ಪ್ರಜ್ವಲ್‌ಗೆ ಜೂನ್ 24ರವರೆಗೆ ನ್ಯಾಯಾಂಗ ಬಂಧನ..!
ಪ್ರಜ್ವಲ್‌ಗೆ ಜೂನ್ 24ರವರೆಗೆ ನ್ಯಾಯಾಂಗ ಬಂಧನ..!

ಬೆಂಗಳೂರು, (ಜೂ.10); ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಕೇಸ್‌ಗೆ ಸಂಬಂಧಪಟ್ಟಂತೆ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೈಲೇ ಗತಿಯಾಗಿದೆ.

ಇದೀಗ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಮುಂದಿನ 14 ದಿನಗಳ ವರೆಗೆ (ಜೂನ್ 24ರವರೆಗೆ) ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಎಸ್‌ಐಟಿ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಎಸ್‌ಐಟಿ ಅಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟಿಗೆ ಹಾಜರುಪಡಿಸಿದ್ದರು. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಪ್ರಜ್ವಲ್ ರೇವಣಗೆ 14 ದಿನಗಳ ಕಾಲ ಅಂದರೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸಿಎಂಎಂ ಕೋರ್ಟ್ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು, ಶೀಘ್ರವೇ ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗುತ್ತದೆ.

ಪ್ರಜ್ವಲ್ ರೇವಣ್ಣ ಅವರನ್ನು ಎಸ ಐ ಟಿ ಅಧಿಕಾರಿಗಳು ಕೋರ್ಟಿಗೆ ಹಾಜರುಪಡಿಸಿದ್ದ ವೇಳೆ ಎಸ್‌ಐಟಿ ಅಧಿಕಾರಿಗಳು ಈ ವೇಳೆ ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿ ಸಲ್ಲಿಸಿದ್ದರು ಎಂದು ವರದಿಯಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

crime

HL

economy

HL

others

HL

crime

HL

others

HL

politics

HL

others

HL

economy

HL

others

HL

agriculture

HL

others

HL

economy

HL

crime

HL

others

HL

politics

HL

others

HL

politics

HL

crime

HL

others

HL

education

HL

politics

HL

others

HL

others

HL

crime

HL

economy

HL

travel

HL

others

HL

literature

HL

politics

HL

travel