ನೂರಾರು ಜನರ ಸಾವೀಗೀಡಾದ ಕಾರ್ಯಕ್ರಮ ರೂವಾರಿ ಯಾರ್ ಗೊತ್ತಾ.?; ಭೋಲೆ ಬಾಬಾ ಆಧ್ಯಾತ್ಮ ಪ್ರವಚನ ಕೇಳಲು ತೆರಳಿದ್ದ ವೇಳೆ ದುರ್ಘಟನೆ
ನೂರಾರು ಜನರ ಸಾವೀಗೀಡಾದ ಕಾರ್ಯಕ್ರಮ ರೂವಾರಿ ಯಾರ್ ಗೊತ್ತಾ.?; ಭೋಲೆ ಬಾಬಾ ಆಧ್ಯಾತ್ಮ ಪ್ರವಚನ ಕೇಳಲು ತೆರಳಿದ್ದ ವೇಳೆ ದುರ್ಘಟನೆ

ಉತ್ತರಪ್ರದೇಶ, (ಜುಲೈ.03); ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ಇಂದು ನಡೆದ ಸತ್ಸಂಗದಲ್ಲಿ ಕಾಲ್ತುಳಿತ ಉಂಟಾಗಿ 130ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ.

ಆಸ್ಪತ್ರೆಯಲ್ಲಿ ಭದ್ರತಾ ಡ್ಯೂಟಿಗೆ ನಿಯೋಜನೆಯಾಗಿದ್ದ ರಜನೀಶ್ ಎಂಬ ಪೋಲೀಸ್ ಇಟಾಹ್ ಜಿಲ್ಲಾ ಆಸ್ಪತ್ರೆಯಲ್ಲಿ ಬಿದ್ದಿದ್ದ ಹೆಣಗಳ ರಾಶಿಯನ್ನು ನೋಡಿದ ನಂತರ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ತುರ್ತು ಕರ್ತವ್ಯದಲ್ಲಿದ್ದ ರಜನೀಶ್ ಎಂದು ಗುರುತಿಸಲಾಗಿದೆ.

130 ಜನರ ಸಾವಿಗೆ ಕಾರಣವಾದ ಸತ್ಸಂಗ ಕಾರ್ಯಕ್ರಮದ ರೂವಾರಿ ಸ್ವಯಂ ಘೋಷಿತ ಗುರು ಭೋಲೆ ಬಾಬಾ ಅಲಿಯಾಸ್ ನಾರಾಯಣ್ ಸಾಕರ್ ಹರಿ, ಮಾಜಿ ಗುಪ್ತಚರ ಇಲಾಖೆ ಅಧಿಕಾರಿಯಾಗಿದ್ದರು ಎಂಬ ಅಂಶ ಈಗ ಚರ್ಚೆಗೆ ಕಾರಣವಾಗಿದೆ.

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಪ್ರವಚನ ಕಾರ್ಯಕ್ರಮದ ವೇಳೆ ಕಾಲ್ತುಳಿದಲ್ಲಿ ಹಲವಾರು ಮಕ್ಕಳು ಸೇರಿದಂತೆ ನೂರಾರು ಮಂದಿ ಅಸುನೀಗಿದ್ದಾರೆ. ಭೋಲೆ ಬಾಬಾ ಆಧ್ಯಾತ್ಮ ಪ್ರವಚನ ಕೇಳಲು ಸಾವಿರಾರು ಸಂಖ್ಯೆಯಲ್ಲಿ ಸತ್ಸಂಗದಲ್ಲಿ ಸೇರಿದ್ದಾಗ ಈ ದುರ್ಘಟನೆ ಸಂಭವಿಸಿತ್ತು. 

1990ರಲ್ಲಿ ಆಧ್ಯಾತ್ಮ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಭಕ್ತರನ್ನು ಆಧ್ಯಾತ್ಮದ ಕಡೆ ಕರೆದೊಯ್ಯಲು ಆರಂಭಿಸಿದಾಗ ನಾನಿನ್ನು ಗುಪ್ತಚರ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದೆ. ನಂತರ ನನ್ನ ಕೆಲಸಕ್ಕೆ ರಾಜೀನಾಮೆ ನೀಡಿದೆ ಎಂದು ನಾರಾಯಣ್ ಸಾಕರ್ ಹರಿ ಹೇಳಿಕೊಂಡಿದ್ದಾರೆ.

