ಮುಡಾ ಪ್ರಕರಣ: ಬಿಜೆಪಿ-ಜೆಡಿಎಸ್‌ನಿಂದ ನನ್ನ ತೇಜೋವಧೆ ಯತ್ನವೆಂದು ದಾಖಲೆ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಮುಡಾ ಪ್ರಕರಣ: ಬಿಜೆಪಿ-ಜೆಡಿಎಸ್‌ನಿಂದ ನನ್ನ ತೇಜೋವಧೆ ಯತ್ನವೆಂದು ದಾಖಲೆ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, (ಜುಲೈ.26); ಮುಡಾ ನಿವೇಶನ ಹಂಚಿಕೆ ಕಾನೂನುಬದ್ಧವಾಗಿದ್ದು, ಇದರಲ್ಲಿ ನನ್ನ ಹಾಗೂ ನನ್ನ ಪತ್ನಿ ಪಾತ್ರ ಇಲ್ಲ. ಬಿಜೆಪಿ-ಜೆಡಿಎಸ್ ರಾಜಕಾರಣಕ್ಕೆ ಅಪಪ್ರಚಾರ ಮಾಡಿ ತೇಜೋವಧೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಕಿ ದಾಖಲೆ ಸಮೇತವಾಗಿ ಸುದೀರ್ಘ ಮಾಹಿತಿ ನೀಡಿದ ಸಿಎಂ, ಬಿಜೆಪಿ-ಜೆಡಿಎಸ್ ರಾಜಕೀಯವಾಗಿ ಹತಾಶರಾಗಿದ್ದಾರೆ. ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಾರೆ. ಸಿಎಂ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದನ್ನು ಸಹಿಸಲು ಆಗುತ್ತಿಲ್ಲ ಎಂದು ಆರೋಪಿಸಿದರು.

ಕಲಾಪದ ಎರಡು ವಾರಗಳು ಒಂದೇ ವಿಚಾರ ಪ್ರಸ್ತಾಪವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ವಿಚಾರ ಬಿಟ್ಟರೆ ರಾಜ್ಯದ ಸಮಸ್ಯೆ ಬಗ್ಗೆ ಚಕಾರ ಎತ್ತಿಲ್ಲ. ಪ್ರವಾಹದ ಬಗ್ಗೆ ವಿಪಕ್ಷಗಳು ಯಾರೂ ಮಾತನಾಡಿಲ್ಲ. ಇದನ್ನೆಲ್ಲಾ ನೋಡಿದರೆ ಸಿಎಂ, ರಾಜ್ಯ ಸರ್ಕಾರಕ್ಕೆ ಮಸಿ ಬಳಿಯಬೇಕು ಎಂಬ ಉದ್ದೇಶ ಇದೆ ಅನ್ನಿಸುತ್ತೆ. ಇದು ಕಾನೂನುಬದ್ಧವಾಗಿದೆ. ಬಿಜೆಪಿ-ಜೆಡಿಎಸ್ ರಾಜಕಾರಣಕ್ಕೆ ಅಪಪ್ರಚಾರ ಮಾಡಿ ತೇಜೋವಧೆ ಮಾಡಲು ಯತ್ನ. ಬಿಜೆಪಿ-ಜೆಡಿಎಸ್ ಗೆ ಎರಡನೇ ಸರಿ ಸಿಎಂ ಆಗುವುದನ್ನು ಸಹಿಸಲು ಆಗುತ್ತಿಲ್ಲ ಎಂದರು.

ಸುದ್ದಿಗೋಷ್ಠಿಯ ಪ್ರಮುಖ ಅಂಶಗಳು; 

ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ. ನಾವು 135 ಸ್ಥಾನ ಗೆದ್ದ ಬಳಿಕ ರಾಜಕೀಯ ಪ್ರೇರಿತವಾದ ಹೇಳಿಕೆಗಳನ್ನು ಕೊಡ್ತಾರೆ. ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಎರಡನೇ ಬಾರಿ ಸಿಎಂ ಆಗಿರುವುದು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಎರಡು ವಾರವೂ ವಾಲ್ಮೀಕಿ ನಿಗಮದ ಒಂದೇ ವಿಚಾರ ಪ್ರಸ್ತಾಪ ಆಗಿದೆ. 

ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ. ಆಡಳಿತ ಪಕ್ಷದ ಶಾಸಕರು ರಾಜ್ಯದ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದರು.

ಇದನ್ನೆಲ್ಲಾ ನೋಡಿದಾಗ ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಅಧಿವೇಶನವನ್ನು ದುರುಪಯೋಗ ಪಡಿಸಿಕೊಳ್ಳುವುದು ಬಿಟ್ಟರೆ ಬೇರೆ ಜನಪರವಾದ ಉದ್ದೇಶ ವಿರೋಧ ಪಕ್ಷಗಳಿಗೆ ಇರಲಿಲ್ಲ ಎನ್ನುವುದು ಸ್ಪಷ್ಟವಾಗಿದೆ. 

ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇವತ್ತಿನವರೆಗೆ ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ.‌ 

ಜನರ ವಿಶ್ವಾಸ ಕಳೆದುಕೊಂಡಿರುವ ಬಿಜೆಪಿ+ಜೆಡಿಎಸ್ ಲೋಕಸಭಾ ಚುನಾವಣೆಯಲ್ಲೂ ಹಿಂದಿನ ಬಾರಿಗಿಂತ ಹೆಚ್ಚು ಸೀಟು, ಮತ ಗಳಿಸಲು ಸಾದ್ಯವಾಗಲಿಲ್ಲ. ನಮಗೆ ಕಳೆದ ಲೋಕಸಭಾ ಚುನಾವಣೆಗಿಂತ ಶೇ13 ರಷ್ಟು ಮತಗಳನ್ನು ಈ ಚುನಾವಣೆಯಲ್ಲಿ ಹೆಚ್ಚು ಗಳಿಸಿದೆವು. ಇದರಿಂದ ಹತಾಶರಾಗಿ ಮತ್ತೆ ಜನರ ವಿಶ್ವಾಸ ಗಳಿಸಲು ತಪ್ಪು ದಾರಿಯಲ್ಲಿ ವಾಮ ಮಾರ್ಗ ಹಿಡಿದಿದ್ದಾರೆ.

