ಬೆಂಗಳೂರು, (ಆಗಸ್ಟ್.03): ಮುಡಾ ಹಗರಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಬೆಂಗಳೂರಿನಿಂದ ಮೈಸೂರಿನವರೆಗೆ ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದೆ.
ಕೆಂಗೇರಿಯ ಕೆಂಪಮ್ಮ ದೇವಸ್ಥಾನ, ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆ ಪೂಜೆ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ ಬಸವರಾಜ್ ಬೊಮ್ಮಾಯಿ ಮತ್ತು ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ, ಆರ್.ಅಶೋಕ ಚಾಲನೆ ನೀಡಿದರು.
ಇಂದಿನಿಂದ ಆಗಸ್ಟ್ 10ರವರೆಗೆ 140 ಕಿಮೀ ಪಾದಯಾತ್ರೆ ಇದಾಗಿದೆ. ಕೆಂಗೇರಿಯಲ್ಲಿ ಉದ್ಘಾಟನೆ, ಮೈಸೂರಿನ ಸಮಾರೋಪ ಕಾರ್ಯಕ್ರಮ ಹೊರತುಪಡಿಸಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬಹಿರಂಗ ಸಭೆಗಳು ನಡೆಯಲಿವೆ.
ವಿಧಾನಸಭೆ ಕ್ಷೇತ್ರವಾರು 200 ಜನರು ಸೇರಿ ಪ್ರತಿದಿನ ಐದಾರು ಸಾವಿರ ಜನರು ಭಾಗಹಿಸಲಿದ್ದಾರೆ. ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು ಸೇರಿ ರಾಜ್ಯದ ಎಲ್ಲ ಜಿಲ್ಲೆಗಳ ಮುಖಂಡರು, ಪದಾಧಿಕಾರಿಗಳು ಏಳು ದಿನವೂ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಾದಯಾತ್ರೆಯ ಯಶಸ್ಸಿಗೆ 20ರಿಂದ 22 ವಿಭಾಗಗಳನ್ನು ರಚಿಸಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
crime
crime
crime
crime
politics
crime
others
crime
others
others
crime
others
others
others
others
crime
education
crime
crime
others
crime
education
others
others
crime
economy
crime
sports
others