Doddaballapura; ಬೀಡಿಕೆರೆ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ
Doddaballapura; ಬೀಡಿಕೆರೆ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ

ಚಿಕ್ಕಬಳ್ಳಾಪುರ, (ಜುಲೈ ‌27); ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿಯನ್ನು ದೊಡ್ಡಬಳ್ಳಾಪುರ ತಾಲೂಕಿನ ಬೀಡಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀಡಿ ಗೌರವಿಸಲಾಗಿದೆ. 

ಚಿಕ್ಕ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಆವರಣದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಮಂಗಳಕುಮಾರಿ.ಎಂ.ಎಚ್ ಅವರು ಪ್ರಶಸ್ತಿ ಸ್ವೀಕರಿಸಿದರು.

ಈ ಪ್ರಶಸ್ತಿಯು ರೂ.10,000 ನಗದು ಹಾಗೂ ಆಕರ್ಷಕ ಪಾರಿತೋಷಕ ಒಳಗೊಂಡಿದೆ. ಮತ್ತು ಶಾಲೆಯ ಆಕರ್ಷಕ ಪ್ರದರ್ಶನ ಫೋಟೋಗಳನ್ನು ಟ್ರಸ್ಟ್ ನ ವೆಬೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಬೀಡಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎರಡು ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿದ್ದು, ಅನೇಕ ಅತ್ಯಾಧುನಿಕ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಶಾಲೆಯಾಗಿದೆ. 

2016ರಲ್ಲಿ ಕೇವಲ ಎರಡು ಬೋಧನಾ ಕೂಠಡಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಾಲೆಯು ಇಂದು ಅತ್ಯಂತ ವಿಶಾಲವಾದ ಶಾಲಾ ಕೊಠಡಿಗಳು ಮತ್ತು ಅದಕ್ಕೆ ಬೇಕಾದ ಪೀಠೋಪಕರಣಗಳು, ಆಡಿಟೋರಿಯಂ, ವಿಶಾಲವಾದ ಡೈನಿಂಗ್ ಹಾಲ್, ವಿದ್ಯಾರ್ಥಿಗಳಿಗೆ ಆಟೋಪಕರಣಗಳು, ನೂತನವಾದ ಬ್ಯಾಸ್ಕೆಟ್ಬಾಲ್ ಅಂಕಣ ಮುಂತಾದ ಅನೇಕ ಸೌಲಭ್ಯಗಳನ್ನು ಹೊಂದಿರುವ ಶಾಲೆಯಾಗಿದೆ. 

ಈ ಶಾಲೆಯಲ್ಲಿ ಪ್ರಸ್ತುತ ನಾಲ್ಕು ಮಂದಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳ ಕಲಿಕಾ ಪ್ರಗತಿಯು ಕೂಡ ಅತ್ಯಂತ ಉನ್ನತವಾಗಿದೆ. 

ಕಳೆದ ಸಾಲಿನ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಈ ಶಾಲೆಯ ವಿದ್ಯಾರ್ಥಿಗಳು ಅನೇಕ ಪ್ರಥಮ ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ. ಮುಂದುವರೆದು ಶಾಲಾ ಆವರಣವು ಅತ್ಯಂತ ಆಕರ್ಷಣೀಯ ಹಚ್ಚಹಸಿರಿನಿಂದ ಕೂಡಿರುವ ಪರಿಸರವಾಗಿದೆ. 

ಶಾಲಾ ಆವರಣದಲ್ಲಿ ವಿವಿಧ ಜಾತಿಯ 300ಕ್ಕೂ ಹೆಚ್ಚು ಗಿಡಮರಗಳನ್ನು ನೆಟ್ಟು ಪೋಷಿಸಲಾಗುತ್ತಿದೆ. ಅನೇಕ ಔಷಧಿಯ ಗಿಡಗಳನ್ನು ಸಹ ನೆಟ್ಟಿರುವುದು ಪ್ರಶಂಸನೀಯ. 

ಒಟ್ಟಾರೆಯಾಗಿ ಶ್ರೀ ಸತ್ಯ ಸಾಯಿ ಟ್ರಸ್ಟ್ ಮುದ್ದೇನಹಳ್ಳಿ ಇವರು ಈ ಶಾಲೆಯು ಸರ್ವತೋಮುಖ ಅಭಿವೃದ್ಧಿಯನ್ನು ಗಮನಿಸಿ 2024ನೇ ಸಾಲಿನ ಹಸಿರು ಶಾಲಾ ಅಭ್ಯುದಯ ಪ್ರಶಸ್ತಿಯನ್ನು ನೀಡಿರುತ್ತಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

others

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education