ಬಿಜೆಪಿ, ಜೆಡಿಎಸ್ ನವರ ಸುಳ್ಳುಗಳಿಗೆ ಅಧಿಕೃತ ದಾಖಲೆಗಳ ಮೂಲಕ ಕನ್ನಡಿ ಹಿಡಿದ ಸಿಎಂ ಸಿದ್ದರಾಮಯ್ಯ: ಯಾವುದೇ ಅಧಿಕೃತ ದಾಖಲೆಗಳಿಲ್ಲದೆ-ಅರೆ ಬರೆ ಪತ್ರಗಳನ್ನು ತೋರಿಸಿ ರಾಜ್ಯದ ಜನರ ಮುಂದೆ ಬಿಜೆಪಿ+ಜೆಡಿಎಸ್ ನಡೆಸಿದ ಜಂಟಿ ಡ್ರಾಮಾಗಳಿಗೆ ಅಧಿಕೃತ ದಾಖಲೆಗಳನ್ನು ಮುಂದಿಟ್ಟು ಕಿವಿ ಹಿಂಡಿದ ಸಿಎಂ, ಬಿಜೆಪಿ ಜೆಡಿಎಸ್‌ನವರ ಆರೋಪಗಳಿವು. ಇದಕ್ಕೆ ದಾಖಲೆಗಳನ್ನೂ ಕೂಡ ಬಿಡುಗಡೆ ಮಾಡುತ್ತಿದ್ದೇನೆ. ಶ್ರೀ ನಿಂಗ ಬಿನ್ ಜವರ ಇವರ ವಾರಸುದಾರ ಪುತ್ರರಲ್ಲೊಬ್ಬರಿಂದ ಶ್ರೀ ಬಿ.ಎಂ ಮಲ್ಲಿಕಾರ್ಜುನ್ ರವರು ಭೂಮಿ ಖರೀದಿ ಮಾಡಿದ್ದು, ಈ ಕ್ರಯಕ್ಕೆ ಪಿ.ಟಿ.ಸಿ.ಎಲ್. ಕಾಯ್ದೆ ಅನ್ವಯಿಸುವುದಿಲ್ಲವೆ?

2-8-1935 ರಲ್ಲಿ ಜವರನ ಮಗ ನಿಂಗ ಎನ್ನುವವರು  ಮೈಸೂರು ತಾಲ್ಲೂಕು ಕಛೇರಿಗೆ ಜಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಆಗಿನ ಕೆಳ ಹಂತದ ಅಧಿಕಾರಿಗಳು 15-8-1935 ರಂದು ನಿಂಗ ಅವರು ಕೇಳಿರುವ ಜಮೀನುಗಳನ್ನು ಹರಾಜಿನ ಮೂಲಕ ವಿಲೇಪಡಿಸಬೇಕೆಂದು ವರದಿ ಸಲ್ಲಿಸಿದ್ದಾರೆ. ಅದರ ಪ್ರಕಾರ ಹರಾಜು ನಡೆಸಲು ಕ್ರಮವಹಿಸಿದ್ದಾರೆ. 26-9-1935 ರಂದು ಹರಾಜು ನೋಟೀಸು ಹೊರಡಿಸಿದ್ದಾರೆ. 3-10-1935 ರಂದು ಹರಾಜು ನಡೆಸಲಾಗುವುದೆಂದು  ನೋಟೀಸಿನಲ್ಲಿ ತಿಳಿಸಿದ್ದಾರೆ. ಅದರ ಪ್ರಕಾರ ಹರಾಜು ನಡೆಸಲಾಗಿದೆ.  ಹರಾಜು ನಡೆಸಿದ ಮೇಲೆ ಈ ರೀತಿ ದಾಖಲು ಮಾಡಿದ್ದಾರೆ. 

“ಕೆಸರೆ ಗ್ರಾಮದ ಸ. ನಂ 464 ರ 3.16 [ ಜಮೀನು] 3 ರೂಪಾಯಿ 8 ಆಣೆ ಉಳ್ಳ ಜಮೀನು  ತಾಲ್ಕು ------ ರಿಂದ 27-9-35  ನೇ ----- ಎಡಿ 12 ನೇ ಮೈಸೂರು  ಹುಕುಂ ಮೇರೆ  ಬೀಳು ------ ಹರಾಜು ಮಾಡಿಸಲಾಯ್ತು.   3 ರೂಪಾಯಿ ಹರಾಜು. 1 ರೂಪಾಯಿ ನಿಂಗ ಬಿನ್ ಜವರ, ಇದರ ಮೇಲೆ  ಯಾರೂ ಸವಾಲು ಮಾಡಲಿಲ್ಲವಾಗಿ ಹರಾಜು ಅಖೈರು ಮಾಡಲಾಯ್ತು” ಎಂದು ದಾಖಲಿಸಲಾಗಿದೆ.  13-10-1935 ರಂದು  ‘ Sale is confirmed”  ಎಂದು ನಮೂದಿಸಿದ್ದಾರೆ.

