ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಯಡಿಯೂರಪ್ಪರಿಗೆ ಬಂಧನದ ಭೀತಿ.. ಕೋರ್ಟ್ಗೆಗೆ ಮೊರೆ
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಯಡಿಯೂರಪ್ಪರಿಗೆ ಬಂಧನದ ಭೀತಿ.. ಕೋರ್ಟ್ಗೆಗೆ ಮೊರೆ

ಬೆಂಗಳೂರು, (ಜೂ.12); ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ದೂರು ಮತ್ತು ಅದಕ್ಕೆ ಸಂಬಂಧಿಸಿದ ಪೋಕ್ಸೋ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಈಕುರಿತಂತೆ ಯಡಿಯೂರಪ್ಪ ಅವರು ತಕರಾರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಸಿಐಡಿ ಪೊಲೀಸರನ್ನು ಪ್ರತಿವಾದಿ ಮಾಡಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. 17 ವರ್ಷದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಯಡಿಯೂರಪ್ಪ ಅವರ ಮೇಲಿದೆ. 

ಈ ಘಟನೆ ಕುರಿತು ಸಂತ್ರಸ್ತೆಯ ತಾಯಿ ಮಾ.14ರಂದು ಸದಾಶಿವನಗರ ಠಾಣೆಗೆ ದೂರು ಸಲ್ಲಿಸಿದ್ದರು. ಪೊಲೀಸರು ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದರು.

ನಂತರ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆಯಾಗಿತ್ತು. ಸಿಐಡಿ ಪೊಲೀಸರು ವಿಚಾರಣೆಗೆ ಹಾಜರಾಗಲು ಸೂಚಿಸಿ ಮಾ.28ರಂದು ಯಡಿಯೂರಪ್ಪಗೆ ನೋಟಿಸ್‌ ನೀಡಿದ್ದರು.

ಅದರಂತೆ ವಿಚಾರಣೆಗೆ ಹಾಜರಾಗಿದ್ದ ಯಡಿಯೂರಪ್ಪ ಅವರು, ಇದೀಗ ಪ್ರಕರಣಕ್ಕೆ ಸಂಬಂಧಿಸಿದ ದೂರು, ಎಫ್ ಐಆ‌ರ್ ಮತ್ತು ಪೋಕ್ಸೋ ವಿಶೇಷ ಕೋರ್ಟ್ ಮುಂದಿರುವ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಲು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ತಾವು ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ದೂರುದಾರ ಮಹಿಳೆಗೆ ದೂರು ನೀಡುವುದೇ ಹವ್ಯಾಸವಾಗಿದೆ. ಹಾಗಾಗಿ ಅನಗತ್ಯ ದೂರು ನೀಡಿದ್ದರು. ಎಫ್‌ಐಆ‌ರ್ ದಾಖಲಾದ ನಂತರ ಏ.13ರಂದು ಸಿಐಡಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೆ ಧ್ವನಿ ಮಾದರಿ ಸಂಗ್ರಹಿಸಿದರು. ದೂರಿನಲ್ಲಿ ಅಪರಾಧದ ಅಂಶಗಳು ಇಲ್ಲ. ಆದ ಕಾರಣ ದೂರು ರದ್ದುಪಡಿಸಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಪ್ರಕರಣದ ವಿಚಾರಣೆಯಲ್ಲಿ ಸಿಐಡಿ ಪೊಲೀಸರ ಪರ (ಪ್ರಾಸಿಕ್ಯೂಷನ್) ವಾದಿಸಲು ಹಿರಿಯ ವಕೀಲ ಅಶೋಕ್‌ ಎನ್. ನಾಯಕ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಸರ್ಕಾರ ನೇಮಕ ಮಾಡಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

politics

HL

economy

HL

crime

HL

others

HL

health

HL

crime

HL

others

HL

health

HL

politics

HL

politics

HL

politics

HL

others

HL

crime

HL

others

HL

economy

HL

crime

HL

others

HL

politics

HL

crime

HL

politics

HL

education

HL

others

HL

politics

HL

education

HL

others

HL

politics

HL

crime

HL

crime

HL

others

HL

others