ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ರಾಮನಗರಕ್ಕೆ ಮರುನಾಮಕರಣ..!; ಸಿಎಂಗೆ ಮನವಿ| ದೊಡ್ಡಬಳ್ಳಾಪುರವನ್ನು ಕೇಂದ್ರವನ್ನಾಗಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂದು ಘೋಷಿಸಿರುವ ವರದಿ
ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ರಾಮನಗರಕ್ಕೆ ಮರುನಾಮಕರಣ..!; ಸಿಎಂಗೆ ಮನವಿ| ದೊಡ್ಡಬಳ್ಳಾಪುರವನ್ನು ಕೇಂದ್ರವನ್ನಾಗಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂದು ಘೋಷಿಸಿರುವ ವರದಿ

ಬೆಂಗಳೂರು, (ಜುಲೈ.09); ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮರುನಾಮಕರಣ ಮಾಡುವ ಮೂಲಕ ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿತು. 

ಮನವಿ ಪತ್ರದಲ್ಲಿ ಮೊದಲು ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲ್ಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು.

1986ರ ಸಾಲಿನಲ್ಲಿ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲ್ಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಲಾಯಿತು ಎಂದು ತಿಳಿಸಿದ್ದಾರೆ.

2007ರ ಸಾಲಿನಲ್ಲಿ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು.

ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕುಗಳನ್ನು ಸೇರಿಸಿಕೊಂಡು ಹೊಸದಾಗಿ ರಾಮನಗರ ಜಿಲ್ಲೆಯನ್ನಾಗಿ 2007ರಲ್ಲಿ ಘೋಷಿಸಿ, ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಲಾಯಿತು ಎಂದು ಉಲ್ಲೇಖಿಸಿದ್ದಾರೆ.

ಪ್ರಸ್ತುತ, ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲ್ಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನಮ್ಮ ಚಿಂತನೆಯೂ ಕೂಡ. ಆದ್ದರಿಂದ, ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡಲು ಕೋರುತ್ತೇವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, ನನ್ನ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ್ದೆವು. ನಾವೆಲ್ಲಾ ಬೆಂಗಳೂರಿನವರೇ. ಮೊದಲು ಬೆಂಗಳೂರು ಜಿಲ್ಲೆಗೆ ರಾಮನಗರ ಸೇರಿತ್ತು. ನಂತರ ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಯಿತು. ಈಗ ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ಕೋರಲಾಗಿದೆ. ಇದಕ್ಕೆ ಸಿಎಂ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಲಿದೆ. ಬಳಿಕ ಹೆಸರು ಬದಲಾವಣೆ ಆಗಲಿದೆ. ಈಗಿರುವ ರಾಮನಗರವೇ ಹೆಡ್ ಕ್ವಾಟ್ರಸ್ ಆಗಿರಲಿದೆ. ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ಬೆಂಗಳೂರು ದಕ್ಷಿಣ ವ್ಯಾಪ್ತಿಗೆ ಸೇರಲಿವೆ ಎಂದು ತಿಳಿಸಿದರು.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಡಿಕೆ ಶಿವಕುಮಾರ್ ನೇತೃತ್ವದ ನಿಯೋಗದಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗ ರೆಡ್ಡಿ, ಮಾಜಿ ಸಂಸದ ಡಿ.ಕೆ.ಸುರೇಶ್, ಮಾಜಿ ಶಾಸಕ ಸಿ.ಎಂ.ಲಿಂಗಪ್ಪ, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

economy

HL

crime

HL

others

HL

health

HL

crime

HL

others

HL

health

HL

politics

HL

politics

HL

politics

HL

others

HL

crime

HL

others

HL

economy

HL

crime

HL

others

HL

politics

HL

crime

HL

politics

HL

education

HL

others

HL

politics

HL

education

HL

others

HL

politics

HL

crime

HL

crime

HL

others

HL

others