ಉತ್ತರ ಪ್ರದೇಶದ ಈಥ್ ಜಿಲ್ಲೆಯ ಬಹದ್ದೂರ್ ನಗರಿಯಲ್ಲಿ ಜನಿಸಿದ ನಾರಾಯಣ್ ಸಾಕರ್ ಹರಿ ವಿದ್ಯಾಭ್ಯಾಸವನ್ನು ಇಲ್ಲಿಯೇ ಪೂರ್ಣಗೊಳಿಸಿದರು. ಪದವಿ ಮುಗಿಯುತ್ತಿದ್ದಂತೆ ಗುಪ್ತಚರ ಇಲಾಖೆಯಲ್ಲಿ ಕೆಲಸಕ್ಕೆ ಸೇರಿಕೊಂಡೆ. ನಂತರ ಆಧ್ಯಾತ್ಮದತ್ತ ಸೆಳೆತ ಉಂಟಾಗಿ ಆಕಡೆ ವಾಲಿದೆ ಎಂದು ಅವರು ಪ್ರವಚನದ ವೇಳೆ ಹೇಳಿದ್ದರು.

ನಾರಾಯಣ್ ಸಾಕರ್ ಹರಿ ಕೇಸರಿ ಬಣ್ಣದ ವಸ್ತ್ರ ಧರಿಸದೇ ಬಿಳಿ ಬಣ್ಣದ ಕುರ್ತ-ಪೈಜಾಮಾ ಮತ್ತು ಸೂಟ್ ಮತ್ತು ಟೈ ಧರಿಸುತ್ತಿದ್ದರು. ದೇಣಿಗೆಯಿಂದ ಬರುವ ಹಣವನ್ನು ನಾನು ಇಟ್ಟುಕೊಳ್ಳದೇ ಭಕ್ತರಿಗೆ ಹಂಚುತ್ತೇನೆ ಎಂದು ಅವರು ಹೇಳಿಕೊಂಡಿದ್ದಾರೆ.

ನನ್ನನ್ನು ಹರಿಯೇ ಕಳುಹಿಸಿದ್ದು, ಅವನ ಸಂದೇಶಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದ್ದೇನೆ ಎಂದು ನಾರಾಯಣ್ ಸಾಕರ್ ಹರಿ ಭಾಷಣ ಮಾಡುತ್ತಿದ್ದರು.

ಅತ್ಯಂತ ಕಡಿಮೆ ಜಾಗದಲ್ಲಿ ಒಂದು ಸಮುದಾಯದ ಹೆಚ್ಚು ಜನರು ಸೇರಿದ್ದರಿಂದ ಇಕ್ಕಟ್ಟಾಗಿತ್ತು. ಘಟನೆ ನಡೆದಾಗ ಹೊರಗೆ ಹೋಗಲು ನೂಕುನುಗ್ಗಲು ಉಂಟಾಗಿದ್ದರಿಂದ ಕಾಲ್ತುಳಿತ ಸಂಭವಿಸಿದ್ದು, ಯಾವ ಕಾರಣಕ್ಕೆ ಈ ಘಟನೆ ಸಂಭವಿಸಿತ್ತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹತ್ರಾಸ್ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಅಪಘಾತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಅನೇಕ ಭಕ್ತರ ಸಾವಿನ ಸುದ್ದಿ ಹೃದಯ ವಿದ್ರಾವಕವಾಗಿದೆ. ಅವರ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ ಎಂದು ಎಕ್ಸ್​ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪೋಸ್ಟ್ ಮಾಡಿದ್ದಾರೆ.

ಪ್ರಧಾನಿ ಮೋದಿಯವರು ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

“ಹತ್ರಾಸ್​ನ ಘಟನೆಯು ಅತ್ಯಂತ ದುಃಖಕರ ಮತ್ತು ಹೃದಯ ವಿದ್ರಾವಕವಾಗಿದೆ. ಸ್ಥಳೀಯ ಸಂಘಟಕರು ‘ಭೋಲೆ ಬಾಬಾ’ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ಕಾರ್ಯಕ್ರಮದ ನಂತರ, ಸತ್ಸಂಗದ ಪ್ರಚಾರಕರು ವೇದಿಕೆಯಿಂದ ಕೆಳಗಿಳಿಯುತ್ತಿದ್ದಂತೆ ಅವರನ್ನು ಸ್ಪರ್ಶಿಸಲು ಭಕ್ತ ಸಮೂಹವು ಅವರ ಕಡೆಗೆ ನುಗ್ಗಿತು. ಸ್ವಯಂಸೇವಕರು ಅವರನ್ನು ತಡೆಯಲು ಪ್ರಯತ್ನಿಸಿದಾಗ ಈ ಕಾಲ್ತುಳಿತ ಸಂಭವಿಸಿದೆ” ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

politics

HL

economy

HL

politics

HL

art

HL

politics

HL

politics

HL

crime

HL

health

HL

crime

HL

others

HL

crime

HL

others

HL

others

HL

others

HL

sports

HL

others

HL

others

HL

others

HL

crime

HL

others

HL

politics

HL

politics

HL

sports

HL

politics

HL

crime

HL

health

HL

politics

HL

politics

HL

education