ಕೆಲವರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ: ಹೆಚ್‌ಡಿಕೆಗೆ ಡಿಕೆಶಿ ತಿರುಗೇಟು
ಕೆಲವರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ: ಹೆಚ್‌ಡಿಕೆಗೆ ಡಿಕೆಶಿ ತಿರುಗೇಟು

ಬೆಂಗಳೂರು, (ಜುಲೈ.05); ಕೆಲವರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತಾಡುತ್ತಿರುವುದು ಬಹಳ ಸಂತೋಷದ ವಿಚಾರ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು.

ಮೂಡಾ ಹಗರಣ ಹೊರಬರುವಲ್ಲಿ ಡಿಸಿಎಂ ಶಿವಕುಮಾರ್ ಕೈವಾಡವಿದೆ ಎಂದು ಹೆಚ್‌.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಮಾಡಿರುವ ಆರೋಪದ ಬಗ್ಗೆ ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಪ್ರಶ್ನೆಗೆ ಡಿಕೆ ಶಿವಕುಮಾರ್ ಈ ರೀತಿ ಉತ್ತರಿಸಿದರು.

ಮಂಡ್ಯದಲ್ಲಿ ತಾವು ಮಾಡುತ್ತಿರುವ ಜನತಾದರ್ಶನಕ್ಕೆ ಅಧಿಕಾರಿಗಳು ಹೋಗಬಾರದೆಂದು ರಾಜ್ಯ ಸರ್ಕಾರದಿಂದ ಸೂಚನೆ ನೀಡಲಾಗಿದೆ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, ಜನರನ್ನು ಇಟ್ಟುಕೊಂಡು ಜನತಾ ದರ್ಶನ ಮಾಡಲಿ. ಹಳ್ಳಿ-ಹಳ್ಳಿ ತಿರುಗಲಿ, ಯಾರು ಬೇಡ ಎಂದರು. ಅಧಿಕಾರಿಗಳು ಶಿಷ್ಟಾಚಾರ ಪಾಲಿಸುತ್ತಾರೆ. ಅದರ ಪ್ರಕಾರ ಸಂಸದರನ್ನು ಹೇಗೆ ಸ್ವಾಗತಿಸಬೇಕೋ ಆ ರೀತಿ ಕೆಲಸ ಮಾಡುತ್ತಾರೆ. 

ನಾವು ದೆಹಲಿಗೆ ತೆರಳಿ ಅಲ್ಲಿನ ಅಧಿಕಾರಿಗಳನ್ನು ಬಳಸಿಕೊಳ್ಳಲು ಆಗುತ್ತದೆಯೇ? ಜನರಿಗೆ ಹೋಗಬೇಡಿ ಎಂದು ಹೇಳಲು ಆಗುತ್ತದೆಯೇ? ನನಗೆ ಈ ಆರೋಪದ ವಿಚಾರ ಗೊತ್ತೇ ಇಲ್ಲ. ನನಗೂ ಇದಕ್ಕೂ ಯಾವುದೇ ರೀತಿಯ ಸಂಬಂಧವೂ ಇಲ್ಲ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

health

HL

others

HL

politics

HL

crime

HL

crime

HL

politics

HL

crime

HL

crime

HL

others

HL

economy

HL

economy

HL

travel

HL

health

HL

others

HL

politics

HL

others

HL

health

HL

crime

HL

others

HL

others

HL

politics

HL

others

HL

others

HL

politics

HL

others

HL

crime

HL

others

HL

others

HL

politics