ಗಮನಿಸಿ: ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ
ಗಮನಿಸಿ: ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಜುಲೈ 26): ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ & ವಿಡಿಯೋಗ್ರಫಿ ಕುರಿತ 30 ದಿನಗಳ ಉಚಿತ ತರಬೇತಿಯು ಆಗಸ್ಟ್‌ 01 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಹಾಗೂ ಡಿಎಸ್‌ಎಲ್‌ಆರ್‌ ಕ್ಯಾಮೆರಾವನ್ನು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime

HL

sports

HL

others