ಜಮೀನುಗಳನ್ನು ಹರಾಜಿನ ಮೂಲಕ ಪಡೆದಿರುವುದರಿಂದ ಸ್ವಯಾರ್ಜಿತ ಜಮೀನಾಗುತ್ತದೆಯೆ ಹೊರತು ಈ ಜಮೀನುಗಳ ಮೇಲೆ ಸರ್ಕಾರದ ಯಾವುದೇ ಹಿತಾಸಕ್ತಿ ಇರುವುದಿಲ್ಲ. ಹಾಗಾಗಿ  ಈ ಜಮೀನುಗಳು ಪಿಟಿಸಿಎಲ್ ಕಾಯ್ದೆ ವ್ಯಾಪ್ತಿಗೆ ಬರುವುದಿಲ್ಲ. ಈ ಕುರಿತು ಕಾಯ್ದೆಯು ಸ್ಪಷ್ಟವಾಗಿ ಹೇಳುತ್ತದೆ. ಅಸಂಖ್ಯಾತ ತೀರ್ಪುಗಳೂ ಇವೆ.

ಖರೀದಿ ಮಾಡಲು ಅವರು ಸರ್ಕಾರದಿಂದ ಅನುಮತಿ ಪಡೆದಿದ್ದರೆ?

ಪಿಟಿಸಿಎಲ್ ಜಮೀನುಗಳು ಅಲ್ಲದ ಕಾರಣ ಸರ್ಕಾರದ ಅನುಮತಿ ಅಗತ್ಯವೂ ಇಲ್ಲ ಎಂಬುದು ಕಾನೂನಿನ ಜ್ಞಾನವಿರುವ ಪ್ರತಿಯೊಬ್ಬರಿಗೂ ತಿಳಿದಿರುತ್ತದೆ. ಆದರೆ ಬಿಜೆಪಿ, ಜೆಡಿಎಸ್ ನವರು ಮಾತ್ರ ಇದನ್ನು ರಾಜಕಾರಣಕ್ಕೆ ಬಳಸುತ್ತಿದ್ದಾರೆ.

ಈ ಜಮೀನುಗಳನ್ನು ಖರೀದಿ ಮಾಡುವಾಗ ವಾರಸುದಾರರನ್ನು ಈ ಭೂ ಕ್ರಯದಿಂದ ಏಕೆ ಹೊರಗಿಡಲಾಗಿತ್ತು? ಈ ಕ್ರಯವನ್ನು ಕಾನೂನಿನ ಪ್ರಕಾರ ಮಾಡಲಾಗಿದೆಯೇ? ಎಂಬ ಪ್ರಶ್ನೆಯನ್ನು ಬಿಜೆಪಿಯವರು ಎತ್ತಿದ್ದಾರೆ.

10-4-1993 ರಲ್ಲಿ ಒಂದು ವಂಶವೃಕ್ಷ ಮಾಡಿಸಿದ್ದಾರೆ. ಅದರ ಪ್ರಕಾರ ನಿಂಗ ಬಿನ್ ಜವರ ಇವರಿಗೆ ಮೂರು ಜನ ಮಕ್ಕಳು. ಮೊದಲನೆ ಮಲ್ಲಯ್ಯ, ಎರಡನೆ ಮೈಲಾರಯ್ಯ ಮತ್ತು ಮೂರನೆ ಜೆ. ದೇವರಾಜು.  ವಂಶವೃಕ್ಷದ ಪ್ರಕಾರ ಮಲ್ಲಯ್ಯ ಎನ್ನುವವರಿಗೆ ವಾರಸುದಾರರನ್ನು ತೋರಿಸಿಲ್ಲ. ಎರಡನೆ ಮೈಲಾರಯ್ಯ ಇವರಿಗೆ  ಮಂಜುನಾಥ್‌ಸ್ವಾಮಿ ಎಂ ಎನ್ನುವವರಿದ್ದಾರೆ. ಆಗ ಅವರಿಗೆ 29 ವರ್ಷ ಎಂದು ನಮೂದಿಸಲಾಗಿದೆ.  3 ನೆಯವರು ದೇವರಾಜು ಎನ್ನುವವರು. [ಈ ದೇವರಾಜು ಎನ್ನುವವರೆ  ಮಲ್ಲಿಕಾರ್ಜುನಸ್ವಾಮಿಯವರಿಗೆ ಜಮೀನು  ಮಾರಾಟ ಮಾಡಿರುವುದು]. ಈ ವಂಶವೃಕ್ಷದಲ್ಲಿ ಮಲ್ಲಯ್ಯ, ದೇವರಾಜು, ಮೈಲಾರಯ್ಯನವರ ಪತ್ನಿ ಪುಟ್ಟಗೌರಮ್ಮ, ಎಂ ಮಂಜುನಾಥಸ್ವಾಮಿ ಇವರುಗಳು ಸಹಿ ಮಾಡಿದ್ದಾರೆ. 

ಜೆ ದೇವರಾಜು ಎನ್ನುವವರ ಹೆಸರಿಗೆ ಖಾತೆ ಮಾಡಿಕೊಡಲು  ಈ ಮೇಲಿನ ಎಲ್ಲರೂ ಸಹಿ ಮಾಡಿ ಹೇಳಿಕೆ ಕೊಟ್ಟಿದ್ದಾರೆ. ಹೆಳಿಕೆಯಲ್ಲಿ ಹೀಗೆ ಬರೆಯಲಾಗಿದೆ. “ ಮೈಸೂರು ತಾಲ್ಲೂಕು ಕಸಬಾ ಹೋಬಳಿ ರಾಜಸ್ವ ನಿರೀಕ್ಷಕರ ರೂಬು ರೂಬು. ಡಿಟೊ ಮೈಸೂರು ಸಿಟಿ ಗಾಂಧಿನಗರ 8 ನೇ ಕ್ರಾಸ್ , ಮನೆ ನಂ 4038 ರ ನಿವಾಸಿಗಳಾದ  ಲೇಟ್ ನಿಂಗಯ್ಯ ಬಿನ್ ಜವರ ರವರ ಮೊದಲನೆ ಮಗ ಮಲ್ಲಯ್ಯ ಮತ್ತು ಲೇಟ್ ಮೈಲಾರಯ್ಯನವರ ಹೆಂಡತಿ ಪುಟ್ಟಗೌರಮ್ಮ ಹಾಗೂ ಮಗ  ಎಂ. ಮಂಜುನಾಥಸ್ವಾಮಿ ಆದ ನಾವುಗಳು ಹೆಳಿ ಬರೆಸಿದ ಹೇಳಿಕೆ.

