ಗಮನಿಸಿ: ಹಸು-ಎಮ್ಮೆ ಖರೀದಿಸಲು ರೈತ ಮಹಿಳೆಯರಿಗೆ ಆರ್ಥಿಕ ನೆರವು
ಗಮನಿಸಿ: ಹಸು-ಎಮ್ಮೆ ಖರೀದಿಸಲು ರೈತ ಮಹಿಳೆಯರಿಗೆ ಆರ್ಥಿಕ ನೆರವು

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಜುಲೈ 09): ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖಾ ವತಿಯಿಂದ ಹೈನುಗಾರಿಕೆ ಪ್ರೋತ್ಸಾಹಿಸಲು ಹಸು, ಎಮ್ಮೆ ಖರೀದಿಗೆ ಪ್ರಸಕ್ತ ಸಾಲಿನಲ್ಲಿ ಹೈನುಗಾರಿಕೆಗಾಗಿ ವಿವಿಧ ಬ್ಯಾಂಕ್ ಗಳಲ್ಲಿ ಸಾಲ ಪಡೆಯುವ ಪ್ರತಿ ಫಲಾನುಭವಿಗಳು ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ರೈತ ಮಹಿಳೆಯರಿಗೆ ಪ್ರತಿ ತ್ರೈಮಾಸಿಕವಾಗಿ ಪಾವತಿ ಮಾಡುವ ಬಡ್ಡಿ ಮೊತ್ತದಲ್ಲಿನ ಶೇಕಡ 6 ರಷ್ಟನ್ನು (ರೂ.3625/-) ರಾಜ್ಯ ಸರ್ಕಾರದಿಂದ ಸಹಾಯಧನ ರೂಪದಲ್ಲಿ ನೀಡುವ ಯೋಜನೆ ಇರುತ್ತದೆ.   

ಈ ಕಾರ್ಯಕ್ರಮವನ್ನು ವಾಣಿಜ್ಯ ಬ್ಯಾಂಕ್ಗಳ ಸಮನ್ವಯದೊಂದಿಗೆ ಅನುಷ್ಟಾನಗೊಳಿಸಲಾಗುವುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಹೈನುಗಾರಿಕೆಗೆ ರಾಷ್ಟ್ರೀಕೃತ ಬ್ಯಾಂಕ್, ಗ್ರಾಮೀಣ ಬ್ಯಾಂಕ್ ಹಾಗೂ ಸಹಕಾರ ಬ್ಯಾಂಕ್‌ಗಳಲ್ಲಿ ಸಾಲ ಪಡೆಯುವ ರೈತ ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳನ್ನು ಅಥವಾ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸುವುದು.

ದೇವನಹಳ್ಳಿ ತಾಲ್ಲೂಕು ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ(ಆಡಳಿತ) ದೂ.ಸಂ-9945322938, ದೊಡ್ಡಬಳ್ಳಾಪುರ ತಾಲ್ಲೂಕು ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ (ಆಡಳಿತ) ದೂ.ಸಂ-9845305839, ಹೊಸಕೋಟೆ  ತಾಲ್ಲೂಕು ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ (ಆಡಳಿತ) ದೂ.ಸಂ-9480910509, ನೆಲಮಂಗಲ ತಾಲ್ಲೂಕು ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ (ಆಡಳಿತ) ದೂ.ಸಂ-9845637387 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖಾ ಜಿಲ್ಲಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

economy

HL

crime

HL

others

HL

health

HL

crime

HL

others

HL

health

HL

politics

HL

politics

HL

politics

HL

others

HL

crime

HL

others

HL

economy

HL

crime

HL

others

HL

politics

HL

crime

HL

politics

HL

education

HL

others

HL

politics

HL

education

HL

others

HL

politics

HL

crime

HL

crime

HL

others

HL

others