ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ; BSY ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌.!
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ; BSY ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌.!

ಬೆಂಗಳೂರು, (ಜೂ.13): ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಸ್ಥಳೀಯ ಗುರುವಾರ ನ್ಯಾಯಾಲಯ​ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ. 

ಫೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬಂಧನ ವಾರೆಂಟ್ ಹೊರಡಿಸುವಂತೆ ಕೋರಿ ಸಿಐಡಿ ಅಧಿಕಾರಿಗಳು ನಗರದ 1ನೇ ತ್ವರಿತಗತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ಕೋರ್ಟ್​, ಬಿಎಸ್​ವೈ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಹೊರಡಿಸಿತು.

ಬಂಧನ ಭೀತಿ ಹಿನ್ನೆಲೆ ಮಾಜಿ ಸಿಎಂ ಬಿಎಸ್​ವೈ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೊರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ನಡೆಯುವ ಮುನ್ನವೇ, ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲಾಗಿದೆ.

ಬಂಧನ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೊರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು(ಗುರುವಾರ) ಅರ್ಜಿ ಸಲ್ಲಿಕೆಯಾಗಿದ್ದು, ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ.

ನಿರೀಕ್ಷಣಾ ಜಾಮೀನು ಅರ್ಜಿ; ಬಂಧನದ ಆತಂಕದಲ್ಲಿರುವ ಯಡಿಯೂರಪ್ಪ ಈಗಾಗಲೇ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ಗೆಗೆ ಅರ್ಜಿ ಸಲ್ಲಿಸಿದ್ದಾರೆ.

ಕೆಲ ರಾಜಕೀಯ ಮುಖಂಡರು ದೊಡ್ಡಮಟ್ಟದ ಸಂಚು ರೂಪಿಸಿ ಯಾವುದೇ ಸಾಕ್ಷ್ಯಾಧಾರಗಳಿಲ್ಲದಿದ್ದರೂ ತನ್ನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಾಡಿ ಘನತೆಗೆ ಧಕ್ಕೆ ತರುವ ಕಾರ್ಯ ನಡೆಸಲಾಗುತ್ತಿದೆ ಎಂದು ಅರ್ಜಿಯಲ್ಲಿ ಅವರು ತಿಳಿಸಿದ್ದಾರೆ.

ಈಗಾಗಲೇ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಾಗಿದೆ. ಮತ್ತೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿದೆ. ಒಂದು ದಿನ ಮಾತ್ರ ಕಾಲಾವಕಾಶ ನೀಡಲಾಗಿದೆ. ಆದರೆ, ಮಾಜಿ ಸಿಎಂ ಸಭೆಯೊಂದರಲ್ಲಿ ಭಾಗಿಯಾಗಲು ದೆಹಲಿಯಲ್ಲಿ ಉಳಿದಿದ್ದಾರೆ. ಹೀಗಾಗಿ ಜೂನ್ 12ರ ಬದಲಿಗೆ 17ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ಇದೀಗ ಬಂದ ಮಾಹಿತಿ ಅನ್ವಯ  ಜಾಮೀನು ರಹಿತ ಬಂಧನ ವಾರೆಂಟ್‌  ಜಾರಿಯಾಗಿರುವ ಕಾರಣ ಯಡಿಯೂರಪ್ಪ ಅವರು ಕಣ್ಮರೆಯಾಗಿದ್ದಾರೆ ಎನ್ನಲಾಗುತ್ತಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

economy

HL

crime

HL

others

HL

health

HL

crime

HL

others

HL

health

HL

politics

HL

politics

HL

politics

HL

others

HL

crime

HL

others

HL

economy

HL

crime

HL

others

HL

politics

HL

crime

HL

politics

HL

education

HL

others

HL

politics

HL

education

HL

others

HL

politics

HL

crime

HL

crime

HL

others

HL

others