ದೊಡ್ಡಬಳ್ಳಾಪುರದಲ್ಲಿ ಬೃಹತ್ ಹಾಲಿನ ಪ್ಯಾಕಿಂಗ್ ಘಟಕ ಸ್ಥಾಪನೆ: ಡಿಸಿಎಂ ಡಿಕೆ ಶಿವಕುಮಾರ್ ಕೊಡುಗೆ ಸ್ಮರಿಸಿದ ಬಿಸಿ ಆನಂದ್ ಕುಮಾರ್
ದೊಡ್ಡಬಳ್ಳಾಪುರದಲ್ಲಿ ಬೃಹತ್ ಹಾಲಿನ ಪ್ಯಾಕಿಂಗ್ ಘಟಕ ಸ್ಥಾಪನೆ: ಡಿಸಿಎಂ ಡಿಕೆ ಶಿವಕುಮಾರ್ ಕೊಡುಗೆ ಸ್ಮರಿಸಿದ ಬಿಸಿ ಆನಂದ್ ಕುಮಾರ್

ದೊಡ್ಡಬಳ್ಳಾಪುರ, (ಜೂ.14); ತಾಲ್ಲೂಕಿನಿಂದ ಪ್ರಥಮ ಬಾರಿಗೆ ಕೆಎಂಎಫ್ ನಿರ್ದೇಶಕನಾಗಿ ಆಯ್ಕೆಯಾಗಲು ಹಾಗೂ ತಾಲ್ಲೂಕಿನಲ್ಲಿ 16 ಎಕರೆ ವಿಸ್ತೀರ್ಣದಲ್ಲಿ ಹಾಲಿನ ಪ್ಯಾಕಿಂಗ್ ಘಟಕ ಸ್ಥಾಪನೆ ಮಾಡಲು ಅನುಮತಿ ನೀಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸೇವೆಯನ್ನು ಸ್ಮರಿಸಬೇಕು ಎಂದು ಬಮೂಲ್ ನಿರ್ದೇಶಕ ಬಿ.ಸಿ.ಆನಂದಕುಮಾರ್ ಹೇಳಿದರು.

ನಗರದ ಹಾಲು ಶೀಥಲ ಕೇಂದ್ರದಲ್ಲಿ ನೂತನವಾಗಿ ನಿರ್ಮಿಸಿರುವ ಸಭಾ ಭವನ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಪ್ರಾರಂಭಿಸಲಾಗಿರುವ ಬಿಎಂಸಿ ಘಟಕಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಹಕಾರಿ ಕ್ಷೇತ್ರದಲ್ಲಿ ಯಾವುದೇ ರಾಜಕೀಯ ಪಕ್ಷ ಮುಖ್ಯವಲ್ಲ, ಜನರ ಒಳಿತು ಮಾತ್ರ ಮುಖ್ಯವಾಗಿದೆ. ಸಹಕಾರಿ ಕ್ಷೇತ್ರ ರಾಜಕೀಯದಿಂದ ಮುಕ್ತವಾಗಿರುವಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲೂ ಇದೆ ಎಂದರು.

ತಾಲ್ಲೂಕಿನಲ್ಲಿ ಕೈಗಾರಿಕೆಗಳ ಸ್ಥಾಪನೆ ವೇಗವಾಗಿ ನಡೆಯುತ್ತಿದೆ. ಆದರೆ ಫಲವತ್ತಾದ ಕೃಷಿ ಭೂಮಿಯನ್ನು ಕಳೆದುಕೊಂಡು ಕೈಗಾರಿಕೆಗಳಿಗೆ ಭೂಮಿ ಬಿಟ್ಟುಕೊಟ್ಟಿರುವ ಸ್ಥಳೀಯರಿಗೆ ಮಾತ್ರ ಕೈಗಾರಿಕೆಗಳಲ್ಲಿ ಉದ್ಯೋಗ ಇಲ್ಲದಾಗುತ್ತಿದೆ. 

ಕೈಗಾರಿಕೆಗಳ ಮಾಲೀಕರು ಈ ಸ್ಥಳೀಯ ನೇಮಕಾತಿ ವಿರೋಧಿ ನೀತಿಯನ್ನು ಬದಲಿಸಿಕೊಂಡು ಅರ್ಹತೆಗೆ ತಕ್ಕಂತೆ ರೈತರ ಮಕ್ಕಳಿಗೆ ಉದ್ಯೋಗ ನೀಡಬೇಕು. ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ನಿಯಮ ರೂಪಿಸಬೇಕು ಎಂದು ಆಗ್ರಹಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

economy

HL

crime

HL

others

HL

health

HL

crime

HL

others

HL

health

HL

politics

HL

politics

HL

politics

HL

others

HL

crime

HL

others

HL

economy

HL

crime

HL

others

HL

politics

HL

crime

HL

politics

HL

education

HL

others

HL

politics

HL

education

HL

others

HL

politics

HL

crime

HL

crime

HL

others

HL

others

HL

others