ಎಣ್ಣೆ ಏಟು; ನೆಲಮಂಗಲ ಬಿಜೆಪಿ ಅಧ್ಯಕ್ಷ ಅಮಾನತು...!
ಎಣ್ಣೆ ಏಟು; ನೆಲಮಂಗಲ ಬಿಜೆಪಿ ಅಧ್ಯಕ್ಷ ಅಮಾನತು...!

ಬೆಂಗಳೂರು, (ಜುಲೈ.09); ನೆಲಮಂಗಲದಲ್ಲಿ ನಡೆದಿದ್ದ ಸಂಸದ ಡಾ.ಕೆ.ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮತದಾರರಿಗೆ ಮದ್ಯ ಹಂಚಿಕೆ ಮಾಡಲಾದ ಹಿನ್ನೆಲೆಯಲ್ಲಿ ನೆಲಮಂಗಲ ಮಂಡಲ ಬಿಜೆಪಿ ಅಧ್ಯಕ್ಷ ಜಗದೀಶ್ ಚೌಧರಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್‌ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನೆಲಮಂಗಲದಲ್ಲಿ ನಡೆದಿದ್ದ ಅಭಿನಂದನಾ ಸಮಾರಂಭದಲ್ಲಿ ಮತದಾರರಿಗೆ ಮದ್ಯ ಹಂಚಿಕೆ ಮಾಡಲಾಗಿತ್ತು.

ಈ ವಿಡಿಯೋ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು,  ತತ್ವ, ಸಿದ್ದಾಂತ ಇಲ್ಲಿಗೆ ಬಂದಿದೆ ಎಂಬಂತೆ ಭಾರೀ ಟೀಕೆಗಳು ವ್ಯಕ್ತವಾಗಿದ್ದವು.

ಇದರಿಂದ ಅಪಹಾಸ್ಯಕ್ಕೀಡಾದ ಬಿಜೆಪಿ, ನೆಲಮಂಗಲ ಮಂಡಲ ಅಧ್ಯಕ್ಷ ಜಗದೀಶ್ ಚೌಧರಿ ಅವರನ್ನು 6 ವರ್ಷ ಕಾಲ ಉಚ್ಚಾಟನೆ ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಕೃಷ್ಣಪ್ಪ ಆದೇಶ ಹೊರಡಿಸಿದ್ದಾರೆ.

ಜುಲೈ 7 ರಂದು ನೆಲಮಂಗಲದಲ್ಲಿ ಆಯೋಜಿಸಲಾಗಿದ್ದ ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಸನ್ಮಾನ ಸಮಾರಂಭದಲ್ಲಿ ಸಮಾರಂಭ ನಡೆದಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ಮದ್ಯ ಹಂಚಿಕೆ ಮಾಡಲಾಗಿತ್ತು. ಅಲ್ಲದೇ ಎಣ್ಣೆಗಾಗಿ ಸಾರ್ವಜನಿಕರು ಸಹ ಮುಗಿಬಿದ್ದಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಿಜೆಪಿ ಮುಜುಗರ ಅನುಭವಿಸಿತ್ತು. ಈ ಬೆನ್ನಲ್ಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೂಚನೆ ಮೇರೆಗೆ ಜಗದೀಶ್ ಚೌಧರಿ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ಎಂದು ವರದಿಯಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

politics

HL

economy

HL

crime

HL

others

HL

health

HL

crime

HL

others

HL

health

HL

politics

HL

politics

HL

politics

HL

others

HL

crime

HL

others

HL

economy

HL

crime

HL

others

HL

politics

HL

crime

HL

politics

HL

education

HL

others

HL

politics

HL

education

HL

others

HL

politics

HL

crime

HL

crime

HL

others

HL

others