ದೊಡ್ಡಬಳ್ಳಾಪುರ, (ಜುಲೈ.02); ತಾಲೂಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
18 ಸದಸ್ಯತ್ವ ಬಲದ ಅರಳು ಮಲ್ಲಿಗೆ ಗ್ರಾಮಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಅಧಿಕಾರಿ ಅಕ್ಷರ ದಾಸೋಹ ಇಲಾಖೆಯ ಸಹಾಯಕ ನಿರ್ದೇಶಕಿ ದ್ರಾಕ್ಷಾಯಿಣಿ, ಸಹಾಯಕ ಚುನಾವಣೆ ಅಧಿಕಾರಿ ಪಿಡಿಒ ಶಶಿಧರ್ ನೇತೃತ್ವದಲ್ಲಿ ಚುನಾವಣೆ ನಡೆಸಲಾಯಿತು.
ಇದರಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರ್ಮಲಾ ಸಿದ್ದೇಗೌಡ ಮತ್ತು ಮಂಜುಳಾ ಸ್ಪರ್ದಿಸಿದ್ದು, ಮಂಜುಳಾ 07 ಮತ ಪಡೆದರೆ, 11 ಮತಗಳನ್ನು ಪಡೆದ ನಿರ್ಮಲಾ ಸಿದ್ದೇಗೌಡ ಅಧ್ಯಕ್ಷರಾಗಿ ಆಯ್ಕೆಯಾದರು.
ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ದೃವಕುಮಾರ್ ಹಾಗೂ ವೆಂಕಟೇಶ್ ಸ್ಪರ್ಧಿಸಿದ್ದು, ವೆಂಕಟೇಶ್ ಅವರು 08 ಮತಗಳನ್ನು ಪಡೆದರೆ, ದೃವ ಕುಮಾರ್ ಅವರು 10 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನೂತನವಾಗಿ ಆಯ್ಕೆಯಾದ ನಿರ್ಮಲಾ ಸಿದ್ದೇಗೌಡ ಹಾಗೂ ದೃವ ಕುಮಾರ್ ಅವರನ್ನು ನಗರಸಭೆ ಸದಸ್ಯರಾದ ಹೆಚ್.ಎಸ್.ಶಿವಶಂಕರ್, ಮೋಹನ್, ಅಖಿಲೇಶ್, ಮುಖಂಡರಾದ ಕುಮಾರ್, ಭೀಮಣ್ಣ, ದಯಾನಂದ್, ಲೋಕೇಶ್ ಮತ್ತಿತರರು ಅಭಿನಂದನೆ ಸಲ್ಲಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
crime
crime
crime
crime
politics
crime
others
crime
others
others
crime
others
others
others
others
crime
education
crime
crime
others
crime
education
others
others
crime
economy
crime
sports
others