ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​
ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​

ಬೆಂಗಳೂರು, (ಜುಲೈ.04): ಶೀಘ್ರವೇ ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಯೂನಿಫಾರ್ಮ್ ಕೊಡುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ತಿಳಿಸಿದರು.

ಬೆಂಗಳೂರಿನ ಗೃಹಕಚೇರಿಯಲ್ಲಿ ಇಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿ ಕಾರ್ಯಕರ್ತರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಸಚಿವೆ ಆಲಿಸಿದರು.

ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸುವ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರೂ ಒಪ್ಪಿಗೆ ಸೂಚಿಸಿದ್ದಾರೆ ಎಂದರು.

ಇದಲ್ಲದೇ ಮಾಂಟೆಸ್ಸರಿ ತರಗತಿಗಳು ಆರಂಭಗೊಂಡ ನಂತರ ಅಂಗನವಾಡಿ ಹೆಸರನ್ನು ಬದಲಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮಾಹಿತಿ ನೀಡಿದರು. ಅಂಗನವಾಡಿ ಕೇಂದ್ರಗಳ ಅಸ್ತಿತ್ವದ ಬಗ್ಗೆ ಸಿಎಂ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೂ ಚರ್ಚೆ ನಡೆಸಲಾಗಿದ್ದು, ಈ ಬಗ್ಗೆ ಕಾರ್ಯಕರ್ತೆಯರು ಯಾವುದೇ ಆತಂಕಕ್ಕೆ ಒಳಗಾಗಬೇಡಿ ಎಂದು ತಿಳಿಸಿದರು.

ಈ ವೇಳೆ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಜಯಮ್ಮ, ಕಾರ್ಯದರ್ಶಿ ಬಿ. ಅಮ್ಜದ್ ಸೇರಿದಂತೆ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

health

HL

others

HL

politics

HL

crime

HL

crime

HL

politics

HL

crime

HL

crime

HL

others

HL

economy

HL

economy

HL

travel

HL

health

HL

others

HL

politics

HL

others

HL

health

HL

crime

HL

others

HL

others

HL

politics

HL

others

HL

others

HL

politics

HL

others

HL

crime

HL

others

HL

others

HL

politics

HL

politics