ವಯನಾಡು, (ಆಗಸ್ಟ್.02); ಸಂತ್ರಸ್ತರಿಗೆ ಕಾಂಗ್ರೆಸ್ ಪಕ್ಷ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಿಕೊಡಲಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
ಮೂರು ದಿನಗಳ ಹಿಂದೆ ಜುಲೈ 30 ರಂದು ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಗುರುವಾರ ರಾತ್ರಿಯ ವೇಳೆಗೆ 190 ಜನರು ಸಾವನ್ನಪ್ಪಿದ್ದಾರೆ ಮತ್ತು 300 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿಯೇ ಬೀಡು ಬಿಟ್ಟಿರುವ ಸಂಸದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಸಹೋದರಿ ಪ್ರಿಯಾಂಕ ಗಾಂಧಿ ವಾದ್ರ ಇಂದು ಗ್ರಾಮಪಂಚಾಯಿತಿ ವಾರು ಅಧಿಕಾರಿಗಳ ಸಭೆ ನಡೆಸಿದ್ದಾರೆ.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಈ ಬಾರಿ ವಯನಾಡಿನಲ್ಲಿ ಸಂಭವಿಸಿದ ವಿನಾಶಕಾರಿ ದುರಂತವನ್ನು ಕೇರಳ ಎಂದು ಕಂಡಿಲ್ಲ. ಈ ದುರಂತವು ವಿಶಿಷ್ಟವಾದ ಮತ್ತು ತುರ್ತು ಪ್ರತಿಕ್ರಿಯೆಯನ್ನು ಬಯಸುವುದರಿಂದ ನಾನು ಈ ವಿಷಯವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡಕ್ಕೂ ಪ್ರಸ್ತಾಪಿಸುತ್ತೇನೆ.
ನಮ್ಮ ತಕ್ಷಣದ ಗಮನ ಜನರ ರಕ್ಷಣೆ, ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳ ಮೇಲೆ ಕೇಂದ್ರೀಕೃತವಾಗಿದೆ. ಸರಕ್ಷಿತ ಸ್ಥಳದಲ್ಲಿ ನಿರ್ಗತಿಕರಿಗೆ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲು ಕಾಂಗ್ರೆಸ್ ಕುಟುಂಬ ಬದ್ಧವಾಗಿದೆ.
ಈ ಕುರಿತು ಅಗತ್ಯವಿರುವ ಸಮಯದಲ್ಲಿ ನಮ್ಮ ಸಹೋದರ ಸಹೋದರಿಯರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳಲು ನಾವು ಸಿದ್ದರಿದ್ದೇವೆ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--
Latest News
others
crime
crime
crime
crime
politics
crime
others
crime
others
others
crime
others
others
others
others
crime
education
crime
crime
others
crime
education
others
others
crime
economy
crime
sports
others