ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ಡೆಂಘಿ ಆತಂಕ..!: ಬಿಜೆಪಿ ನಗರ ಘಟಕದಿಂದ ಸ್ವಚ್ಚತಾ ಕಾರ್ಯಕ್ಕೆ ಮನವಿ
ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ಡೆಂಘಿ ಆತಂಕ..!: ಬಿಜೆಪಿ ನಗರ ಘಟಕದಿಂದ ಸ್ವಚ್ಚತಾ ಕಾರ್ಯಕ್ಕೆ ಮನವಿ

ದೊಡ್ಡಬಳ್ಳಾಪುರ, (ಜುಲೈ.09); ನಗರಸಭೆ ವತಿಯಿಂದ ಕ್ರಮಬದ್ಧವಾಗಿ ಕೆಲಸ ಮಾಡದ ಕಾರಣ ನಗರ ವ್ಯಾಪ್ತಿಯಲ್ಲಿ ಸೊಳ್ಳೆ ಉತ್ಪತ್ತಿ ಜಾಸ್ತಿಯಾಗಿ, ಬಹಳಷ್ಟು ಕಡೆ ಜನರು ಡೆಂಗ್ಯೂ ಜ್ವರದಿಂದ ನರಳುತ್ತಿದ್ದು, ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಗರ ಬಿಜೆಪಿ ಘಟಕದ ಅಧ್ಯಕ್ಷ ಕೆ.ಬಿ.ಮುದ್ದಪ್ಪ ನೇತೃತ್ವದಲ್ಲಿ ನಗರಸಭೆ ಪೌರಾಯುಕ್ತರ ಪರವಾಗಿ ಎಇಇ ರಾಮೇಗೌಡರಿಗೆ ಮನವಿ ಸಲ್ಲಿಸಲಾಗಿದೆ.

ಮನವಿ ಪತ್ರದಲ್ಲಿ ಉಲ್ಲೇಖವಾದಂತೆ,, ದೊಡ್ಡಬಳ್ಳಾಪುರ ನಗರದಲ್ಲಿ ಸರಿಯಾಗಿ ಕಸವಿಲೇವಾರಿ ಮಾಡದಿರುವುದರಿಂದ, ಇತ್ತೀಚೆಗೆ ಮಳೆಯಿಂದ ರಸ್ತೆ ಬದಿಯಲ್ಲಿ ಮಳೆ ನೀರು ನಿಲ್ಲುತ್ತಿವೆ. ಅಲ್ಲದೆ ರಸ್ತೆ ಪಕ್ಕದಲ್ಲಿ ಇರುವ ಡಬ್ರಿಜ್ ಗಳನ್ನು ತೆಗೆಯುವ ವ್ಯವಸ್ಥೆ ಸಮರ್ಪಕವಾಗಿ ಇಲ್ಲದಿರುವುದು ಕಸ ಗುಡಿಸದೆ ಇರುವುದು, ಕೆರೆಯನ್ನು ಸ್ವಚ್ಛತೆಗೊಳಿಸದೆ ಇರುವುದು ಹಾಗೂ ಯು.ಜಿ.ಡಿ ಸರಿಯಾದ ರೀತಿಯಲ್ಲಿ ನಿರ್ವಹಣೆ ಇಲ್ಲದ ಕಾರಣದಿಂದ ದೊಡ್ಡಬಳ್ಳಾಪುರ ನಗರದಲ್ಲಿ ಸೊಳ್ಳೆಗಳ ಕಾಟ ಜಾಸ್ತಿಯಾಗಿ ಡೆಂಗ್ಯೂ ಜ್ವರದಿಂದ ಬಹಳಷ್ಟು ಜನರು ಬಳಲುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಗರಸಭೆ ವತಿಯಿಂದ ಡಿ.ಡಿ.ಟಿ ಹಾಗೂ ಔಷಧಿ ಸಿಂಪಡನೆ ಕ್ರಮ ಬದ್ಧವಾಗಿ ನಡೆಯದೆ ಇರುವುದು ಕೂಡ ಸೊಳ್ಳೆಗಳ ಉತ್ಪತ್ತಿ ಜಾಸ್ತಿಯಾಗಲು ಕಾರಣವಾಗಿರುತ್ತದೆ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಕೂಡಲೇ ನಗರ ಜನತೆಯ ಸುರಕ್ಷತೆಗೆ ಒತ್ತು ಕೊಟ್ಟು ಡೆಂಗ್ಯೂ ಹಾಗೂ ಸೊಳ್ಳೆಗಳು ಹರಡದಂತೆ ಕ್ರಮ ವಹಿಸಿ ನಗರದ ಜನತೆಗೆ ಸ್ವಚ್ಛ ಹಾಗೂ ಆರೋಗ್ಯಕರ ವಾತಾವರಣ ಇರುವಂತೆ ನೋಡಿಕೊಳ್ಳಬೇಕೆಂದು ಮನವಿ ಮಾಡಲಾಗಿದೆ.

ಈ ವೇಳೆ ಬಿಜೆಪಿ ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ ಗೋಪಿ, ವೈದ್ಯಕೀಯ  ಪ್ರಕೋಷ್ಠ ರಾಜ್ಯ ಸಂಚಾಲಕ ಡಾ.ಕೆ ನಾರಾಯಣ್, ಬಿಜೆಪಿ ಹಿರಿಯ ಮುಖಂಡರಾದಂತಹ ವೆಂಕಟರಾಜು, ಎಕೆ ರಮೇಶ್, ನೇಕಾರ ಪ್ರಕೋಷ್ಠ ರಾಜ್ಯ ಸಮಿತಿ ಸದಸ್ಯ ಎಲ್ ಮಹೇಶ, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಕೆಎಸ್ ಮಂಜುನಾಥ್, ಎಸ್ಸಿ ಮೋರ್ಚಾ ಅಧ್ಯಕ್ಷರಾದಂತ ಕುಮಾರ್, ಪ್ರಧಾನ ಕಾರ್ಯದರ್ಶಿ ಹನುಮಂತರಾಜು ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime