Budget24: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯ: ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ
Budget24: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯ: ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ

ಬೆಂ.ಗ್ರಾ.ಜಿಲ್ಲೆ, (ಜುಲೈ.27); ಕೇಂದ್ರ ಬಜೆಟ್‌ನಲ್ಲಿ ರಾಜ್ಯದ ಯಾವುದೇ ಯೋಜನೆಗಳಿಗೆ ಅನುದಾನ ನೀಡಿಲ್ಲವೆಂದು ಆರೋಪಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆಎಚ್ ಮುನಿಯಪ್ಪನವರ ನೇತೃತ್ವದಲ್ಲಿ ದೇವನಹಳ್ಳಿಯಲ್ಲಿ ಚೊಂಬು ಹಿಡಿದು ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್‌ನಲ್ಲಿ ರಾಜ್ಯವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಕಳಸಾ ಬಂಡೂರಿ, ಮಹದಾಯಿ, ಎತ್ತಿನಹೊಳೆ, ಕೃಷ್ಣಾ ಮೇಲ್ದಂಡೆ ಮತ್ತು ಮೇಕೆದಾಟು ಅಂತಹ ಪ್ರಮುಖ ನೀರಾವರಿ ಯೋಜನೆಗಳಿಗೆ ಒಂದೇ ಒಂದು ಪೈಸೆಯನ್ನೂ ಕೊಟ್ಟಿಲ್ಲ. ರಾಜ್ಯಕ್ಕೆ ಏನು ಸಿಗುತ್ತದೆ ಎಂಬ ಕುತೂಹಲದಲ್ಲಿದ್ದ ಮತದಾರರಿಗೆ ನಿರ್ಮಲಾ ಸೀತಾರಾಮನ್‌ ಅವರು ಚೊಂಬು ಕೊಟ್ಟಿದ್ದಾರೆ.

ನಮ್ಮ ಮೆಟ್ರೊ ಕಾಮಗಾರಿ, ರೈಲ್ವೆ ಯೋಜನೆಗಳಿಗೂ ಅನುದಾನ ನೀಡಿಲ್ಲ. ಬೆಂಗಳೂರು ಉಪನಗರ ರೈಲು ಯೋಜನೆಗೆ ಮಾತ್ರ ರೂ.350 ಕೋಟಿ ನೀಡಿದ್ದಾರೆ. ಬಜೆಟ್‌ನಲ್ಲಿ ಬಿಹಾರ ಮತ್ತು ಆಂಧ್ರಪ್ರದೇಶ ರಾಜ್ಯಗಳಿಗೆ ಹೆಚ್ಚು ಅನುದಾನ ನೀಡಲಾಗಿದೆ. ರಾಜ್ಯದಿಂದ ಆಯ್ಕೆಯಾಗಿರುವ 19 ಮಂದಿ ಎನ್‌ಡಿಎ ಸಂಸದರಿಂದ ಯಾವುದೇ ಪ್ರಯೋಜನವಿಲ್ಲ. ಅವರಿಗೆ ಒಂದು ರೂಪಾಯಿ ತರಲೂ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಕೆಎಚ್ ಮುನಿಯಪ್ಪ ಮಾತನಾಡಿ, ರಾಜ್ಯಕ್ಕೆ ನೆರೆ ಬಂದಾಗ ನಾವು ಬೇಡಿಕೊಂಡರೂ ಹಣ ಬಿಡುಗಡೆ ಮಾಡಲಿಲ್ಲ. ಈಗ ಬೇರೆ ರಾಜ್ಯಗಳಿಗೆ ವಿಪತ್ತು ನಿಧಿ ಹೆಸರಿನಲ್ಲಿ ರೂ.11 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ. ಇದು ಕುರ್ಚಿ ಉಳಿಸಿಕೊಳ್ಳುವ ಬಜೆಟ್‌ ಆಗಿದೆ. ಯಾವ ರಾಜ್ಯದವರು ಬಿಜೆಪಿಯನ್ನು ತಿರಸ್ಕರಿಸಿದ್ದಾರೋ ಅವರಿಗೆ ಈ ಬಜೆಟ್‌ನಲ್ಲಿ ಹೆಚ್ಚು ಆದ್ಯತೆ ನೀಡಲಾಗಿದೆ’ ಎಂದು ದೂರಿದರು.

ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸಿ.ಆರ್.ಗೌಡ, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಮುಖಂಡರಾದ ಪ್ರಸನ್ನ ಕುಮಾರ್, ವಿ.ಶಾಂತಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಾಗೇಶ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್ ಪಟೇಲ್ ಸೇರಿಸಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

others

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education