ವಿದ್ಯಾರ್ಥಿಗಳು ತಮ್ಮ ಜ್ಞಾನದ ಶಕ್ತಿಯನ್ನು ಅರಿಯಬೇಕು: ಸ್ವಾಮಿ ನಿರ್ಭಯಾನಂದ ಸರಸ್ವತಿ
ವಿದ್ಯಾರ್ಥಿಗಳು ತಮ್ಮ ಜ್ಞಾನದ ಶಕ್ತಿಯನ್ನು ಅರಿಯಬೇಕು: ಸ್ವಾಮಿ ನಿರ್ಭಯಾನಂದ ಸರಸ್ವತಿ

ಬಳ್ಳಾರಿ, (ಜು.27): ಇಂದಿನ ಪೀಳಿಗೆಯ ವಿದ್ಯಾರ್ಥಿಗಳು ತಮ್ಮಲ್ಲಿರುವ ಅಗಾಧ ಜ್ಞಾನದ ಶಕ್ತಿಯನ್ನು ಅರಿತುಕೊಂಡರೆ ಮಾತ್ರ ತಾವು ಅಂದುಕೊಂಡಿದ್ದನ್ನು ಸಾಧಿಸಬಹುದು ಎಂದು ಗದಗ ಮತ್ತು ವಿಜಯನಗರ ಜಿಲ್ಲೆಯ ರಾಮಕೃಷ್ಣ ವಿವೇಕಾನಂದ ಆಶ್ರಮ ಅಧ್ಯಕ್ಷರಾದ ಸ್ವಾಮಿ ನಿರ್ಭಯಾನಂದ ಸರಸ್ವತಿ ಅವರು ಹೇಳಿದರು.

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಯಲು ರಂಗಮಂದಿರ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವವಿದ್ಯಾಲಯದ 15ನೇ ಸಂಸ್ಥಾಪನಾ ದಿನ-2024 ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಯಾರೂ ಅಶಕ್ತರಲ್ಲ, ತಮ್ಮನ್ನು ತಾವು ಕೀಳರಿಮೆ ಮನೋಭಾವನೆಯಿಂದ ಚಿಂತಿಸುತ್ತಿದ್ದಾರೆ. ಇದರಿಂದ ತಮ್ಮ ಗುರಿಯನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಸ್ವಾಮಿವಿವೇಕಾನಂದರ ಶಕ್ತಿಯೇ ಜೀವನ, ದೌರ್ಬಲ್ಯವೇ ಮರಣ ಎಂಬ ನಾಣ್ನುಡಿಯಂತೆ, ವಿದ್ಯಾರ್ಥಿಗಳು ತಮ್ಮ ಜ್ಞಾನದ ಶಕ್ತಿಯನ್ನು ಅರಿತು ನನ್ನಿಂದ ಸಾಧ್ಯವಿದೆ ಎಂಬ ಭಾವನೆಯನ್ನು ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ನಿರಂತರ ಬೆರೆತಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ವಿದೇಶಗಳಲ್ಲಿ ಭಾರತ ದೇಶದ ಶಿಕ್ಷಣಾವಸ್ಥೆಗೆ ಉನ್ನತ ಸ್ಥಾನವಿದೆ. ಪಾಶ್ಚö್ಯತರ ಆಗಮನಕ್ಕಿಂತ ಹಿಂದೆಯೇ ಭಾರತ ದೇಶದಲ್ಲಿ ಶಿಕ್ಷಣವು ಉನ್ನತ ಮಟ್ಟದಲ್ಲಿತ್ತು. ದೇಶದಲ್ಲಿ ನವ ಪ್ರತಿಭೆಗಳಿಗೆ ಕೊರತೆಯಿಲ್ಲ. ಜಗತ್ತಿಗೆ ವಿಶ್ವವಿದ್ಯಾಲಯಗಳು ಹೇಗೆ ಇರಬೇಕು ಎಂಬುದನ್ನು ತಿಳಿಸಿಕೊಟ್ಟ ದೇಶ ಎಂದರೆ ಅದು ಭಾರತ ದೇಶವಾಗಿದೆ ಎಂದರು.

ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಜೀವನ ರೂಪಿಸಿಕೊಟ್ಟಂತಹ ಪವಿತ್ರ ಸ್ಥಳಗಳು, ಓದು ಕಲಿತು ಉನ್ನತ ಸ್ಥಾನದಲ್ಲಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾಲಯಗಳನ್ನು ಮರೆಯಬಾರದು ಎಂದು ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳು ಗುರುಗಳನ್ನು ಪ್ರೀತಿಸುವ ಗುಣ ಅಳವಡಿಸಿಕೊಳ್ಳಬೇಕು. ಅವರ ವಿಷಯದಲ್ಲಿ ಹೆಚ್ಚಿನ ಆಸಕ್ತಿ ಬೆಳೆಯುತ್ತದೆ. ಗುರುಗಳು ಹೇಳಿದ ಗುರುವಾಕ್ಯದಲ್ಲಿ ಶ್ರದ್ಧೆ ವಹಿಸಬೇಕು. ಅಂದಾಗ ಮಾತ್ರ ವಿದ್ಯಾರ್ಥಿಗಳು ಸಮಾಜದಲ್ಲಿ ಅಭಿವೃದ್ಧಿ ಹೊಂದುತ್ತಾರೆ ಎಂದರು.

ವಿಎಸ್‌ಕೆ ವಿಶ್ವವಿದ್ಯಾಲಯದ ಕುಲಸಚಿವ ರುದ್ರೇಶ್.ಎಸ್.ಎನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಗುಲಬರ್ಗಾ ವಿಶ್ವವಿದ್ಯಾಲಯದಿಂದ ಹೊರಬಂದು, ಇಂದಿಗೆ 14 ವರ್ಷ ತುಂಬಿ, 15 ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ವಿಶ್ವವಿದ್ಯಾಲಯದಲ್ಲಿ ಗುಣಮಟ್ಟದ ಭೋದನೆ ನೀಡುವುದರ ಜೊತೆಗೆ ವಿದ್ಯಾರ್ಥಿಗಳ ಶೈಕ್ಷಣಿಕವಾಗಿ ಅಭಿವೃದ್ಧಿಗೆ ಪೂರಕವಾಗಿದೆ ಎಂದರು.

ಪ್ರಥಮದಲ್ಲಿ ಕೇವಲ 4 ವಿಭಾಗಗಳ ಮೂಲಕ ಪ್ರಾರಂಭಗೊಂಡ ವಿಶ್ವವಿದ್ಯಾಲಯವು ಪ್ರಸ್ತುತ 29 ವಿಭಾಗಗಳನ್ನು ಒಳಗೊಂಡಿದ್ದು, ಇನ್ನು ಹಲವಾರು ವಿಭಿನ್ನ ವಿಷಯಗಳನ್ನು ಕಲ್ಪಿಸಲಾಗುವುದು. ವಿಶ್ವವಿದ್ಯಾಲಯದ ಆವರಣದಲ್ಲಿ ಹಸರೀಕರಣಕ್ಕೆ ಒತ್ತು ನೀಡಲಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ವಿಶ್ವವಿದ್ಯಾಲಯವು ಉನ್ನತ ಮಟ್ಟಕ್ಕೆ ಬೆಳೆಯಲಿದೆ ಎಂದು ಹೇಳಿದರು.

ವಿಎಸ್‌ಕೆ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ತಿಪ್ಪೇರುದ್ರಪ್ಪ ಜೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ವಸತಿನಿಲಯಗಳ ನಾಮಕರಣ, ವಿವಿಧ ಸೌಲಭ್ಯಗಳನ್ನೊಳಗೊಂಡ ಕಟ್ಟಡಗಳನ್ನು ವಿದ್ಯುಕ್ತವಾಗಿ ಉದ್ಘಾಟನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ.ರವಿ, ವಿಜಯಪುರ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ತುಳಸಿಮಾಲ ಬಿ.ಕೆ., ಹಾವೇರಿಯ ಕರ್ನಾಟಕ ಜನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಭಾಸ್ಕರ್ ಟಿ.ಎಮ್ ಹಾಗೂ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ.ಮಂಜಪ್ಪ ಡಿ.ಹೊಸಮನೆ, ಪ್ರೊ.ಎಮ್.ಎಸ್.ಸುಭಾಷ್, ಕುಲಸಚಿವ(ಮೌಲ್ಯಮಾಪನ) ಪ್ರೊ.ರಮೇಶ್ ಓ.ಓಲೇಕಾರ, ವಿತ್ತಾಧಿಕಾರಿ ನಾಗರಾಜ.

ವಿಶ್ವವಿದ್ಯಾಲಯದ ಮಾಜಿ ಕುಲಸಚಿವರುಗಳು, ಕುಲಸಚಿವರು(ಮೌಲ್ಯಮಾಪನ), ಹಣಕಾಸು ಅಧಿಕಾರಿಗಳು ಹಾಗೂ ವಿವಿಯ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರುಗಳು ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

others

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education