ಅದಾಗಿ ಮೈಸೂರು ತಾಲ್ಲೂಕು ಕಸಬಾ ಹೋಬಳಿ ಕೆಸರೆ ಗ್ರಾಮದ ಸರ್ವೆ ನಂ. 464 ರ 3-16  ಈ ಜಮೀನುಗಳಿಗೆ ಖಾತೆ ಮಾಡಿಕೊಡಲು ಲೇಟ್ ನಿಂಗ ಬಿನ್ ಜವರ ರವರ ಮೂರನೆ ಮಗ ಜೆ.ದೇವರಾಜು ನಮೂನೆ 19 ರ ಮೂಲಕ ಅರ್ಜಿ ಸಲ್ಲಿಸಿರುವುದು ಸರಿಯಷ್ಟೆ . ಸದರಿ ಜಮೀನು ನಿಂಗ ಬಿನ್ ಜವರರವರಿಗೆ ಸೇರಿದ್ದು ಅವರು ಫವತಿಯಾಗಿ ನಮ್ಮಗಳಿಗೆ ಸದರಿ ಜಮೀನಿನಲ್ಲಿ ಭಾಗ ಬರಬೇಕಾಗಿರುವುದಿಲ್ಲ.

ಈಗಾಗಲೆ ನಾವು 462 ರಲ್ಲಿ 4 ಎಕರೆ ಜಮೀನನ್ನು ಪುಟ್ಟಮ್ಮ ಎನ್ನುವವರಿಗೆ ಮಾರಿರುತ್ತೇವೆ. ಆದ್ದರಿಂದ ಅರ್ಜಿದಾರರಾದ ಜೆ. ದೇವರಾಜುರವರಿಗೆ ಸದರಿ ಜಮೀನುಗಳನ್ನು ಖಾತೆ ಮಾಡುವುದರಲ್ಲಿ ನಮ್ಮಗಳ ತಕರಾರು ಏನೂ ಇರುವುದಿಲ್ಲವೆಂದು ಹೇಳಿ ಬರೆಯಿಸಿದ ಹೇಳಿಕೆ. ಓದಿಸಿ ಕೇಳಿ ಸರಿ ಎಂದು ಒಪ್ಪಿ ರುಜು ಮಾಡಿರುತ್ತೇವೆ. ಮಲ್ಲಯ್ಯ, ಪುಟ್ಟಗೌರಮ್ಮ ಇಬ್ಬರೂ ಕನ್ನಡದಲ್ಲಿ ಸಹಿ ಮಾಡಿರುತ್ತಾರೆ. ಎಂ.ಮಂಜುನಾಥಸ್ವಾಮಿ ಇಂಗ್ಲಿಷಿನಲ್ಲಿ ಸಹಿ ಮಾಡಿರುತ್ತಾರೆ. ಇದರ ಆಧಾರದ ಮೇಲೆ ಜೆ.ದೇವರಾಜು ಅವರ ಹೆಸರಿಗೆ ಈ ಜಮೀನುಗಳು ವರ್ಗಾವಣೆಯಾಗಿವೆ.

ಹಾಗಾಗಿ ಕ್ರಯದಾರರ ವಾಸರಸುದಾರರ ಒಪ್ಪಿಗೆ ಇಲ್ಲದೆ ಖರೀದಿ ನಡೆದಿದೆ ಎಂಬ ಬಿ.ಜೆ.ಪಿ. ಯವರ ಆರೋಪವು ಸುಳ್ಳು. ಈ ಎಲ್ಲ ವ್ಯವಹಾರಗಳು 2010 ಕ್ಕಿಂತ ಮುಂಚೆ ನಡೆದಿವೆ. ಇವು ನನಗೆ ಸಂಬಧಪಟ್ಟಿದ್ದಲ್ಲ. ಆದರೂ ಸಹ ಬಿಜೆಪಿಯವರು ಈ ಸಣ್ಣ ವಿಚಾರವನ್ನು ರಾಜಕಾರಣಕ್ಕೆ ಬಳಸುತ್ತಿರುವ ಕಾರಣ ಈ ವಿಚಾರಗಳನ್ನು ಪ್ರಸ್ತಾಪಿಸಬೇಕಾಗಿದೆ.

ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಮುಡಾದಿಂದ ಅಭಿವೃದ್ಧಿ ಹೊಂದಿದ ಜಾಗಗಳು ಎಷ್ಟು ಇವೆ?  ಅಂತಹ ಡಿ-ನೋಟಿಫಿಕೇಶನ್ ಪ್ರಸ್ತಾವನೆಗಳಿಗೆ ಸರ್ಕಾರದ ಅನುಮತಿ ಪಡೆಯಲಾಗಿತ್ತೆ?

ಪ್ರತಿಕ್ರಿಯೆ: ಅದಕ್ಕೂ ಮೊದಲು ಪ್ಯಾರಾ ನಂ.6 ರಲ್ಲಿ ಬಿ.ಜೆಪಿ ಯವರು ಗೌರವಾನ್ವಿತ ರಾಜ್ಯಪಾಲರಿಗೆ ನೀಡಿರುವ ಮನವಿ/ ದೂರಿನಲ್ಲಿ ಸದರಿ ಜಮೀನುಗಳನ್ನು ಡಿ-ನೋಟಿಫಿಕೇಶನ್ ಮಾಡಲು ಮುಡಾದಿಂದ ಪ್ರಸ್ತಾವನೆ ಬಂದಿರಲಿಲ್ಲ, ಅರ್ಜಿದಾರರು ಅರ್ಜಿಯೂ ಕೊಟ್ಟಿರಲಿಲ್ಲ, ಆದರೂ ಡಿ.ನೋಟಿಫಿಕೇಶನ್ ನಡೆದಿದೆ ಎಂದು ಸುಳ್ಳು ಮಾಹಿತಿಯನ್ನು ನೀಡಿದ್ದಾರೆ.

