ದೊಡ್ಡಬಳ್ಳಾಪುರ ತಾಲೂಕು ಭೂನ್ಯಾಯ ಮಂಡಳಿಗೆ ಕಾಂಗ್ರೆಸ್ ಮುಖಂಡರ ನೇಮಕ..!
ದೊಡ್ಡಬಳ್ಳಾಪುರ ತಾಲೂಕು ಭೂನ್ಯಾಯ ಮಂಡಳಿಗೆ ಕಾಂಗ್ರೆಸ್ ಮುಖಂಡರ ನೇಮಕ..!

ದೊಡ್ಡಬಳ್ಳಾಪುರ, (ಜೂ.14): ತಾಲೂಕು ಭೂನ್ಯಾಯ ಮಂಡಳಿಯ ಸದಸ್ಯರ ನಾಮನಿರ್ದೇಶನ ಮಾಡಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಗೌರಮ್ಮ.ಆರ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕು ಭೂನ್ಯಾಯ ಮಂಡಳಿಯ ಅಧ್ಯಕ್ಷರಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ಉಪವಿಭಾಗದ ಸಹಾಯಕ ಆಯುಕ್ತರು, ಸದಸ್ಯರಾಗಿ ಮೂಡಲಕಾಳೇನಹಳ್ಳಿಯ ಡಿ. ರಾಜಣ್ಣ, ತಾಪಂ ಮಾಜಿ ಸದಸ್ಯ ದೊಡ್ಡಮಂಕನಾಳ ಗ್ರಾಮದ ಮಂಜುನಾಥ.

ತಾಪಂ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಕೋಡಿಹಳ್ಳಿ ಗ್ರಾಮದ ನಾರಾಯಣಗೌಡ, ಪರಿಶಿಷ್ಟ ಜಾತಿ ಮೀಸಲಾತಿ ಅಡಿಯಲ್ಲಿ ರಾಜ್ಯ ಕಾಂಗ್ರೆಸ್ ಪರಿಶಿಷ್ಟ ಜಾತಿ ಪ್ರಧಾನ ಕಾರ್ಯದರ್ಶಿ ಚಿಕ್ಕತುಮಕೂರು ಆದಿತ್ಯನಾಗೇಶ್, ಹಾಗೂ ನ್ಯಾಮಂಡಳಿಯ ಸಹ ಕಾರ್ಯದರ್ಶಿಯಾಗಿ ದೊಡ್ಡಬಳ್ಳಾಪುರ ತಹಶೀಲ್ದಾರ್ ನಾಮನಿರ್ದೇಶನಗೊಂಡಿದ್ದಾರೆ. 

ಕರ್ನಾಟಕ ಭೂಸುಧಾರಣೆ ಕಾಯ್ದೆ ಪ್ರದತ್ತವಾದ ಅಧಿಕಾರವನ್ನ ಚಲಾಯಿಸಿ ದೊಡ್ಡಬಳ್ಳಾಪುರ ತಾಲೂಕು ಭೂನ್ಯಾಯ ಮಂಡಳಿಯನ್ನ ತಕ್ಷಣದಿಂದ ಜಾರಿಗೆ ಬರುವಂತೆ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಗೌರಮ್ಮ.ಆರ್ ಆದೇಶ ಹೊರಡಿಸಿದ್ದಾರೆ.

ನೂತನ ಸದಸ್ಯರನ್ನು ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ದೊಡ್ಡಬಳ್ಳಾಪುರ ಅಭಿವೃದ್ಧಿ ಯೋಜನ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಕೆಪಿಸಿಸಿ ಸದಸ್ಯ ಜಿ‌.ಲಕ್ಷ್ಮೀಪತಿ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ ಅವರು ಶುಭಕೋರಿದ್ದಾರೆ‌.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

politics

HL

economy

HL

crime

HL

others

HL

health

HL

crime

HL

others

HL

health

HL

politics

HL

politics

HL

politics

HL

others

HL

crime

HL

others

HL

economy

HL

crime

HL

others

HL

politics

HL

crime

HL

politics

HL

education

HL

others

HL

politics

HL

education

HL

others

HL

politics

HL

crime

HL

crime

HL

others

HL

others