ಕೇಂದ್ರ ಸಚಿವ ಆದ ಬಳಿಕ ಇಂದು ರಾಜ್ಯಕ್ಕೆ ಹೆಚ್‌ಡಿಕೆ: ಬೆಂ.ಗ್ರಾ.ಜಿಲ್ಲಾ ಜೆಡಿಎಸ್‌ನಿಂದ ಅದ್ಧೂರಿ ಸ್ವಾಗತ
ಕೇಂದ್ರ ಸಚಿವ ಆದ ಬಳಿಕ ಇಂದು ರಾಜ್ಯಕ್ಕೆ ಹೆಚ್‌ಡಿಕೆ: ಬೆಂ.ಗ್ರಾ.ಜಿಲ್ಲಾ ಜೆಡಿಎಸ್‌ನಿಂದ ಅದ್ಧೂರಿ ಸ್ವಾಗತ

ಬೆಂ.ಗ್ರಾ.ಜಿಲ್ಲೆ, (ಜೂ.14): ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ನೂತನ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಬಳಿಕ ಶುಕ್ರವಾರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಘಟಕ ಸಿದ್ಧತೆ ನಡೆಸಿದೆ ಎಂದು ಅಧ್ಯಕ್ಷ ಬಿ.ಮುನೇಗೌಡ ತಿಳಿಸಿದ್ದಾರೆ.

ಜೂನ್.14 ರಂದು ಬೆಳಗ್ಗೆ 09 ಗಂಟೆಗೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿರುವ ಕುಮಾರಸ್ವಾಮಿ ಅವರನ್ನು ಟೋಲ್ ಬಳಿ ಬೆಂಗಳೂರು ಗ್ರಾಮಾಂತರ. ಜಿಲ್ಲೆಯ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಲಿದ್ದಾರೆ‌.

ಈ ನಿಟ್ಟಿನಲ್ಲಿ ಈಗಾಗಲೇ ಬಿ.ಮುನೇಗೌಡ, ನಿಸರ್ಗ ನಾರಾಯಣಸ್ವಾಮಿ, ಶ್ರೀನಿವಾಸ್ ಮೂರ್ತಿ ಅವರ ನೇತೃತ್ವದಲ್ಲಿ ಸಿದ್ದತೆ ನಡೆಸಲಾಗಿದ್ದು, ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ನಾಲ್ಕು ತಾಲೂಕಿನ ಅಧ್ಯಕ್ಷರು, ಕಾರ್ಯಕರ್ತರು, ಕುಮಾರಸ್ವಾಮಿ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲಾ ಅಧ್ಯಕ್ಷರಾದ ಮುನೇಗೌಡ ಅವರು ಕೋರಿದ್ದಾರೆಂದು ಜೆಡಿಎಸ್ ವಕ್ತಾರ ಕುಂಟನಹಳ್ಳಿ ಮಂಜುನಾಥ್ ತಿಳಿಸಿದ್ದಾರೆ‌.

ವಿಮಾನ ನಿಲ್ದಾಣದಿಂದ ಜೆಡಿಎಸ್ ಕಚೇರಿವರೆವಿಗೂ ಕುಮಾರಸ್ವಾಮಿ ಅವರನ್ನು ಮೆರವಣಿಗೆಯಲ್ಲಿ ಕರೆ ತರಲು ತೀರ್ಮಾನಿಸಲಾಗಿದೆ. ಬಳಿಕ ಪಕ್ಷದ ಕಚೇರಿಯಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

economy

HL

crime

HL

others

HL

health

HL

crime

HL

others

HL

health

HL

politics

HL

politics

HL

politics

HL

others

HL

crime

HL

others

HL

economy

HL

crime

HL

others

HL

politics

HL

crime

HL

politics

HL

education

HL

others

HL

politics

HL

education

HL

others

HL

politics

HL

crime

HL

crime

HL

others

HL

others