ದಾಖಲೆಗಳನ್ನು ಪರಿಶೀಲಿಸಿದಾಗ  ಕಂಡು ಬಂದ ಸತ್ಯಾಂಶಗಳು: ಬಿಜೆಪಿ ಯವರು ಸಂಪೂರ್ಣವಾಗಿ ತಪ್ಪು ಮಾಹಿತಿಯನ್ನು ಗೌರವಾನ್ವಿತ ರಾಜ್ಯಪಾಲರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. 

ಸದರಿ ಜಮೀನುಗಳನ್ನು ಭೂಸ್ವಾಧೀನ ಮಾಡಲು 18-09-1992 ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದಾರೆ. ಆದರೆ, ಅದು ಬಹಳ ವರ್ಷಗಳಾದರೂ ಇತ್ಯರ್ಥವಾಗಿರುವುದು ಕಂಡುಬರುವುದಿಲ್ಲ. ಆಗ, ಜಿ.ದೇವರಾಜು, ರೋಡ್ ನಂ.3406, 4ನೇ ಮುಖ್ಯ ರಸ್ತೆ, ಲಷ್ಕರ್ ಮೊಹಲ್ಲಾ ಉರ್ದು ನಗರ, ಮೈಸೂರು ರಸ್ತೆ ಇವರು 13-08-1996 ರಂದು ತಮ್ಮ ಜಮೀನುಗಳನ್ನು ಭೂಸ್ವಾಧೀನದಿಂದ ಕೈಬಿಡುವಂತೆ ಅರ್ಜಿ ಬರೆದಿದ್ದಾರೆ. 

ಈ ಜಮೀನುಗಳ ಅಂತಿಮ ಅಧಿಸೂಚನೆಯಾಗಿದ್ದು 20-08-1997 ರಂದು. ಅದಕ್ಕೂ ಮೊದಲೇ ಈ ಅರ್ಜಿ ಬರೆದಿದ್ದಾರೆ. ಅರ್ಜಿಯ ಮೇಲೆ ಅಂದಿನ ನಗರಾಭಿವೃದ್ಧಿ ಸಚಿವರಾಗಿದ್ದ ಶ್ರೀ ಬಿ.ಎನ್. ಬಚ್ಚೇಗೌಡ ಇವರು ಮನವಿ ಪರಿಶೀಲಿಸಿ ಸ್ಥಳೀಯ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಅಭಿಪ್ರಾಯದೊಂದಿಗೆ ಮಂಡಿಸಿ ಎಂದು ಕಾರ್ಯದರ್ಶಿಯವರಿಗೆ ಟಿಪ್ಪಣಿ ಬರೆದಿದ್ದಾರೆ. ಅದನ್ನು ಆಧರಿಸಿ, ಒಂದು ತಿಂಗಳಾದ ಮೇಲೆ ಪತ್ರ ಮುಡಾ ಆಯುಕ್ತರಿಗೆ ಹೋಗಿದೆ. 

ಮುಡಾದಲ್ಲಿ 24-07-1997 ರಂದು ಈ ಜಾಗ ಭೂಸ್ವಾಧೀನದಿಂದ ಕೈಬಿಡಲು ನಿರ್ಣಯ ಪಾಸ್ ಮಾಡಿದ್ದಾರೆ. 30-08-1997ರಂದು ಸದರಿ ಜಾಗಗಳನ್ನು ಭೂಸ್ವಾಧೀನದಿಂದ ಕೈಬಿಡಲು ಮುಡಾ ಆಯುಕ್ತರು ಸರ್ಕಾರದ ಕಾರ್ಯದರ್ಶಿಗಳಿಗೆ ಶಿಫಾರಸ್ಸು ಮಾಡಿದ್ದಾರೆ. 

ಸದರಿ ಶಿಫಾರಸ್ಸನ್ನು ಆಧರಿಸಿ, ಭೂ ಸ್ವಾಧೀನ ಮಾಡಿದ ಜಮೀನುಗಳನ್ನು ಡಿ-ನೋಟಿಫೈ ಮಾಡಲು ಆಗ ರೆವಿನ್ಯೂ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ. ವಿ ಬಾಲಸುಬ್ರಮಣ್ಯನ್ ಅವರ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ಇರುವುದು ದಾಖಲೆಗಳಿಂದ ತಿಳಿದು ಬರುತ್ತದೆ. ವಿ.ಗೋವಿಂದರಾಜು ಸೆಕ್ರೆಟರಿ-2, ನಗರಾಭಿವೃದ್ಧಿ ಇಲಾಖೆ ಮತ್ತು ಕೆ. ಎಂ. ತಿಮ್ಮಯ್ಯ, ಕಾನೂನು ಇಲಾಖೆಯ ಅಡಿಶನಲ್ ಸೆಕ್ರೆಟರಿ ಒಳಗೊಂಡ ತ್ರಿಸದಸ್ಯ ಸಮಿತಿಯು  ಪರಿಶೀಲಿಸಿ ಡಿ ನೋಟಿಫೈ ಮಾಡಿದೆ.

ಈ 3 ಜನರ ಸಮಿತಿಯು ಬೆಂಗಳೂರಿನಲ್ಲಿ ಬಿಡಿಎಯ ಯಡಿಯೂರು- ನಾಗಸಂದ್ರ, ಮೈಸೂರಿನ ಮುಡಾದ ಕೆಸರೆ ಸೇರಿದಂತೆ ಸುಮಾರು 19 ಕಡೆ ಡಿನೋಟಿಫೈ ಮಾಡಲು ಅನುಮೋದನೆ ಮಾಡಿರುವಂತೆ ಕಾಣುತ್ತಿದೆ.  ಈ ಸಮಿತಿಯು “ The Committee noted that the Mysore UDA in its meeting held on 24-7-97  has resolved to recommend to government to drop the acquisition proceedings in respect of land mentioned above since this land is situated at one end of the scheme. Further it noted that in this land, the Karnataka urban water supply and drainage Board has not prepared any major plan for their scheme. No plans have been prepared for Melapura water supply scheme also.

