ಉಪಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇಮಕ
ಉಪಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇಮಕ

ಬೆಂಗಳೂರು, (ಜುಲೈ.04): ರಾಜ್ಯದ ನೂತನ ಉಪಲೋಕಾಯುಕ್ತರಾಗಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ನೇಮಕಗೊಳಿಸಿ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಆದೇಶ ಹೊರಡಿಸಿದ್ದಾರೆ.

ಬಿ.ವೀರಪ್ಪ ಅವರು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನವರು. 2023ರ ಮೇ ತಿಂಗಳಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತರಾಗಿದ್ದರು.

ರಾಜ್ಯ ಉಪಲೋಕಾಯುಕ್ತರ ಎರಡು ಹುದ್ದೆಗಳಲ್ಲಿ ಒಂದು ಹುದ್ದೆ ಖಾಲಿ ಇತ್ತು. ಎರಡನೇ ಉಪಲೋಕಾಯುಕ್ತರ ಹುದ್ದೆಗೆ ವೀರಪ್ಪ ಅವರು ನೇಮಕಗೊಂಡಿದ್ದು ಐದು ವರ್ಷ ಅಧಿಕಾರಾವಧಿ ಇದೆ.

ಈ ಹುದ್ದೆ ಭರ್ತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ, ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್‌, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಅವರೊಂದಿಗೆ ಸಮಾಲೋಚನೆ ನಡೆಸಿ ವೀರಪ್ಪ ಅವರ ನೇಮಕಕ್ಕೆ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

health

HL

others

HL

politics

HL

crime

HL

crime

HL

politics

HL

crime

HL

crime

HL

others

HL

economy

HL

economy

HL

travel

HL

health

HL

others

HL

politics

HL

others

HL

health

HL

crime

HL

others

HL

others

HL

politics

HL

others

HL

others

HL

politics

HL

others

HL

crime

HL

others

HL

others

HL

politics