ಗೌರಿಬಿದನೂರಿನಲ್ಲಿ ರೈಲ್ವೇ ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ ದೊಡ್ಡಬಳ್ಳಾಪುರ ಮೂಲದ ವಿದ್ಯಾರ್ಥಿನಿ ಸಾವು..!
ಗೌರಿಬಿದನೂರಿನಲ್ಲಿ ರೈಲ್ವೇ ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ ದೊಡ್ಡಬಳ್ಳಾಪುರ ಮೂಲದ ವಿದ್ಯಾರ್ಥಿನಿ ಸಾವು..!

ಗೌರಿಬಿದನೂರು, (ಜೂ.14); ಕಾಲೇಜು ಮುಗಿಸಿಕೊಂಡು ವಸತಿ ನಿಲಯಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿ ರೈಲ್ವೆ ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಗರದ ಟೊಬ್ಯಾಟೊ ಕಾಲೋನಿ ಸಮೀಪ ನಡೆದಿದೆ. 

ರೈಲಿಗೆ ಸಿಲುಕಿ ಸಾವನ್ನಪ್ಪಿರುವ ವಿದ್ಯಾರ್ಥಿನಿಯನ್ನು ದೊಡ್ಡಬಳ್ಳಾಪುರ ತಾಲೂಕಿನ ಭವ್ಯಬಾಯಿ (17 ವರ್ಷ) ಎಂದು ಗುರುತಿಸಲಾಗಿದ್ದು, ಈಕೆ ನಗರ ಎಸ್ ಎಸ್ ಇ ಎ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. 

ದೊಡ್ಡಬಳ್ಳಾಪುರ ತಾಲ್ಲೂಕಿನ ಸುತ್ತಳ್ಳಿ ತಾಂಡ ಗ್ರಾಮದ ನಿವಾಸಿಯಾಗಿದ್ದಾಳೆ. ವ್ಯಾಸಂಗಕ್ಕಾಗಿ ಗೌರಿಬಿದನೂರು ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಯರ ನಿಲಯದಲ್ಲಿದ್ದರು.

ನಿತ್ಯ ವಸತಿ ನಿಲಯದಿಂದ ಕಾಲೇಜಿಗೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದರು. ಕಾಲೇಜು ಮುಗಿದ ಬಳಿಕ ಸ್ನೇಹಿತೆಯರೊಂದಿಗೆ ಕಾಲ್ನಡಿಗೆಯಲ್ಲೆ ವಸತಿ ನಿಲಯಕ್ಕೆ ತೆರಳುತ್ತಿದ್ದರು. 

ಎಂದಿನಂತೆ ಶುಕ್ರವಾರವೂ ಕೂಡ ಕಾಲೇಜು ಮುಗಿಸಿಕೊಂಡು ವಸತಿ ನಿಲಯಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯ ಪಾರ್ಥೀವ ಶರೀರವನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿಡಲಾಗಿದೆ.

ವಸತಿ ನಿಲಯ ಪಾಲಕರು ಮತ್ತು ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿನಿಯ ಸಾವಿಗೆ ಕಂಬನಿ ಮಿಡಿದಿದ್ದಾರೆ. ಪೋಷಕರಿಗೆ ವಿಷಯ ತಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

-->

Latest News

HL

others

HL

politics

HL

economy

HL

crime

HL

others

HL

health

HL

crime

HL

others

HL

health

HL

politics

HL

politics

HL

politics

HL

others

HL

crime

HL

others

HL

economy

HL

crime

HL

others

HL

politics

HL

crime

HL

politics

HL

education

HL

others

HL

politics

HL

education

HL

others

HL

politics

HL

crime

HL

crime

HL

others