ಮೊಬೈಲ್ ಚಾರ್ಜ್‌ಗೆ ಹಾಕುವ ವೇಳೆ ಕರೆಂಟ್ ಶಾಕ್.. ಬಾಲಕಿ ಸಾವು..!
ಮೊಬೈಲ್ ಚಾರ್ಜ್‌ಗೆ ಹಾಕುವ ವೇಳೆ ಕರೆಂಟ್ ಶಾಕ್.. ಬಾಲಕಿ ಸಾವು..!

ಖಮ್ಮಂ, (ಜುಲೈ ‌27); ಮೊಬೈಲ್ ಚಾರ್ಜ್‌ಗೆ ಹಾಕುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವನ್ನಪ್ಪಿರುವ ಘಟನೆ ತೆಲಂಗಾಣ ರಾಜ್ಯದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ಸಂಭವಿಸಿದೆ.

ಮೃತ ದುರ್ದೈವಿಯನ್ನು 09 ವರ್ಷದ ಅಂಜಲಿ ಎಂದು ಗುರುತಿಸಲಾಗಿದೆ.

ಮೊಬೈಲ್​​​ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಅಂಜಲಿ ಮೊಬೈಲ್ ಚಾರ್ಜ್ ಮಾಡಲು ಹೋಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ. 

ಈ ವೇಳೆ ಬಿದ್ದು ಒದ್ದಾಡುತ್ತಿರುವ ಬಾಲಕಿಯನ್ನು ಗಮನಿಸಿದ ಆಕೆಯ ಪೋಷಕರು ತಕ್ಷಣ ಗ್ರಾಮದ ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಬಾಲಕಿ ಆಟವಾಡುತ್ತಿದ್ದಂತೆ ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ವರದಿಯಾಗಿದೆ.

ಮೃತ ಬಾಲಕಿ ಅಂಜಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು ಎನ್ನಲಾಗಿದ್ದು, ಘಟನೆ ಕುರಿತು ತಂದೆ ರಾಮಕೃಷ್ಣ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

-->

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime