ವೇಲಿನಿಂದ ಕುತ್ತಿಗೆ ಬಿಗಿದು ಹೆತ್ತಮ್ಮನಿಂದಲೇ ಮಗುವಿನ ಹತ್ಯೆ..!
ವೇಲಿನಿಂದ ಕುತ್ತಿಗೆ ಬಿಗಿದು ಹೆತ್ತಮ್ಮನಿಂದಲೇ ಮಗುವಿನ ಹತ್ಯೆ..!

ಬೆಂಗಳೂರು, (ಜೂ‌.14): ಜನ್ಮ ನೀಡಿದ ಮಗುವನ್ನ ವೇಲಿನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ ಆರೋಪದಡಿ ಮಗುವಿನ ತಾಯಿಯನ್ನ ಸುಬ್ರಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. 

ಬಂಧಿತ ಮಹಿಳೆಯನ್ನು ರಮ್ಯ (35 ವರ್ಷ) ಎಂದು ಗುರುತಿಸಲಾಗಿದ್ದು. ಈಕೆಯ ಮಗು ಪ್ರೀತಿಕಾಳನ್ನ ಹತ್ಯೆ ಮಾಡಿದ ಆರೋಪದ ಅಡಿ ಬಂಧಿಸಲಾಗಿದೆ. 

ಸುಬ್ರಮಣ್ಯಪುರದ ಮಂಜುನಾಥ ನಗರದಲ್ಲಿ ವಾಸವಾಗಿರುವ ಬಂಧಿತೆ ರಮ್ಯ ಗೃಹಿಣಿ. ಈಕೆಯ ಪತಿ ವೆಂಕಟೇಶ್ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದು, ನಾರ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

11 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗೆ ಮುದ್ದಾದ ಅವಳಿ ಹೆಣ್ಣು ಮಗುವಾಗಿದ್ದು, ಇಬ್ಬರ ಮಗುವಿನ ಪೈಕಿ 3 ವರ್ಷ 10 ತಿಂಗಳ ಪ್ರೀತಿಕಾ ಮಾನಸಿಕ ಅಸ್ವಸ್ಥತೆಯಿಂದ ಬಳಲುತಿತ್ತು. ಮತ್ತೊಂದು ಮಗು ಸಡೃಢವಾಗಿದ್ದು, ಶಾಲೆಗೆ ಹೋಗುತಿತ್ತು. ಹತ್ಯೆಯಾದ ಮಗು ಅನಾರೋಗ್ಯದಿಂದಾಗಿ ಶಾಲೆಗೆ ಹೋಗುತ್ತಿರಲಿಲ್ಲ. ಇದರಿಂದ ರಮ್ಯ ಮನ ನೊಂದಿದ್ದರು ಎನ್ನಲಾಗಿದೆ.

ಮಾನಸಿಕವಾಗಿ ಸದೃಢವಾಗಿರದ ಮಗುವನ್ನ ಸಾಯಿಸಲು ನಿರ್ಧರಿಸಿ ಮಗುವನ್ನ ವೇಲಿನಿಂದ ಬಿಗಿದು ಸಾಯಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಆಸ್ಪತ್ರೆಗೆ ಬಂದು ಮಗುವನ್ನ ತೋರಿಸಿದ್ದರು. ಈ ಸಂಬಂಧ ಆಸ್ಪತ್ರೆ ವೈದ್ಯರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ರಮ್ಯ ಅವರನ್ನು ಬಂಧಿಸಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ನಾರ್ವೆಯಲ್ಲಿರುವ ಪತಿಗೆ ಮಾಹಿತಿ ನೀಡಿದ್ದು, ಈ ಸಂಬಂಧ ತನಿಖೆ ಮುಂದುವರೆಸಿರುವುದಾಗಿ ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

economy

HL

crime

HL

others

HL

health

HL

crime

HL

others

HL

health

HL

politics

HL

politics

HL

politics

HL

others

HL

crime

HL

others

HL

economy

HL

crime

HL

others

HL

politics

HL

crime

HL

politics

HL

education

HL

others

HL

politics

HL

education

HL

others

HL

politics

HL

crime

HL

crime

HL

others

HL

others