನ ಸತ್ಸಂಗ ಧಾರ್ಮಿಕ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮ ಮುಗಿಯುತ್ತಿದ್ದಂತೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ ಎನ್ನಲಾಗಿದೆ.

ಈ ಸಂದರ್ಭ ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಗಾಯಗೊಂಡಿದ್ದರು. ಒಟ್ಟು 15 ಮಹಿಳೆಯರು ಮತ್ತು ಮಕ್ಕಳನ್ನು ಎಟಾಹ್ ಮೆಡಿಕಲ್ ಕಾಲೇಜಿಗೆ ಕರೆದೊಯ್ಯಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ನಾವು ಇಲ್ಲಿಯವರೆಗೆ 25 ಮಹಿಳೆಯರು ಸೇರಿದಂತೆ ಒಟ್ಟು 27 ಶವಗಳನ್ನು ಸ್ವೀಕರಿಸಿದ್ದೇವೆ ಎಂದು ಸಾವುಗಳನ್ನು ದೃಢೀಕರಿಸಿದ ಮುಖ್ಯ ವೈದ್ಯಾಧಿಕಾರಿ ರಾಜ್‌ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ.

ಘಟನೆಯನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿನಾಥ್ ಅವರು ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿರುವ ಮುಖ್ಯಮಂತ್ರಿಗಳು, ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

others

HL

politics

HL

economy

HL

politics

HL

art

HL

politics

HL

politics

HL

crime

HL

health

HL

crime

HL

others

HL

crime

HL

others

HL

others

HL

others

HL

sports

HL

others

HL

others

HL

others

HL

crime

HL

others

HL

politics

HL

politics

HL

sports

HL

politics

HL

crime

HL

health

HL

politics

HL

politics