GOOD NEWS: ಎರಡ್ಮೂರು ದಿನಗಳಲ್ಲಿ ಗೃಹಲಕ್ಷ್ಮೀ ಹಣ ಖಾತೆಗೆ ಜಮೆ - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
GOOD NEWS: ಎರಡ್ಮೂರು ದಿನಗಳಲ್ಲಿ ಗೃಹಲಕ್ಷ್ಮೀ ಹಣ ಖಾತೆಗೆ ಜಮೆ - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬಳ್ಳಾರಿ, (ಜುಲೈ.06): ಎರಡ್ಮೂರು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದರು.

ಗಣಿನಾಡು ಬಳ್ಳಾರಿಯ ಪ್ರಸಿದ್ಧ ಅಧಿದೇವತೆ ಶ್ರೀ ಕನಕ ದುರ್ಗಮ್ಮ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ದರ್ಶನ ಪಡೆದು ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಕಳೆದ ಎರಡ್ಮೂರು ತಿಂಗಳಿನಿಂದ ಹಣ ಬಂದಿಲ್ಲ ಎಂಬ ವಿಚಾರ ಸುಳ್ಳು. ಮೇ 5ರವರೆಗೆ ಹಣ ಡಿಬಿಟಿ ಮೂಲಕ ರವಾನೆಯಾಗಿದೆ. ಇನ್ನು ಜೂನ್ ತಿಂಗಳದ್ದು ಡಿಬಿಟಿ ಎಲ್ಲ ರೆಡಿಯಾಗಿದ್ದು, ಇನ್ನೆರಡ್ಮೂರು ದಿನಗಳಲ್ಲೇ ಹಣ ಜಮೆಯಾಗಲಿದೆ ಎಂದರು.

ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ಸಿಗುವುದು ತಡವಾಗುತ್ತಿದೆ ಕಳೆದ 2-3 ತಿಂಗಳಿಂದ ಸಿಕ್ಕಿಲ್ಲ ಎಂಬ ಸುದ್ದಿ ಹುಸಿಯಾಗಿದೆ ಎಂದು ವಿವರಿಸಿದರು.

ಇನ್ನು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ SC/ST ಸಮುದಾಯದ ಹಣ ಬಳಕೆಯಾಗುತ್ತಿರುವ ಆರೋಪವಗಳನ್ನು ಸಚಿವೆ ಇದೇ ವೇಳೆ ತಳ್ಳಿ ಹಾಕಿದರು.

ನಂತರ ಬಳ್ಳಾರಿಯ ವಾಲ್ಮೀಕಿ ಸಮುದಾಯ ಭವನದ ಆವರಣದಲ್ಲಿ ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರ ಹಾಗೂ ವಿಶೇಷ ಚೇತನರ ಸಬಲೀಕರಣ ಇಲಾಖೆ ವತಿಯಿಂದ ಕೊಡ ಮಾಡಿದ ವಿಕಲಚೇತನರ ತ್ರಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ವಿತರಿಸಿದರು‌.


ಈ ವೇಳೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಮೇಯರ್ ಮುಲ್ಲಂಗಿ ನಂದೀಶ್‌, ಉಪಮೇಯರ್ ಸುಕೂಮ್, ಬುಡಾ ಅಧ್ಯಕ್ಷ ಎಸ್. ಆಂಜನೇಯಲು, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ, ಜಿ.ಪಂ. ಸಿಇಓ ರಾಹುಲ್ ಶರಣಪ್ಪ ಸಂಕನೂರು, ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್ ನಿಶ್ಚಲ್, ಇಲಾಖೆಯ ಉಪ ನಿರ್ದೇಶಕರಾದ ಕೆ.ಹೆಚ್. ವಿಜಯಕುಮಾರ್  ಮೊದಲಾದವರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime