ಮೋದಿಕಿ ಮೊದಲ ಗ್ಯಾರಂಟಿ; ಬಡವರಿಗೆ ಬಂಪರ್ ಕೊಡುಗೆ
ಮೋದಿಕಿ ಮೊದಲ ಗ್ಯಾರಂಟಿ; ಬಡವರಿಗೆ ಬಂಪರ್ ಕೊಡುಗೆ

ನವದೆಹಲಿ, (ಜೂ.10): ಲೋಕಸಭೆ ಚುನಾವಣೆಯಲ್ಲಿ ಬಹುಮತ ಪಡೆದು ಎನ್‌ಡಿಎ ಮೈತ್ತಿ ಕೂಟ ಸರಕಾರ ರಚಿಸಿ, ಮೂರನೇ ಅವಧಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿಯವರು ಇಂದು ಮೊದಲ ಸಂಪುಟ ಸಭೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಸಂಪುಟ ಸಭೆ ನಡೆದಿದ್ದು, 30 ಸಂಪುಟ ದರ್ಜೆ ಸಚಿವರು, ಐವರು ಸ್ವತಂತ್ರ ಖಾತೆ ನಿರ್ವಹಣೆ ಹಾಗೂ 31 ರಾಜ್ಯ ಖಾತೆ ಸಚಿವರು ಪಾಲ್ಗೊಂಡಿದ್ದರು.

ಮೊದಲ ಸಂಪುಟ ಸಭೆಯಲ್ಲಿಯೇ ಬಡವರಿಗೆ ಅನುಕೂಲವಾಗುವ ದಿಸೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದಕ್ಕೆ ಎಲ್ಲ ಸಚಿವರು ಸಹಮತ ಸೂಚಿಸಿದ್ದಾರೆ ಎನ್ನಲಾಗಿದೆ‌. ಇದರೊಂದಿಗೆ ಮೊದಲ ಸಂಪುಟ ಸಭೆಯಲ್ಲಿಯೇ ಬಡವರಿಗೆ ಅನುಕೂಲವಾಗುವ ತೀರ್ಮಾನ ತೆಗೆದುಕೊಂಡಂತಾಗಿದೆ.

ಸಭೆಯಲ್ಲಿ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ.

ಪಿಎಂ ಅವಾಸ್ ಯೋಜನೆಯಲ್ಲಿ ಹೆಚ್ಚುವರಿಯಾಗಿ 3 ಕೋಟಿ ಮನೆ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಡವರು ಸ್ವಂತ ಮನೆ ಕನಸನ್ನು ನನಸು ಮಾಡುವ ದಿಸೆಯಲ್ಲಿ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್‌ ಯೋಜನೆ ಜಾರಿಗೆ ತಂದಿದೆ.

ಯೋಜನೆ ಅಡಿಯಲ್ಲಿ ಫಲಾನುಭವಿಗಳು ಬಯಲು ಪ್ರದೇಶದಲ್ಲಿ ಮನೆ ನಿರ್ಮಿಸಿಕೊಳ್ಳಲು 1.20 ಲಕ್ಷ ರೂ. ನೀಡಲಾಗುತ್ತದೆ. ಇನ್ನು ಗುಡ್ಡಗಾಡು ಪ್ರದೇಶದಲ್ಲಿ ಮನೆ ನಿರ್ಮಿಸಿಕೊಳ್ಳಲು 1.30 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ. ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರವು ಸುಮಾರು 4.21 ಕೋಟಿ ಮನೆಗಳನ್ನು ನಿರ್ಮಿಸಿಕೊಟ್ಟಿದೆ ಎಂದು ಹೇಳಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

politics

HL

crime

HL

economy

HL

others

HL

crime

HL

others

HL

politics

HL

others

HL

economy

HL

others

HL

agriculture

HL

others

HL

economy

HL

crime

HL

others

HL

politics

HL

others

HL

politics

HL

crime

HL

others

HL

education

HL

politics

HL

others

HL

others

HL

crime

HL

economy

HL

travel

HL

others

HL

literature