The final notification was issued during April --- and August 1997 for acquisition of the land by MUDA for its scheme. No award has been passed yet. In view of the fact that if the land is denotified the scheme will not get affected and no award has been passed and also the KUWS and dB has not prepared any major plan in the land, the committee accepted the resolution of the MUDA and recommended for denotification”. ಎಂದು ದಾಖಲಿಸಿದ್ದಾರೆ.  ಈ ಪ್ಯಾರಾದಲ್ಲಿ ಅರ್ಥವಾಗುವ ಅಂಶಗಳೆAದರೆ ಈ ಭೂಮಿ ಬಡಾವಣೆಯ ಕೊನೆಯಲ್ಲಿದೆ ಎಂಬುದು  ಕಂಡು ಬರುತ್ತದೆ. ಇಲ್ಲಿ ಯಾವ ಅಭಿವೃದ್ಧಿಯೂ ಆಗಿಲ್ಲ. ನಗರ ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿಯವರು  ಈ ಜಮೀನನಲ್ಲಿ ಯಾವುದೇ ಪ್ಲಾನ್ ಸಿದ್ಧಪಡಿಸಿಲ್ಲ. ಈ ಜಮೀನುಗಳನ್ನು ಡಿ ನೋಟಿಫೈ  ಮಾಡುವುದರಿಂದ ಯಾವುದೇ ಸಮಸ್ಯೆಗಳಾಗುವುದಿಲ್ಲ. ಈ ಕುರಿತು ಮುಡಾದಲ್ಲೂ ನಿರ್ಣಯವಾಗಿದೆ ಎಂದು ಹೇಳಿ ಡಿನೋಟಿಫೈ ಮಾಡಲು ತೀರ್ಮಾನಿಸಿದ್ದಾರೆ. ಇದರ ಅಧಾರದ ಮೇಲೆ ಈ ಭೂಮಿಯನ್ನು ಡಿನೋಟಿಫೈ ಮಾಡಿರುವುದು ಕಂಡುಬರುತ್ತದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 1984 ರಿಂದ ಒಟ್ಟು 13 ಬಡಾವಣೆಗಳಲ್ಲಿ 235- 30 ಎಕರೆ ಭೂಮಿಯನ್ನು ಭೂ ಸ್ವಾಧೀನದಿಂದ ಕೈ ಬಿಡಲಾಗಿದೆ.

ಇಲ್ಲಿ ಕಾಮನ್ ಸೆನ್ಸ್ ಪ್ರಶ್ನೆಯೊಂದಿದೆ. ದೇವರಾಜು ಎನ್ನುವವರು 13-8-1996 ರಲ್ಲಿ ಅರ್ಜಿ ಕೊಡುತ್ತಾರೆ. ನಗರಾಭಿವೃದ್ಧಿ ಇಲಾಖೆಯವರು 3-9-1996 ರಂದು  ಮೂಡಾ ಆಯುಕ್ತರಿಗೆ ಪತ್ರ ಬರೆದು ವರದಿ ಕೇಳುತ್ತಾರೆ.  ಅದಾಗಿ 30-8-1997 ಕ್ಕೆ ಮೂಡಾದವರು ಸರ್ಕಾರಕ್ಕೆ ವರದಿ ನೀಡಿದ್ದಾರೆ. ಕೇವಲ ವರದಿ ನೀಡುವುದಕ್ಕೆ ಒಂದು ವರ್ಷ ತೆಗೆದುಕೊಂಡಿದ್ದಾರೆ. ಅದಾದ ಮೇಲೆ ವಿ.ಬಾಲಸುಬ್ರಮಣ್ಯನ್ ಎಂಬ ಟಫ್ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ  ಈ ಜಮೀನುಗಳೂ ಸೇರಿದಂತೆ ರಾಜ್ಯದ ಸುಮಾರು 19 ಕಡೆ ಭೂ ಸ್ವಾಧೀನದಿಂದ ಕೈ ಬಿಡಲು ತೀರ್ಮಾನಿಸಿದ್ದಾರೆ. ಅಂತಿಮವಾಗಿ 18-5-1998 ರಂದು ಭೂ ಸ್ವಾಧೀನದಿಂದ ಕೈ ಬಿಟ್ಟಿದ್ದಾರೆ.  ಈಗ ನಿಮ್ಮನ್ನು ಕೇಳಬಯಸುತ್ತೇನೆ.  ಮುಖ್ಯಮಂತ್ರಿಯೊ, ಉಪಮುಖ್ಯಮಂತ್ರಿಯೊ ಅಥವಾ ಮಂತ್ರಿಯೊ, ಎಮ್.ಎಲ್.ಎ ಯೊ ಇದ್ದರೆ  ಈ ಪ್ರಕ್ರಿಯೆ ಮುಗಿಸಲು ಎರಡು ವರ್ಷ ತೆಗೆದುಕೊಳ್ಳುತ್ತಿದ್ದರೆ?

ನಾವೇನು ಇಂಥಾ ಜಾಗದಲ್ಲೇ ನಿವೇಶನ ಕೇಳಿಲ್ಲ. ಬಿಜೆಪಿಯವರ ಅವಧಿಯಲ್ಲೇ ಅವರೇ ನಿರ್ಣಯ ಕೈಗೊಂಡು ಕೊಟ್ಟಿರುವ ನಿವೇಶನ ಇದು. ಮತ್ತೇಕೆ ರಾಜ್ಯದ ಜನತೆಯ ಮುಂದೆ ಸುಳ್ಳು ಹೇಳಿ ಸಿಕ್ಕಿಕೊಳ್ಳುತ್ತಿದ್ದೀರಿ..?, ಕುಟುಂಬದಲ್ಲಿ ಅನ್ಯೋನ್ಯರಾಗಿದ್ದವರನ್ನು ಪರಸ್ಪರ ಎತ್ತಿ ಕಟ್ಟಿ ಮನೆ ಮುರುಕ ರಾಜಕಾರಣ ಮಾಡಿದರೆ ರಾಜ್ಯದ ಜನತೆ ಯಾವುದೇ ಕಾರಣಕ್ಕೂ ಸಹಿಸಲ್ಲ.

