ಮಗು ಸೇರಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು.!
ಮಗು ಸೇರಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು.!

ಕೊಪ್ಪಳ, (ಮೇ.28);  ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಸಲಿಂಗಪುರದಲ್ಲಿ ಬೆಳಕಿಗೆ ಬಂದಿದೆ. 

ಮೃತರನ್ನು ರಾಜೇಶ್ವರಿ (50 ವರ್ಷ), ಮಗಳಾದ ವಸಂತಾ (28 ವರ್ಷ), ಮೊಮ್ಮಗ ಸಾಯಿ ಧರ್ಮತೇಜ (5 ವರ್ಷ) ಎಂದು ಗುರುತಿಸಲಾಗಿದೆ.

ಅಜ್ಜಿ ಮತ್ತು ಮೊಮ್ಮಗನ ಶವ ಬೆಡ್ ರೂಮ್‌ನಲ್ಲಿ ಪತ್ತೆಯಾಗಿದೆ. ವಸಂತಾಳ ಮೃತದೇಹ ಅಡುಗೆ ಮನೆಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ವಸಂತಾಳಿಗೆ ಆಂದ್ರಪ್ರದೇಶದ ನಂದ್ಯಾಲ ಗ್ರಾಮದ ವ್ಯಕ್ತಿ ಜೊತೆ ವಿವಾಹವಾಗಿತ್ತು. ಆದರೆ, ಎರಡು ವರ್ಷದ ಹಿಂದೆ ಪತಿಯಿಂದ ದೂರವಾಗಿದ್ದ ವಸಂತಾ, ನಂತರ ಹೊಸ‌‌ಲಿಂಗಾಪುರ ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದಳು.

ಹೊಸ‌‌ ಲಿಂಗಾಪುರ ಸಮೀಪದ ಬೊಂಬೆ ಪ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವಸಂತಾ, ಅನ್ಯ ಧರ್ಮದ ವ್ಯಕ್ತಿ ಜೊತೆ ಸಂಬಂಧ ಹೊಂದಿದ್ದಳು ಎನ್ನಲಾಗಿದೆ.

ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಈ ಬೀದಿಯಲ್ಲಿರುವ ಅಂಗಡಿಗಳ ಮುಂದಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ಆರೋಪಿ ಪತ್ತೆಗೆ ಬಲೆಬೀಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

politics

HL

crime

HL

economy

HL

others

HL

crime

HL

others

HL

politics

HL

others

HL

economy

HL

others

HL

agriculture

HL

others

HL

economy

HL

crime

HL

others

HL

politics

HL

others

HL

politics

HL

crime

HL

others

HL

education

HL

politics

HL

others

HL

others

HL

crime

HL

economy

HL

travel

HL

others

HL

literature