ಕೋಲಾರ, (ಆಗಸ್ಟ್.03); ಬಂಗಾರಪೇಟೆ ಮುಖ್ಯ ರಸ್ತೆ ಸಹಕಾರ ನಗರ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇಂದು ಬೆಳಗ್ಗಿನ ಜಾವ ಈ ದುರ್ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮತ್ತೋರ್ವ ವ್ಯಕ್ತಿ ಪಾರಾಗಿದ್ದಾನೆ ಎನ್ನಲಾಗಿದೆ. ಮೃತರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಮೃತ ದುರ್ದೈವಿಗಳು ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್ ಹಾಗೂ ಬಂಗಾರಪೇಟೆಯ ನಿಚ್ಚಲ್ ಎನ್ನಲಾಗಿದ್ದು, ಬಂಗಾರಪೇಟೆ ಮೂಲದ ಸಾಯಿ ಗಗನ್ ಪಾರಾದವನು.
ಸ್ನೇಹಿತರೆಲ್ಲರೂ ಸಾಯಿಗಗನ್ ಮನೆಗೆ ಬಂದಿದ್ದರು. ಮನೆಯಿಂದ ಕೋಲಾರಕ್ಕೆ ಹೋಗುವಾಗ ಈ ಅಪಘಾತ ನಡೆದಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
crime
crime
crime
crime
politics
crime
others
crime
others
others
crime
others
others
others
others
crime
education
crime
crime
others
crime
education
others
others
crime
economy
crime
sports
others