ಇದರಲ್ಲಿ ನನ್ನದಾಗಲಿ, ನಮ್ಮ ಪತ್ನಿಯವರದ್ದಾಗಲಿ, ನಮ್ಮ ಬಾಮೈದುನನ ಪಾತ್ರ ಎಲ್ಲಿದೆ ಹೇಳಿ?: ದಾಖಲೆಗಳನ್ನು ಮುಂದಿಟ್ಟು ಸಿಎಂ ಪ್ರಶ್ನಿಸಿದರು.

(Copy six)


ಮುಖ್ಯಮಂತ್ರಿಗಳ MUDA ಕುರಿತ ಪತ್ರಿಕಾ ಗೋಷ್ಠಿಯ ಇತರೆ ಟಿಪ್ಪಣಿಗಳು...


ಬಿಜೆಪಿ ಜೆಡಿಎಸ್‌ಗಳೆರಡೂ ಸೇರಿಕೊಂಡು ನನ್ನ ಜೀವಮಾನದಲ್ಲೆ ಕಾಣದಷ್ಟು ಕೆಟ್ಟ ರಾಜಕಾರಣವನ್ನು ಮಾಡುತ್ತಿವೆ. ವಿಚಾರವೇ ಇಲ್ಲದೆ ವೈಯಕ್ತಿಕವಾಗಿ ತೇಜೋವಧೆ ಮಾಡುವ ಕೆಲಸವನ್ನು ಮಾಡುತ್ತಿವೆ. ಕರ್ನಾಟಕದಲ್ಲಿ ಕುಸಿದು ಹೋಗುತ್ತಿರುವ ಜನಪ್ರಿಯತೆಯನ್ನು ಮರುಸ್ಥಾಪಿಸಿಕೊಳ್ಳಲು ಸಾವಿರ ಸಲ ಸುಳ್ಳು ಹೇಳಿದರೆ ನಿಜವೂ ಸುಳ್ಳಿನಂತೆ ಆಗುತ್ತದೆ ಎಂಬ ಹಿಟ್ಲರ್‌ವಾದಿ ಹಾಗೂ ಭಾರತದ ಸಂದರ್ಭದಲ್ಲಿ ಪೇಶ್ವೆವಾದಿ ಮನಸ್ಥಿತಿಯನ್ನು ಬಿಜೆಪಿಯವರು ಹೊಂದಿದ್ದಾರೆ. ಅದನ್ನು ನಮ್ಮ ರಾಜ್ಯದಲ್ಲಿ ಪ್ರತಿಪಾದಿಸುತ್ತಿದ್ದಾರೆ.

ಹಿಂದೆ ದೇವರಾಜ ಅರಸರ ವಿಚಾರದಲ್ಲೂ ಹೀಗೆ ಆಯಿತು. ಧರ್ಮಸಿಂಗ್ ಅವರ ವಿಚಾರದಲ್ಲೂ ಹೀಗೆ ಆಯಿತು. ಅದಕ್ಕೂ ಮೊದಲು ಕಲ್ಯಾಣದ ಬಿಜ್ಜಳನನ್ನು ಇದೆ ಪೇಶ್ವೆ ಮನಸ್ಥಿತಿಯ ಜನರೆ ಕೊಲೆ ಮಾಡಿದರು. ಈಗ ನನ್ನ ವಿಚಾರಕ್ಕೂ ಬಂದಿದ್ದೀರಿ. ಅಡ್ಡಿಯಿಲ್ಲ ಬನ್ನಿ, ಬಂದದ್ದು ಒಳ್ಳೆಯದೆ ಆಯಿತು. ರಾಜ್ಯದ ಜನ ನೋಡುತ್ತಿದ್ದಾರೆ. ದಮನಿತ ವರ್ಗಗಳ ಜನಸಮೂಹದಿಂದ ಬಂದವರು ರಾಜಕಾರಣವನ್ನೆ ಮಾಡಬಾರದೆಂಬ ನಿಲುವು ಇವರದು. ಆದ್ದರಿಂದಲೆ ಈ ರೀತಿ ಮುಡಾ ವಿಚಾರದಲ್ಲಿ ಒಂದು ಗುಲಗಂಜಿಯಷ್ಟು ನ್ಯೂನ್ಯತೆಯಿಲ್ಲದಿದ್ದರೂ ದೊಡ್ಡ ಸುದ್ದಿ ಮಾಡಿಕೊಂಡು ಕೂತಿದ್ದಾರೆ.

 

ನಿಮ್ಮ ಹಿಂದೆ ನಿಂತು ಆಟ ಆಡುತ್ತಿರುವ ಸೈದ್ಧಾಂತಿಕ ಗುರುಗಳಿಗೆ ಕರ್ನಾಟಕದ ಜನರ ಮನಸ್ಥಿತಿ ಅರ್ಥವಾಗುತ್ತಿದೆ. ಜನ ನಮ್ಮಿಂದ ದೂರ ಸರಿಯುತ್ತಿದ್ದಾರೆ ಎಂದು ಅವರಿಗೆ ಗೊತ್ತಿದೆ.  ಆದ್ದರಿಂದಲೆ ಕಾಗಕ್ಕ-ಗೂಬಕ್ಕನ ಕಥೆ ಕಟ್ಟಿ ಜನರನ್ನು ನಂಬಿಸಲು ಹೊರಟಿದ್ದಾರೆ.             ಬಿಜೆಪಿ- ಜೆಡಿಎಸ್‌ನವರ ಮೆದುಳು ಖಾಲಿಯಾಗಿದೆ. ಬೌದ್ಧಿಕವಾಗಿ ದಿವಾಳಿಯಾಗಿದ್ದಾರೆ. ಹಾಲಿನ ರೇಟು ಹೆಚ್ಚು ಮಾಡಲಿಲ್ಲ ಎಂದು ತಿಳಿಸಿ ಹೇಳಿದರೂ ಹಾಲಿನ ರೇಟು ಹೆಚ್ಚು ಮಾಡಿದರು. 


ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿಗಳ ಪಾತ್ರ ನಯಾಪೈಸೆಯಷ್ಟು ಇರುವುದಿಲ್ಲವೆಂದು ಬಿಡಿಸಿ ಹೇಳಿದರೂ, ದಾಖಲೆಗಳನ್ನು ಕೊಟ್ಟರೂ ನಂಬಲು ತಯಾರಿಲ್ಲ. ಮೈಸೂರು ಮುಡಾದ ವಿಚಾರದಲ್ಲಿಯೂ ಹಾಗೆ ನಡೆದುಕೊಳ್ಳುತ್ತಿದ್ದಾರೆ.


ಸದನದಲ್ಲಿ ಗಲಾಟೆ ಮಾಡಿದ್ದು, ಅಸಂಸದೀಯವಾಗಿ ನಡೆದುಕೊಂಡಿದ್ದು, ಸಾರ್ವಜನಿಕರ ಹಣ ಪೋಲು ಮಾಡಿದ್ದು ಬಿಟ್ಟರೆ ಒಂದೇ ಒಂದು ದಾಖಲೆ ನೀಡಲಿಲ್ಲ. ದಾಖಲೆ ನೀಡದೆ, ಏನಾದರೂ ದಾಖಲೆಗಳಿದ್ದರೆ ಅವುಗಳನ್ನು ಬಿಡುಗಡೆ ಮಾಡದೆ ಬರೀ ಜಕ್ಕರಾಯನಕೆರೆ ಭಾಷಣ ಮಾಡುವುದು, ಅವರು ಭಾಷಣ ಮಾಡುವುದನ್ನು ನೀವು ವರದಿ ಮಾಡುವುದನ್ನು ಬಿಟ್ಟರೆ  ಬೇರೆ ಏನಾದರೂ ನಡೆಯಿತಾ?


ನಾನೂ ಕೂಡ ವಿರೋಧ ಪಕ್ಷದ ನಾಯಕನಾಗಿ ಸುದೀರ್ಘ ಅವಧಿ ಕೆಲಸ ಮಾಡಿದ್ದೇನೆ. ದಾಖಲೆಗಳಿಲ್ಲದೆ ಒಂದೇ ಒಂದು ಮಾತನ್ನು ನಾನು ಆಡಿಲ್ಲ. 


ಆದರೆ ಬಿಜೆಪಿ ಜೆಡಿಎಸ್‌ನವರು ಯಾವುದೇ ದಾಖಲೆಗಳಿಲ್ಲದೆ ಎರಡು ವಾರಗಳ ಕಾಲ ಸದನವನ್ನು ದಿಕ್ಕುತಪ್ಪಿಸಿದರು. ಸಂಸದೀಯ ಪ್ರಜಾಪ್ರಭುತ್ವವು ಯಾವುದಕ್ಕೆ ಮಾದರಿಯಾಗಬಾರದೊ ಅದಕ್ಕೆ ಬಿಜೆಪಿಯವರು ಮಾದರಿಯಾದರು. ಇಂಥ ಬೇಜವಾಬ್ಧಾರಿ ಮತ್ತು ಚೈಲ್ಡಿಷ್ ವರ್ತನೆಯ ವಿರೋಧ ಪಕ್ಷವನ್ನು ನಾನು ನೋಡಿಯೇ ಇಲ್ಲ.

ಜನ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಮನುವಾದವನ್ನು ತಿರಸ್ಕರಿಸಲು ಪ್ರಾರಂಭಿಸಿದ್ದಾರೆ. ಇದು ನಿಮಗೂ ಅರ್ಥವಾಗುತ್ತಿದೆ. ದಿನದಿಂದ ದಿನಕ್ಕೆ ಇವರ ಮತಗಳಿಕೆ ಪ್ರಮಾಣ ಕಡಿಮೆಯಾಗುತ್ತಿದೆ. ಹಾಗಾಗಿಯೆ ಮುಖ್ಯಮಂತ್ರಿಯವರನ್ನು ಕೇಂದ್ರದಲ್ಲಿಟ್ಟುಕೊAಡು ವೈಯಕ್ತಿಕ ದಾಳಿ ಪ್ರಾರಂಭಿಸಿದ್ದಾರೆ. ಒಳ್ಳೆಯದೆ ಯಾವುದೂ ಗಾಯದ ರೂಪದಲ್ಲೆ ಉಳಿಯಬಾರದು. ಗಾಯದ ಒಳಗಿರುವ ಕೆಟ್ಟ ರಕ್ತ ಒಡೆದು ಹೊರ ಬರಬೇಕು. ಆಗಲೇ ಮನುಷ್ಯ ಆರೋಗ್ಯವಂತನಾಗುವುದು.  ಹಾಗೆಯೆ ಬಿಜೆಪಿ-ಜೆಡಿಎಸ್‌ನವರ ಕೋಮುವಾದಿ-ಫ್ಯೂಡಲ್ ತಲೆಯೊಳಗೂ ದ್ವೇಷ, ಅಸಹನೆ ಎಂಬ ಕೀವು-ಕೆಟ್ಟ ರಕ್ತ ತುಂಬಿದೆ. ಅದು ಒಡೆದು ಹೊರ ಬರಬೇಕು ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime

HL

sports

HL

others